ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕಾರ: ಹನೂರಿನಲ್ಲಿ ಸಂಭ್ರಮಾಚರಣೆ

ಹನೂರು,ಮೇ.23: ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಎಚ್.ಡಿ ಕುಮಾರಸ್ವಾಮಿಯವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಜೆಡಿಎಸ್ ಕಾರ್ಯಕರ್ತರು ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ಪಟಾಕಿ ಸಿಡಿಸಿ, ಜಯಘೋಷಗಳನ್ನು ಕೂಗಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ನಂತರ ಮಾತನಾಡಿದ ಮುಖಂಡರಾದ ಲೋಕೆಶ್, ರಾಜ್ಯದ ಜನರ ನಿರೀಕ್ಷೆಯಂತೆ ಕುಮಾರಣ್ಣ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿರುವುದು ಸಂತಸ ತಂದಿದೆ. ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಅವರು ಆದ್ಯತೆ ನೀಡಲಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು .
ಈ ಸಂದರ್ಭದಲ್ಲಿ ಮುಖಂಡರಾದ ಪುಟ್ಟಸ್ವಾಮಿ, ಲೊಕೇಶ್, ದೇಸೆಗೌಡ, ಸ್ವಾಮಿ, ಬಾಲು, ಮಧು, ಶಿವರಾಮೇಗೌಡ, ನಟರಾಜು, ಒಕ್ಕಲಿಗ ಯುವ ಸಮಿತಿ ಅಧ್ಯಕ್ಷ ಸಂತೋಷ್, ನಿರ್ದೇಶಕ ನವೀನ್, ಅರುಣ್ ಇನ್ನಿತರರು ಹಾಜರಿದ್ದರು.
Next Story





