Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಕ್ತ-ನ್ಯಾಯ ಸಮ್ಮತ ಚುನಾವಣೆಗೆ...

ಮುಕ್ತ-ನ್ಯಾಯ ಸಮ್ಮತ ಚುನಾವಣೆಗೆ ಸಿದ್ಧತೆ: ಚುನಾವಣಾಧಿಕಾರಿ ಮಹೇಶ್ವರ್ ರಾವ್

ಮೇ 28 ರಂದು ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ22 May 2018 6:01 PM IST
share
ಮುಕ್ತ-ನ್ಯಾಯ ಸಮ್ಮತ ಚುನಾವಣೆಗೆ ಸಿದ್ಧತೆ: ಚುನಾವಣಾಧಿಕಾರಿ ಮಹೇಶ್ವರ್ ರಾವ್

ಬೆಂಗಳೂರು, ಮೇ 22: ಮತದಾರರ ಗುರುತಿನ ಚೀಟಿ ಪತ್ತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆ ಮೇ 28ಕ್ಕೆ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಒಟ್ಟು 421 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಆ ಪೈಕಿ 4-ಕ್ಲಿಷ್ಟಕರ, 47ಅತಿಸೂಕ್ಷ್ಮ, 186 ಸೂಕ್ಷ್ಮ ಹಾಗೂ 184 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಒಟ್ಟು 2,524 ಮಂದಿ ಮತಗಟ್ಟೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಕ್ಷೇತ್ರದಲ್ಲಿ ಒಟ್ಟು 14 ಮಂದಿ ಅಭ್ಯರ್ಥಿಗಳಿದ್ದು, ಕ್ಷೇತ್ರದಲ್ಲಿ 2.46 ಲಕ್ಷಕ್ಕೂ ಅಧಿಕ ಪುರುಷ, 2.25 ಲಕ್ಷಕ್ಕೂ ಅಧಿಕ ಮಹಿಳೆಯರು ಸೇರಿದಂತೆ 4.71ಲಕ್ಷಕ್ಕೂ ಅಧಿಕ ಮತದಾರರಿದ್ದಾರೆಂದು ಮಹೇಶ್ವರ್ ರಾವ್ ಮಾಹಿತಿ ನೀಡಿದರು.

ಬಿಗಿ ಬಂದೋಬಸ್ತ್: ಇಬ್ಬರು ಡಿಸಿಪಿ, 15 ಕೆಎಸ್ಸಾರ್ಪಿ ತುಕಡಿ, 9 ಎಂಸಿಸಿ, ಫ್ಲೈಯಿಂಗ್ ಸ್ಕ್ವಾಡ್ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದ ಅವರು, ಮೇ 31ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮಹೇಶ್ವರ್ ರಾವ್ ಇದೇ ವೇಳೆ ತಿಳಿಸಿದರು.

ಕ್ಲಿಷ್ಟಕರ, ಅತಿಸೂಕ್ಷ್ಮವಾದ 20 ಮತಗಟ್ಟೆಗಳಲ್ಲಿ ವೆಬ್‌ಕ್ಯಾಸ್ಟಿಂಗ್ ಅಳವಡಿಸಲಾಗಿದೆ. 31 ಮತಗಟ್ಟೆಗಳಿಗೆ ವಿಡಿಯೋ ಗ್ರಾಫರ್‌ಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 421 ಕಂಟ್ರೋಲ್ ಯೂನಿಟ್, 421 ಬ್ಯಾಲೆಟ್ ಯೂನಿಟ್, 421 ವಿವಿ ಪ್ಯಾಟ್‌ಗಳನ್ನು ಬಳಕೆ ಮಾಡಲಾಗುವುದು ಎಂದು ಹೇಳಿದರು

ಗುರುತಿನ ಚೀಟಿ ತನಿಖೆ: ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣ ಸಂಬಂಧ ಈಗಾಗಲೇ ಸಂಬಂಧಪಟ್ಟವರಿಗೆ ಗುರುತಿನ ಚೀಟಿ ಹಿಂದಿರುಗಿಸಲಾಗಿದೆ. ಅಲ್ಲದೆ, ಅವರೆಲ್ಲರ ಬಳಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಡಿಸಿಪಿ ಚೇತನ್ ರಾಥೋಡ್, ರವಿ ಚೆನ್ನಣ್ಣನವರ್ ಈ ಪ್ರಕರಣದ ತನಿಖೆಯನ್ನು ನಡೆಸಲಿದ್ದಾರೆ ಎಂದು ಹೇಳಿದರು.

ಮನೆಯೊಂದರಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿ ಪತ್ತೆ ಹಿನ್ನೆಲೆಯಲ್ಲಿ ಮೇ 12ಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಕೊನೆಕ್ಷಣದಲ್ಲಿ ಮುಂದೂಡಲಾಗಿತ್ತು. ಅಲ್ಲದೆ, ಈ ಪ್ರಕರಣ ಸಂಬಂಧ ಈಗಾಗಲೇ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದರು.

‘ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮಹಿಳಾ ಮತದಾರರು ಹೆಚ್ಚಿರುವ 4 ವಾರ್ಡ್‌ಗಳಲ್ಲಿ ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸದರಿ ಮತಗಟ್ಟೆಗಳಲ್ಲಿ ಪೂರ್ಣಪ್ರಮಾಣದಲ್ಲಿ ಮಹಿಳಾ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಏಳು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ’
-ಮಹೇಶ್ವರ್ ರಾವ್, ಚುನಾವಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X