Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಪ್ಹಾ ವೈರಸ್ ಮುನ್ನೆಚ್ಚರಿಕೆ ವಹಿಸಿ,...

ನಿಪ್ಹಾ ವೈರಸ್ ಮುನ್ನೆಚ್ಚರಿಕೆ ವಹಿಸಿ, ಗಾಬರಿ ಬೇಡ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ22 May 2018 9:19 PM IST
share
ನಿಪ್ಹಾ ವೈರಸ್ ಮುನ್ನೆಚ್ಚರಿಕೆ ವಹಿಸಿ, ಗಾಬರಿ ಬೇಡ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮೇ 22: ನಿಪ್ಹಾ ವೈರಸ್‌ನಿಂದ ಹರಡುವ ಕಾಯಿಲೆ ಬಗ್ಗೆ ಜಿಲ್ಲೆಯ ಜನತೆ ಆತಂಕ ಪಡದೆ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಿಪ್ಹಾ ವೈರಸ್ ನಿಯಂತ್ರಣ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಈಗಾಗಲೇ ಕೇರಳದ ಕ್ಯಾಲಿಕಟ್ ಮತ್ತು ಮಲಪ್ಪುರಂನಲ್ಲಿ ಈ ವೈರಸ್ ಕಾಣಸಿಕೊಂಡಿದ್ದು, ಸೋಂಕು ಹರಡಿದ 96 ಮಂದಿಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಾವಲಿಗಳು ಕಚ್ಚಿದ ಹಣ್ಣಿನಿಂದ ಈ ರೋಗ ಹರಡುತ್ತಿದ್ದು, ಮರದಿಂದ ಪಕ್ಷಿಗಳು ತಿಂದು ಕೆಳಗೆ ಬಿದ್ದ ಹಣ್ಣುಗಳನ್ನು ಯಾರು ಕೂಡ ಸೇವಿಸಬಾರದು ಎಂದು ಅವರು ಹೇಳಿದರು.

ಎಲ್ಲ ಹಣ್ಣುಗಳನ್ನು ಸ್ವಚ್ಛವಾಗಿ ತೊಳೆದು ಸೇವಿಸಬೇಕು ಹಾಗೂ ಸಾಧ್ಯವಾದಷ್ಟೂ ಹಣ್ಣುಗಳ ಸಿಪ್ಪೆತೆಗೆದು ಸೇವನೆ ಮಾಡಬೇಕು. ಕೈಗಳನ್ನು ಸೂಕ್ತ ರೀತಿಯಲ್ಲಿ ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಬಗ್ಗೆ ಸಾಕಷ್ಟು ಜನರಿಗೆ ಮಾಹಿತಿ ನೀಡಬೇಕು ಎಂದು ಅವರು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಪ್ಹಾ ವೈರಸ್ ಸೋಂಕು ತಗುಲಿದ ವ್ಯಕ್ತಿಯಲ್ಲಿ ಜ್ವರ, ತಲೆನೋವು, ವಾಂತಿ, ನಂತರ ಉಸಿರಾಟದ ತೊಂದರೆ ಹಾಗೂ ಮೆದುಳು ಜ್ವರ ಕಾಣಿಸಿಕೊಳ್ಳುತ್ತದೆ. ಇಂತಹ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ಹರಡಿದ ವ್ಯಕ್ತಿಯ ದೇಹದಿಂದ ಹೊರಬರುವ ಎಂಜಲು ಮತ್ತಿತರ ದೇಹದ ದ್ರವ ಮತೊಬ್ಬರ ದೇಹಕ್ಕೆ ಸೇರಿದರೆ ರೋಗ ಹರಡುತ್ತದೆ. ಬಾವಲಿಗಳು ಕಚ್ಚಿರುವ ಹಣ್ಣಿನಿಂದ ಮಾತ್ರವಲ್ಲದೇ, ಅಂತಹ ಹಣ್ಣುಗಳನ್ನು ಸೇವಿಸುವ ಸಾಕು ಪ್ರಾಣಿಗಳಿಂದಲೂ ವೈರಸ್ ಹರಡುವ ಸಾಧ್ಯತೆ ಇದೆ. ಸಾಕು ಪ್ರಾಣಿಗಳಲ್ಲಿ ರೋಗ ಲಕ್ಷಣಗಳಿದ್ದಲ್ಲಿ ಪಶು ವೈದ್ಯರಿಂದ ಸೂಕ್ತ ಪರೀಕ್ಷೆ ಮಾಡಿಸಬೇಕು ಎಂದು ಅವರು ತಿಳಿಸಿದರು.

ಎಲ್ಲ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ನಿಪ್ಹಾ ವೈರಸ್ ಲಕ್ಷಣಗಳ ಕುರಿತು ಮಾಹಿತಿ ನೀಡಬೇಕು ಹಾಗೂ ಕರಪತ್ರಗಳನ್ನು ಮುದ್ರಿಸಿ ಸಾರ್ವಜನಿಕರಿಗೆ ವಿತರಿಸಬೇಕು. ಐಎಂಎ ವತಿಯಿಂದ ಎಲ್ಲಾ ವೈದ್ಯರಿಗೆ ಖಾಯಿಲೆ ಹಾಗೂ ಪ್ರಮಾಣಿತ ಕಾರ್ಯ ವಿಧಾನ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಜಿಲ್ಲಾ ಸರ್ಜನ್ ಡಾ.ಮಧುಸೂದನ್, ಐಎಂಎ ಪ್ರತಿನಿಧಿಗಳು, ಆರೋಗ್ಯ ಇಲಾಖಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ
ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಬರುವ ಸಂಶಯಾಸ್ಪದ ನಿಪ್ಹಾ ವೈರಸ್ ರೋಗಿಯ ವಿವರಗಳನ್ನು ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲೂ ಇಲಾಖೆಯ ವತಿಯಿಂದ ಖಾಸಗಿ/ಸರಕಾರಿ ಆಸ್ಪತ್ರೆ ಗಳಿಗೆ ಲಕ್ಷಣ/ಚಿಕಿತ್ಸೆ ಹಾಗೂ ಸೋಂಕು ನಿಯಂತ್ರಣಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಕ್ರಮ ವಹಿಸಬೇಕು. ಸೂಕ್ತ ಪರೀಕ್ಷಾ ಉಪಕರಣಗಳು ಮತ್ತು ವೈದ್ಯರು ಮತ್ತು ಶುಶ್ರೂಶಕ ಸಿಬ್ಬಂದಿಗಳಿಗೆ ಅಗತ್ಯ ರಕ್ಷಣಾ ಸಾಮಾಗ್ರಿಗಳನ್ನು ಒದಗಿಸ ಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಜಿಲ್ಲಾ ಸರ್ಜನ್ ಹಾಗೂ ಖಾಸಗಿ ಆಸ್ಪತ್ರೆ ಸಂಘದ ಅಧ್ಯಕ್ಷರಿಗೆ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X