ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ಗೆ ಮನವಿ

ಮಂಗಳೂರು, ಮೇ 24: ರಾಜ್ಯದ 9ನೇ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರನ್ನು ಜಿಲ್ಲೆಯ ಕಾಂಗ್ರೆಸ್ ಮುಖಂಡರ ನಿಯೋಗವು ಭೇಟಿಯಾಗಿ ಪ್ರಸ್ತುತ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿ ಮನವಿ ಸಲ್ಲಿಸಿದರು. ಅಲ್ಲದೆ ಪಕ್ಷ ಸಂಘಟನೆಯ ಬಗ್ಗೆ ವಿಚಾರ ವಿನಿಮಯ ನಡೆಸಿದರು.
ನಿಯೋಗದಲ್ಲಿ ಮಂಗಳೂರು ಸೌತ್ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜೆ. ನಾಗೇಂದ್ರ ಕುಮಾರ್, ದಕ್ಷಿಣ ಕ್ಷೇತ್ರದ ಯುವ ಇಂಟಕ್ ಅಧ್ಯಕ್ಷ ಪುನೀತ್ ಶೆಟ್ಟಿ, ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಜೆ. ಶಶಿಕಾಂತ್ ಶೆಟ್ಟಿ, ಯುವ ಇಂಟಕ್‌ನ ಕಾರ್ಯದರ್ಶಿ ಮುದಸ್ಸಿರ್ ಕುದ್ರೋಳಿ, ಜಿಲ್ಲಾ ಅಲ್ಪಸಂಖ್ಯಾತರ ಕಾಂಗ್ರೆಸ್ ಉಪಾಧ್ಯಕ್ಷ ಅನಿಲ್ ತೋರಸ್ ಜೆಪ್ಪು ಉಪಸ್ಥಿತರಿದ್ದರು.
Next Story





