Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಕ್ಯಾಂಪಸ್‌ನ...

ಮಂಗಳೂರು ವಿವಿ ಕ್ಯಾಂಪಸ್‌ನ ಜೀವವೈವಿದ್ಯತೆಯ ಕುರಿತ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 May 2018 6:39 PM IST
share
ಮಂಗಳೂರು ವಿವಿ ಕ್ಯಾಂಪಸ್‌ನ ಜೀವವೈವಿದ್ಯತೆಯ ಕುರಿತ ಪುಸ್ತಕ ಬಿಡುಗಡೆ

ಕೊಣಾಜೆ, ಮೇ 24: ಮಂಗಳೂರು ವಿಶ್ವವಿದ್ಯಾಲಯದ ಮಂಗಳಗಂಗೋತ್ರಿ ಕ್ಯಾಂಪಸ್‌ನ ಜೀವವೈವಿಧ್ಯತೆಯ ದಾಖಲಾತಿಯ ಪುಸ್ತಕ ಬಿಡುಗಡೆ ಹಾಗೂ ವೆಬ್‌ಸೈಟ್‌ನಲ್ಲಿ ಇ-ಬುಕ್ ಅನಾವರಣ ಕಾರ್ಯಕ್ರಮವು ಗುರುವಾರ ಮಂಗಳೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ನಡೆಯಿತು.

ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಚ್.ಎ.ರಂಗನಾಥ್, ವಿಶ್ವವಿದ್ಯಾನಿಲಯಗಳು ಎತ್ತಿಕೊಂಡ ಹಲವಾರು ಯೋಜನೆಗಳು ನೂತನ ಆವಿಷ್ಕಾರಗಳೊಂದಿಗೆ ಯಶಸ್ವಿಯಾಗಿ ಮುನ್ನಡೆಯಬೇಕು. ಉತ್ತಮ ಯೋಜನೆಗಳು ಪೂರ್ಣಗೊಂಡು ಅದರ ಪ್ರಯೋಜನ ಸಮಾಜಕ್ಕೆ ಸಿಗುವಂತಾ ಗಬೇಕು. ವಿದ್ಯಾರ್ಥಿಗಳು ಕೇವಲ ಪ್ರಯೋಗಾಲಯ ಅಥವಾ ತರಗತಿಯೊಳಗೆ ಕಲಿತ ವಿದ್ಯೆಯು ನಮ್ಮ ನಮ್ಮ ಉದ್ದೇಶವನ್ನು ಈಡೇರಿಸದು. ಅದಕ್ಕಾಗಿ ಪ್ರಾಯೋಗಿಕವಾಗಿ ತಳಸ್ಪರ್ಶಿ ಅಧ್ಯಯನ ನಡೆಸಿದರೆ ಬಹಳಷ್ಟು ಸಂಗತಿಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಜೀವವೈವಿಧ್ಯತೆಯ ಬಗೆಗಿನ ದಾಖಲಾತಿಯ ಬಗ್ಗೆ ವಿದ್ಯಾರ್ಥಿಗಳು ಕೂಡಾ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಬೆಂಗಳೂರಿನ ವುಡ್ ಸೈಯನ್ಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಸಮೂಹ ಸಂಯೋಜಕರಾದ ಎನ್.ಮೋಹನ್ ಕಾರ್ನಾಟ್ ಅವರು ಮಾತನಾಡಿ, ವಿವಿಧತೆಯನ್ನು ಹೊಂದಿರುವ ನಮ್ಮ ರಾಷ್ಟ್ರವು ಜೀವ ವೈವಿಧ್ಯತೆಯಲ್ಲೂ ಪ್ರಮುಖವಾಗಿ ಗುರುತಿಸಲ್ಪಟ್ಟಿದೆ. ಜೀವ ವೈವಿಧ್ಯತೆಯ ರಾಷ್ಟ್ರಗಳ ಪೈಕಿ ಭಾರತವು 12ನೇ ಸ್ಥಾನದಲ್ಲಿದೆ. ಹೆಚ್ಚು ಮಳೆ ಬೀಳುವ ಅರಣ್ಯ ಪ್ರದೇಶಗಳಲ್ಲಿ ನಾವು ಸುಮಾರು 50%ದಿಂದ 80% ದಷ್ಟು ಜೀವ ವೈವಿಧ್ಯತೆಗಳು ಕಂಡು ಬರುತ್ತವೆ. ಹಾಗೆಯೇ ಮರುಭೂಮಿ ಪ್ರದೇಶಗಳಲ್ಲಿ ಕಡಿಮೆ ಜೀವ ವೈವಿಧ್ಯತೆಗಳು ಇರುವುದನ್ನು ನಾವು ಕಾಣಬಹುದು. ಮಂಗಳಗಂಗೋತ್ರಿ ಕ್ಯಾಂಪಸ್‌ನ ಜೀವವೈವಿಧ್ಯತೆಗಳನ್ನು ಗುರುತಿಸಿ ದಾಖಲಿಸಿರುವುದು ಉತ್ತಮ ಕಾರ್ಯವಾಗಿದ್ದು ಇಂತಹ ಯೋಜನೆಗಳಿಗೆ ಉತ್ತಮ ಪ್ರೋತ್ಸಾಹ ದೊರೆಯಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ಅವರು ಈ ಪ್ರದೇಶದ ವಾತಾವರಣ, ಇಲ್ಲಿಯ ಮಣ್ಣು ಅನೇಕ ರೀತಿಯ ಜೀವವೈವಿದ್ಯತೆಗೆ ಕಾರಣವಾಗಿದೆ. ಜೀವವೈವಿದ್ಯತೆಯ ಬಗ್ಗೆ ದಾಖಲಾತಿ ತಂಡವು ಉತ್ತಮವಾಗಿ ಯೋಜನೆಯನ್ನು ಪೂರ್ಣಗೊಳಿಸಿದ್ದು ಇದು ಆರಂಭದ ಹಂತವಾಗಿದೆ. ಇದೇ ರೀತಿ ವಿವಿಯ ವ್ಯಾಪ್ತಿಯ ಪ್ರತಿಯೊಂದು ಕ್ಷೇತ್ರದಲ್ಲೂ ಇಂತಹ ದಾಖಲಾತಿ ಕಾರ್ಯ ನಡೆಯಲಿದೆ ಎಂದರು.

ಕ್ಯಾಂಪಸ್ ಜೀವವೈವಿದ್ಯ ಪುಸ್ತಕದ ಸಂಪಾದಕ ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ.ಪ್ರಶಾಂತ್ ನಾಯ್ಕಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ವಿವಿ ಕುಲಸಚಿವ ಪ್ರೊ.ನಾಗೇಂದ್ರ ಪ್ರಕಾಶ್ ಅವರು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಮುಸ್ತಾಕ್ ಅವರು ವಂದಿಸಿದರು. ರಾಜು ಕೃಷ್ಣ ಅವರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X