ಮಹಿಳೆಯರಿಗಾಗಿ ಉಚಿತ ತಪಾಸಣಾ ಶಿಬಿರ
ಉಡುಪಿ, ಮೇ 22: ಕುತ್ಪಾಡಿ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ಪ್ರಸೂತಿ ತಂತ್ರ ಸ್ತ್ರೀರೋಗ ವಿಭಾಗದ ವತಿಯಿಂದ ಹೆಗ್ಗುಂಜೆ ಒಕ್ಕೂಟ ಮತ್ತು ಭಾಗ್ಯಲಕ್ಷ್ಮಿ ಜ್ಞಾನ ವಿಕಾಸ ಕೇಂದ್ರದ ಸಹಯೋಗದಲ್ಲಿ ವಿಶ್ವ ತಾಯಂದಿರ ದಿನದ ಪ್ರಯುಕ್ತ ಮಹಿಳೆಯರಿಗಾಗಿ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರವನ್ನು ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಮೇ 27ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





