Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಳೆ ನೂತನ ಮುಖ್ಯಮಂತ್ರಿಯಾಗಿ...

ನಾಳೆ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ

ಕಾಂಗ್ರೆಸ್ ಗೆ ಎಷ್ಟು? ಜೆಡಿಎಸ್ ಗೆ ಎಷ್ಟು ಸಚಿವ ಸ್ಥಾನ: ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ22 May 2018 8:31 PM IST
share
ನಾಳೆ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ

ಬೆಂಗಳೂರು, ಮೇ 22: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ನಾಳೆ(ಮೇ 23) ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದ ಶಕ್ತಿಕೇಂದ್ರ ವಿಧಾನಸೌಧ ಕಂಗೊಳಿಸುತ್ತಿದೆ.

ಕುಮಾರಸ್ವಾಮಿ ಅವರು ಮೇ 23ರಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದು, ಆ ಬಳಿಕ ರಾಮನಗರದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆಂದು ಗೊತ್ತಾಗಿದೆ.

ಸಂಜೆ 4:30ಕ್ಕೆ ವಿಧಾನಸೌಧದ ಪೂರ್ವದ್ವಾರದಲ್ಲಿನ ವೈಭವೋಪೇತ ಮೆಟ್ಟಿಲುಗಳ ಮೇಲೆ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರಾಜ್ಯಪಾಲ ವಜೂಭಾಯಿ ವಾಲ ಅವರು ಅಧಿಕಾರ ಮತ್ತು ಗೋಪ್ಯತಾ ಪ್ರಮಾಣ ವಚನವನ್ನು ಬೋಧಿಸಲಿದ್ದಾರೆ.

ಆ ಬಳಿಕ ಎಚ್.ಡಿ.ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ. ತದನಂತರ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆಂದು ಹೇಳಲಾಗಿದೆ.

ಮೇ 24ಕ್ಕೆ ವಿಶ್ವಾಸಮತ ಯಾಚನೆ: ಈಗಾಗಲೇ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದಂತೆ ಮೇ 24ಕ್ಕೆ ವಿಧಾನಸಭೆ ಅಧಿವೇಶನ ಕರೆದಿದ್ದು, ವಿಶ್ವಾಸ ಮತಯಾಚನೆ ಮಾಡಲಿದ್ದಾರೆಂದು ವಿಧಾನಸಭೆ ಸಚಿವಾಲಯದ ಅಧಿಕೃತ ಆದೇಶವು ಹೊರಬಿದ್ದಿದೆ.

ಪರಮೇಶ್ವರ್ ಡಿಸಿಎಂ: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣು ಗೋಪಾಲ್ ಪ್ರಕಟಿಸಿದ್ದಾರೆ.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಸಹಮತದೊಂದಿಗೆ ಉಪ ಮುಖ್ಯಮಂತ್ರಿಯಾಗಿ ಪರಮೇಶ್ವರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನ ಕಾಂಗ್ರೆಸ್‌ಗೆ ಹಾಗೂ ಉಪ ಸಭಾಧ್ಯಕ್ಷರ ಸ್ಥಾನ ಜೆಡಿಎಸ್‌ಗೆ ನೀಡುವುದು. ಅದೇ ರೀತಿ ಸಚಿವ ಸಂಪುಟದ 34 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ 22 ಹಾಗೂ ಜೆಡಿಎಸ್ 12(ಮುಖ್ಯಮಂತ್ರಿ ಸೇರಿ) ಸ್ಥಾನಗಳನ್ನು ಹಂಚಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವೇಣುಗೋಪಾಲ್ ಹೇಳಿದರು.

ಲಿಂಗಾಯತರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ವಿಚಾರದ ಕುರಿತು ಇಂದಿನ ಸಭೆಯಲ್ಲಿ ಯಾವುದೆ ಚರ್ಚೆ ನಡೆಸಿಲ್ಲ. ಇನ್ನೆರೆಡು ದಿನಗಳಲ್ಲಿ ಸಮನ್ವಯ ಸಮಿತಿ ರಚನೆ ಮಾಡಲಾಗುವುದು. ಸದನದಲ್ಲಿ ವಿಶ್ವಾಸಮತ ಯಾಚಿಸಿದ ಬಳಿಕ ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಅವರು ತಿಳಿಸಿದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಳೆ ನಾನು ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಲಿದ್ದೇವೆ. ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎಂಬುದರ ಕುರಿತು ನಾಳೆ ಸಂಜೆ ಚರ್ಚೆ ನಡೆಸಿ ಅಂತಿಮಗೊಳಿಸುತ್ತೇವೆ ಎಂದರು.

ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಜೆಡಿಎಸ್ ಶಾಸಕರ ಪಟ್ಟಿ ಇನ್ನೂ ಸಿದ್ಧವಾಗಿಲ್ಲ. ರೈತರ ಸಾಲ ಮನ್ನಾ ಮಾಡುವುದಿಲ್ಲ ಎಂದು ನಾನು ಹೇಳಿಕೆ ನೀಡಿಲ್ಲ. ಸಮ್ಮಿಶ್ರ ಸರಕಾರ ಇರುವ ಕಾರಣ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಯಾವುದೆ ಸಮಸ್ಯೆಯಿಲ್ಲ. ಎಲ್ಲ ವಿಚಾರಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಲಾಗುತ್ತಿದೆ. ಗುರುವಾರ ನೂತನ ಸಚಿವರಿಗೆ ಖಾತೆಗಳ ಹಂಚಿಕೆಯಾಗಲಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಡಿ.ರೇವಣ್ಣ ಭಾಗಿಯಾಗಿದ್ದರು.

ರಮೇಶ್‌ ಕುಮಾರ್ ಸ್ಪೀಕರ್?
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಕೆ.ಆರ್.ರಮೇಶ್‌ ಕುಮಾರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಸಮಾರಂಭದಲ್ಲಿ ಯಾರೆಲ್ಲ ಭಾಗಿ ?
ಕಾಂಗ್ರೆಸ್‌‌ ಪಕ್ಷದ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ , ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌, ದೆಹಲಿ ಸಿಎಂ ಅರವಿಂದ್‌‌ ಕೇಜ್ರಿವಾಲ್‌, ತೆಲಂಗಾಣ ಸಿಎಂ ಕೆಸಿಆರ್‌, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಉತ್ತರಪ್ರದೇಶ ಮಾಜಿ ಸಿಎಂ ಮಾಯಾವತಿ, ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ, ಸಿಪಿಎಂನ ಸೀತಾರಾಮ್‌ ಯಚೂರಿ, ಕೇರಳ ಸಿಎಂ ಪಿಣರಾಯಿ ವಿಜಯನ್‌, ಮಾಜಿ ಸಚಿವ ತೇಜಸ್ವಿ ಯಾದವ್‌ ಭಾಗಿಯಾಗಲಿದ್ದಾರೆ.
ಅಲ್ಲದೇ ಕರ್ನಾಟಕದ ಜೆಡಿಎಸ್‌‌ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X