Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಅಯಿಲ್ ಕಂಪನಿಗಳ ವಿರುದ್ಧ...

ತುಮಕೂರು: ಅಯಿಲ್ ಕಂಪನಿಗಳ ವಿರುದ್ಧ ಕ್ರಮಕ್ಕೆ ಕೃಷಿಕ ಸಮಾಜದ ಮುಖಂಡರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 May 2018 5:54 PM IST
share
ತುಮಕೂರು: ಅಯಿಲ್ ಕಂಪನಿಗಳ ವಿರುದ್ಧ ಕ್ರಮಕ್ಕೆ ಕೃಷಿಕ ಸಮಾಜದ ಮುಖಂಡರ ಒತ್ತಾಯ

ತುಮಕೂರು,ಮೇ.23:  ಕೆಲವು ವೇಸ್ಟ್ ಆಯಿಲ್ ರಿಫೈನರಿ ಕಾರ್ಖಾನೆಗಳಿಂದ ವಾಯು ಮಾಲಿನ್ಯ ಉಂಟಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದ್ದು, ಕೂಡಲೇ ಪರಿಸರ ಮಾಲಿನ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಭಾರತೀಯ ಕೃಷಿಕ ಸಮಾಜದ ಮುಖಂಡ ಕೋಡಿಹಳ್ಳಿ ಜಗದೀಶ್ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ತುಮಕೂರು ತಾಲೂಕು, ಕೋರಾ ಹೋಬಳಿ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಮೊದಲನೇ ಹಂತದಲ್ಲಿರುವ ಎ.ಎಸ್.ರಿಫೈನರಿ, ಮಹಾಲಕ್ಷ್ಮೀ ಇಂಡಸ್ಟ್ರೀಸ್, ಎಫ್.ಎ.ರಿಫೈನರಿ ಕಾರ್ಖಾನೆಗಳಲ್ಲಿ ವೇಸ್ಟ್ ಆಯಿಲ್‍ನ್ನು ಪರಿಸರಕ್ಕೆ ನೇರವಾಗಿ ಬಿಡುತ್ತಿದ್ದಾರೆ. ಇದರಿಂದ ಸ್ಥಳೀಯ ನಾಗರಿಕರು, ಸುತ್ತಮುತ್ತಲಿನ ರೈತರು, ಸುಮಾರು 20 ರಿಂದ 30 ಹಳ್ಳಿಯ ಜನರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ವೇಸ್ಟ್ ಆಯಿಲ್ ಪರಿಷ್ಕರಣೆ ಸಂದರ್ಭದಲ್ಲಿ ಮನುಷ್ಯರ ಆರೋಗ್ಯಕ್ಕೆ ಮಾರಕವಾದ ಕೆಟ್ಟ ಹೊಗೆ ಗಾಳಿಗೆ ಸೇರುತ್ತಿರುವುದರಿಂದ ಜನರು ವಿವಿಧ ಖಾಯಿಲೆಗಳಿಂದ ನರಳುವಂತಾಗಿದೆ. ಸುಮಾರು ದಿನಗಳಿಂದ ವಾಯುಮಾಲಿನ್ಯ ಮತ್ತು ಜಲಮಾಲಿನ್ಯ ಹಾಗೂ ಪರಿಸರ ಕಲುಷಿತ ಗೊಂಡಿದೆ. ಇದರಿಂದ ಬಹುತೇಕ ಸ್ಥಳೀಯ ಜನರು ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುವಂತಹ ಕೆಟ್ಟ ರೀತಿಯ ವಾಸನೆ ಬರುತ್ತಿದ್ದು, ಅಲ್ಲದೆ ಪಶು ಪಕ್ಷಿಗಳು ಸಕಲ ಜೀವ ಸಂಕುಲಕ್ಕೂ ಸಂಚಕಾರ ಒದಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಸಾಯುವ ಪರಿಸ್ಥಿತಿ ಬರುವುದೆಂದು ಅರಿತು ಕೂಡಲೇ ಸಂಸ್ಥೆಯ ಮುಖ್ಯಸ್ಥರನ್ನು ಮತ್ತು ಸಾರ್ವಜನಿಕರ ಸಭೆ ಕರೆದು ಇಲ್ಲಿ ಆಗುತ್ತಿರುವ ಮಾಲಿನ್ಯವನ್ನು ಈ ಕೂಡಲೇ ತಡೆಗಟ್ಟುವಂತೆ ಹಾಗೂ ಇಲ್ಲವಾದರೆ ಈ ಕಾರ್ಖಾನೆ ಮುಚ್ಚುವಂತೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ತುಮಕೂರು ಮತ್ತು ಬೆಂಗಳೂರುರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರು, ಸುತ್ತಮುತ್ತಲ ಗ್ರಾಮಸ್ಥರು ತಲೆನೋವು, ವಾಂತಿ, ಚರ್ಮ ರೋಗ ಸಂಬಂಧಿ ಕಾಯಿಲೆಗಳು ಹಾಗೂ ಇತರೆ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಕೂಡಲೇ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ವಸಚಿತನರಸಾಪುರ ಸುತ್ತಮುತ್ತಲ ಗ್ರಾಮಗಳ ಜನರು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಗದೀಶ್ ಮನವಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X