Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮ್ಮಿಶ್ರ ಸರಕಾರ ಅವಧಿ ಪೂರೈಸಲಿದೆ: ಉಪ...

ಸಮ್ಮಿಶ್ರ ಸರಕಾರ ಅವಧಿ ಪೂರೈಸಲಿದೆ: ಉಪ ಮುಖ್ಯಮಂತ್ರಿ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ24 May 2018 6:46 PM IST
share
ಸಮ್ಮಿಶ್ರ ಸರಕಾರ ಅವಧಿ ಪೂರೈಸಲಿದೆ: ಉಪ ಮುಖ್ಯಮಂತ್ರಿ ಪರಮೇಶ್ವರ್

ಬೆಂಗಳೂರು, ಮೇ 24: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂಬ ಮಾತುಗಳು ಹಲವೆಡೆ ಕೇಳಿ ಬರುತ್ತಿದೆ. ಆದರೆ, ಈ ಸರಕಾರ ಐದು ವರ್ಷಗಳನ್ನು ಪೂರೈಸಲಿದೆ. ಈ ಸಂಬಂಧ ಯಾರಿಗೂ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನಮಗೆ ಶೇ.38.4ರಷ್ಟು ಮತಗಳು(78 ಸ್ಥಾನ), ಬಿಜೆಪಿಗೆ ಶೇ.36.2ರಷ್ಟು ಮತಗಳು ಸಿಕ್ಕಿವೆ. ಆದರೂ, ಅನೇಕ ಕಾರಣಗಳಿಂದ ನಾವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ ಎಂದರು.

ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಿದೆ. ದೇಶದಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರಮೋದಿಯ ಸರ್ವಾಧಿಕಾರಿ ಧೋರಣೆಗೆ ಕಡಿವಾಣ ಹಾಕುವ ಕೆಲಸವನ್ನು ನಮ್ಮ ಸರಕಾರ ಮಾಡಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವುದು ನಮ್ಮ ಮೂಲ ಉದ್ದೇಶ. ಬಡವರು, ಮಧ್ಯಮ ವರ್ಗದವರು, ರೈತರು, ಕಾರ್ಮಿಕರು ಸೇರಿದಂತೆ ಎಲ್ಲ ವರ್ಗಗಳ ಶ್ರೇಯಸ್ಸಿಗೆ ತಕ್ಕಂತೆ ಕಾರ್ಯ ಕ್ರಮಗಳನ್ನು ರೂಪಿಸಲಾಗುವುದು ಎಂದು ಅವರು ಹೇಳಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಣಾಳಿಕೆಗಳನ್ನು ಮುಂದಿಟ್ಟುಕೊಂಡು ಸಾಮಾನ್ಯ ಕನಿಷ್ಟ ಕಾರ್ಯಕ್ರಮಗಳನ್ನು ಗುರುತಿಸಿ, ರಾಜ್ಯದ ಜನತೆ ಬಯಸಿರುವುದನ್ನು ಆದ್ಯತೆಯ ಮೇರೆಗೆ ಕಾರ್ಯಕ್ರಮ ರೂಪಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಂತರ ಸಮನ್ವಯ ಸಮಿತಿ ರಚಿಸುತ್ತೇವೆ. ಇದರಲ್ಲಿ ಎರಡು ಪಕ್ಷಗಳ ಮುಖಂಡರು ಇರಲಿದ್ದು, ನೀತಿ, ನಿರೂಪಣೆ ಗಳ ಕುರಿತು ಚರ್ಚಿಸಿ ತೀರ್ಮಾನಿಸುತ್ತೇವೆ. ಸಾಮಾನ್ಯ ಕನಿಷ್ಟ ಕಾರ್ಯಕ್ರಮಗಳ ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು. ವಿಶ್ವಾಸಮತಯಾಚನೆಯ ಪರೀಕ್ಷೆಯಲ್ಲಿ ನಾವು ಯಶಸ್ವಿಯಾಗಲಿದ್ದೇವೆ. ಆನಂತರ, ಸಂಪುಟ ವಿಸ್ತರಣೆ ಮಾಡುತ್ತೇವೆ. ನಮ್ಮ ಶಾಸಕರು ಖರೀದಿಗಿಲ್ಲ. ಬಿಜೆಪಿಯವರು ಒಡ್ಡುವ ಆಮಿಷಗಳಿಗೆ ತಲೆ ಬಾಗುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಹಿರಂಗವಾಗಿಯೇ ಶಾಸಕರನ್ನು ತಮ್ಮತ್ತ ಸೆಳೆಯಲು ಕರೆ ಕೊಟ್ಟಿರುವುದು ಆಶ್ಚರ್ಯ ತಂದಿದೆ ಎಂದು ಅವರು ಹೇಳಿದರು.

