ಶಿವಮೊಗ್ಗ: ಬೈಕ್ ಢಿಕ್ಕಿಯಾಗಿ ಪಾದಚಾರಿ ಮೃತ್ಯು

ಶಿವಮೊಗ್ಗ, ಮೇ 22: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‍ಪೇಟೆಯಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಮಂಜಿಕೊಪ್ಪ ಗ್ರಾಮದ ನಿವಾಸಿಯಾದ ಶಿವಮ್ಮ (42) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ಸೇರ್ಪಡೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಮೃತ ಶಿವಮ್ಮರವರು ಕೂಲಿಕೆಲಸಕ್ಕೆಂದು ರಿಪ್ಪನ್‍ಪೇಟೆಗೆ ಆಗಮಿಸಿದ್ದರು. ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ಇವರಿಗೆ ವೇಗವಾಗಿ ಆಗಮಿಸಿದ ಯಮಹಾ ಬೈಕ್ ಸವಾರ ಢಿಕ್ಕಿ ಹೊಡೆದಿದ್ದ. ಈ ಸಂಬಂಧ ಬೈಕ್ ಚಾಲಕನ ವಿರುದ್ದ ರಿಪ್ಪನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Next Story





