ಗ್ರಾ.ಪಂ. ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ
ಮಂಗಳೂರು, ಮೇ 23: ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯ ಮೂಲಕ ಭರ್ತಿ ಮಾಡಲು ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.
ಮೇ 30ರಂದು ಜಿಲ್ಲಾಧಿಕಾರಿಯವರು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಜೂ. 2 ನಾಮಪತ್ರ ಸಲ್ಲಿಸಲು ಕೊನೆಯ ದಿವಾಗಿದ್ದು, 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ. 6ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೋನೆಯ ದಿನವಾಗಿದೆ. ಮತದಾನ ಅಗತ್ಯವಿದ್ದರೆ ಜೂ. 14ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಅಗತ್ಯವಿದ್ದಲ್ಲಿ ಜೂ. 15ರಂದು ಮರು ಮತದಾನದ ನಡೆಯಲಿದೆ. ಜೂ. 17ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 30ರಿಂದ ಜೂ. 17ರವರೆಗೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟನೆ ತಿಳಿಸಿದೆ.
Next Story