ಸ್ಪೀಕರ್ ಚುನಾವಣೆ: ಅನುಭವಿ, ಹಿರಿಯ ಶಾಸಕ ಕೆ.ಆರ್.ರಮೇಶ್‌ಕುಮಾರ್ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ವಿರೋಧ ಪಕ್ಷದವರು ಯಾವುದೇ ಸ್ಪರ್ಧೆಯಿಲ್ಲದೆ ಅವರನ್ನು ಆಯ್ಕೆ ಮಾಡಿಕೊಡಬೇಕೆಂದು ಅವರು ಮನವಿ ಮಾಡಿದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗಳನ್ನು ನಿರ್ವಹಿಸುವ ಅರ್ಹತೆ ಇರುವ ಅನೇಕ ಮುಖಂಡರು ನಮ್ಮ ಪಕ್ಷದಲ್ಲಿದ್ದಾರೆ. ಮೈತ್ರಿ ಸರಕಾರ ರಚನೆ ಸಂದರ್ಭದಲ್ಲಿ ಯಾರಿಗೆ ಯಾವ ಹುದ್ದೆಗಳನ್ನು ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಲ, ಅಸಮಾಧಾನ ಇಲ್ಲ. ಎಲ್ಲ ಶಾಸಕರು ಜೊತೆಯಾಗಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುವಂತೆ ಹೈಕಮಾಂಡ್‌ನಿಂದ ಯಾವುದೇ ಸೂಚನೆ ಬಂದಿಲ್ಲ. ಕಳೆದ ಬಾರಿ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದೆ. ಆದರೆ, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಸಂಪೂರ್ಣ ಸಮಯ ನೀಡುವವರು ಅಧ್ಯಕ್ಷರಾಗಬೇಕು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಒಬ್ಬ ಅನುಭವಿ ರಾಜಕಾರಣಿ. ಅವರು ಪಕ್ಷ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡರೆ ಸಂತೋಷ ಎಂದು ಅವರು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿಗಳು ಪರಾಭವಗೊಂಡಿರುವ ಕ್ಷೇತ್ರಗಳಲ್ಲಿ ಸಂಚರಿಸಿ, ಸೋಲಿಗೆ ಕಾರಣವಾಗಿರುವ ಅಂಶಗಳ ಕುರಿತು ಪತ್ತೆ ಮಾಡಲು ವಿಶೇಷ ಸಮಿತಿಯನ್ನು ರಚನೆ ಮಾಡಲಾಗುವುದು. ಆ ಸಮಿತಿ ನೀಡುವ ವರದಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

ಇವಿಎಂ ಮೇಲೆ ಅನುಮಾನವಿದೆ
ಇವಿಎಂ ಬಗ್ಗೆ ನಾವು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿಯೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ. ಲೋಕಸಭಾ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಶೇ.80ರಷ್ಟು ಮತಗಳು ಕಾಂಗ್ರೆಸ್ ಅಭ್ಯರ್ಥಿಗೆ ಬರುವ ಸಾಧ್ಯತೆಗಳಿದ್ದ ಕ್ಷೇತ್ರಗಳಲ್ಲೂ ಬಿಜೆಪಿ ಗೆದ್ದಿದೆ. ಆದುದರಿಂದ, ನಮಗೆ ಇವಿಎಂ ಮೇಲೆ ಅನುಮಾನವಿದೆ.
-ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ

ನಮ್ಮ ಪಕ್ಷದಲ್ಲಿ ಕೋಟಾ ವ್ಯವಸ್ಥೆಯಿಲ್ಲ. ನಮ್ಮ ಅರ್ಹತೆ, ಪ್ರಾದೇಶಿಕ ಸಮತೋಲನ, ಯಾವ ವರ್ಗಕ್ಕೆ ಅವಕಾಶ ನೀಡಬೇಕು ಎಂಬುದರ ಆಧಾರದ ಮೇಲೆ ಅಧಿಕಾರ ಹಂಚಿಕೆಯಾಗುತ್ತದೆ. ನಾನು ದಲಿತ ಎಂಬ ಕಾರಣಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ ಎಂಬುದು ಸರಿಯಲ್ಲ. ಎರಡು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಕುರಿತು ನನಗೆ ಯಾವುದೇ ಮಾಹಿತಿಯೂ ಇಲ್ಲ, ಚರ್ಚೆಯೂ ಆಗಿಲ್ಲ.
-ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X