ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಇವಿಎಂಗಳನ್ನು ತಿರುಚಿದೆ: ಉಪಮುಖ್ಯಮಂತ್ರಿ ಪರಮೇಶ್ವರ್ ಆರೋಪ

ಬೆಂಗಳೂರು, ಮೇ 24: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಇವಿಎಂಗಳನ್ನು ತಿರುಚಿದೆ ಎಂದು ರಾಜ್ಯದ ನೂತನ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸೇರಿದಂತೆ ಪಕ್ಷದ ಕೆಲ ನಾಯಕರಿಗೆ ಬಿಜೆಪಿ ಇವಿಎಂ ತಿರುಚಿದ ಹಾಗೆ ಭಾಸವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಇದ್ದ ಕೆಲವೆಡೆಗಳಲ್ಲಿ ಕೆಲ ಕಾಂಗ್ರೆಸ್ ನಾಯಕರು ಸೋತಿದ್ದಾರೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ” ಎಂದು ಪರಮೇಶ್ವರ್ ಹೇಳಿದರು.
ಇದೇ ಸಂದರ್ಭ ಸಮ್ಮಿಶ್ರ ಸರಕಾರದ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಸರ್ವಾಧಿಕಾರಕ್ಕೆ ಕಡಿವಾಣ ಹಾಕಲು ಪಕ್ಷದ ಹೈಕಮಾಂಡ್ ತೀರ್ಮಾನಿಸಿತ್ತು ಎಂದವರು ಹೇಳಿದರು.
Next Story





