ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು : ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ,ಮೇ 22: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು, ಉಜಿರೆ ಇದರ ವಾರ್ಷಿಕ ಕ್ರೀಡಾಕೂಟವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ಧ.ಮ. ಎಜುಕೇಶನ್ ಟ್ರಸ್ಟ್ ನ ಕಾರ್ಯನಿರ್ವಾಹಣ ಅಧಿಕಾರಿ ಶಶಿಧರ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಶುಪಾಲರಾದ ಡಾ.ಪ್ರಶಾಂತ್ ಶೆಟ್ಟಿ, ಶ್ರೀ.ಧ.ಮ. ಕಾಲೇಜಿನ ದೈಹಿಕ ನಿರ್ದೇಶಕರಾದ ರಮೇಶ್ ಎಚ್, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಶಾಸಕರನ್ನು ಅಭಿನಂದಿಸಲಾಯಿತು. ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ಬೆಳಾಲು ವಂದಿಸಿದರು.
Next Story





