Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆ: ಇನ್ನೂ ಹಂಚಿಕೆಯಾಗದ...

ದ.ಕ. ಜಿಲ್ಲೆ: ಇನ್ನೂ ಹಂಚಿಕೆಯಾಗದ ಆರ್‌ಟಿಇ 2ನೆ ಸುತ್ತಿನ ಸೀಟುಗಳು

ಗೊಂದಲದಲ್ಲಿ ಪೋಷಕರು, ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ24 May 2018 6:30 PM IST
share

ಮಂಗಳೂರು, ಮೇ 24: ರಾಜ್ಯ ಸರಕಾರದ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ 2018-19ರ ಸಾಲಿನ ಆರ್‌ಟಿಇ ಇದರ 2ನೆ ಸುತ್ತಿನ ಸೀಟುಗಳು ಇನ್ನೂ ಹಂಚಿಕೆಯಾಗಿಲ್ಲ. ಇದರಿಂದ ಸೀಟು ಹಂಚಿಕೆಗಾಗಿ ಕಾದು ಕುಳಿತಿರುವ ವಿದ್ಯಾರ್ಥಿಗಳು ಮತ್ತವರ ಪೋಷಕರು ಗೊಂದಲದಲ್ಲಿ ಸಿಲುಕಿದ್ದಾರೆ. ಇನ್ನೇನೋ ಮೇ 28ರಿಂದ ತರಗತಿಗಳು ಆರಂಭಗೊಳ್ಳುತ್ತಿದ್ದು, ಯಾವ ಶಾಲೆಗೆ ಸೇರ್ಪಡೆಗೊಳ್ಳಬೇಕು ಎಂದು ತಿಳಿಯದೆ ಆತಂಕಿತರಾಗಿರುವ ವಿದ್ಯಾರ್ಥಿಗಳು ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆರಂಭದಲ್ಲೇ ವಿಘ್ನ: ಶಿಕ್ಷಣ ಇಲಾಖೆಯು ಫೆ.23ರಿಂದ ಮಾ.21ರೊಳಗೆ ಅರ್ಜಿ ಸಲ್ಲಿಸಲು ತನ್ನ ವೆಬ್‌ಸೈಟ್‌ನಲ್ಲಿ ಘೋಷಿಸಿತ್ತು. ಆದರೆ ಆರಂಭದ 10 ದಿನಗಳ ಕಾಲ ತಾಂತ್ರಿಕ ತೊಂದರೆ ಕಾಡಿತ್ತು. ಇದರಿಂದ ಮಾ.1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿತ್ತು. ಆ ಬಳಿಕವೂ ವೆಬ್‌ಸೈಟ್‌ನಲ್ಲಿ ನಿರಂತರ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಮಾ.28ರವರೆಗೆ ಕಾಲಾವಕಾಶ ನೀಡಲಾಗಿತ್ತು. ಒಟ್ಟಾರೆಯಾಗಿ ಇಲಾಖೆಯ ಅಸಮರ್ಪಕ ಸೇವೆಯಿಂದ ಅರ್ಜಿ ಸಲ್ಲಿಸುವ ಸಂದರ್ಭದಲ್ಲೇ ವಿದ್ಯಾರ್ಥಿಗಳು ಬಹಳಷ್ಟು ತೊಂದರೆ ಅನುಭವಿಸಿದ್ದರು.

ರಾಜ್ಯದಲ್ಲಿ ಈ ಬಾರಿ ಸಲ್ಲಿಕೆಯಾಗಿದ್ದ 2.28 ಲಕ್ಷ ಆರ್‌ಟಿಇ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರಥಮ ಸುತ್ತಿನ ಸೀಟು ಹಂಚಿಕೆಯು ಎ.20ರಂದು ನಡೆದಿತ್ತು. ಆದರೆ 2ನೆ ಹಂತದ ಸೀಟು ಹಂಚಿಕೆಯು ಈವರೆಗೂ ನಡೆಯದೆ ಕಾರಣ ಪೋಷಕರು ಮತ್ತು ವಿದ್ಯಾರ್ಥಿಗಳು ಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಆರ್‌ಟಿಇ ಸೀಟು ಸಿಗದಿದ್ದಲ್ಲಿ ಪರ್ಯಾಯವಾಗಿ ಖಾಸಗಿ ಸಂಸ್ಥೆಗಳ ಸೀಟು ಕಾಯ್ದಿರಿಸಿದವರು ಕೂಡ ಇದೀಗ ಗೊಂದಲಕ್ಕೀಡಾಗಿದ್ದಾರೆ. ತನ್ಮಧ್ಯೆ ಖಾಸಗಿ ಶಿಕ್ಷಣ ಸಂಸ್ಥೆಯವರು ಶೀಘ್ರ ಮಕ್ಕಳ ದಾಖಲಾತಿ ಮಾಡದಿದ್ದರೆ ಬೇರೆಯವರಿಗೆ ಸೀಟು ನೀಡಲಾಗುವುದು ಅಲ್ಲದೆ ಮೇ 28ರೊಳಗೆ ದಾಖಲಾತಿಗೆ ಕೊನೆಯ ದಿನವಾಗಿದೆ ಎಚ್ಚರಿಸುತ್ತಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಸಿಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಇಮ್ರಾನ್ ಪಿ.ಜೆ. ‘ಒಂದೆಡೆ ಆರ್‌ಟಿಇ ಸಿಟು ಹಂಚಿಕೆಯಾಗದೆ, ಇನ್ನೊಂದೆಡೆ ಇದನ್ನೇ ನಂಬಿ ಶಾಲೆಗೆ ದಾಖಲಾತಿಯೂ ಮಾಡದ ಪೋಷಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಬಗ್ಗೆ ದ.ಕ.ಜಿಲ್ಲಾ ಶಿಕ್ಷಣ ಇಲಾಖೆಯನ್ನು ಸಂಪರ್ಕಿಸಿದರೆ ನಮಗೆ ಇದರ ಬಗ್ಗೆ ಮಾಹಿತಿಯಿಲ್ಲ. ಬೆಂಗಳೂರು ಕಚೇರಿಯನ್ನು ಸಂಪರ್ಕಿಸಿ ಎಂದು ಉತ್ತರಿಸುತ್ತಿದ್ದಾರೆ. ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರತೀ ವರ್ಷವು ತಾಂತ್ರಿಕ ತೊಂದರೆಗಳಿರುತ್ತಿದ್ದು, ಈ ವರ್ಷವು ಕೂಡಾ ಇದೇ ತೊಂದರೆಯನ್ನು ವಿದ್ಯಾರ್ಥಿಗಳು ಆರಂಭದಲ್ಲಿಯೇ ಎದುರಿಸಿದ್ದಾರೆ. ಹಾಗಾಗಿ ಇಲಾಖೆಯು ಆದಷ್ಟು ಬೇಗ ಹಂಚಿಕೆಯಾಗಲು ಬಾಕಿ ಇರುವ ಸೀಟನ್ನು ಇತ್ಯರ್ಥ ಮಾಡಿ ಮುಗಿಸಬೇಕು, ಇಲ್ಲವಾದಲ್ಲಿ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿ-ಪೋಷಕರ ಜೊತೆಗೂಡಿ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X