Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019ರಲ್ಲಿ ಮೋದಿ ಸರಕಾರಕ್ಕೆ ಅಧಿಕಾರ...

2019ರಲ್ಲಿ ಮೋದಿ ಸರಕಾರಕ್ಕೆ ಅಧಿಕಾರ ಪಡೆಯುವ ಅರ್ಹತೆಯಿಲ್ಲ

ಎಬಿಪಿ ನ್ಯೂಸ್-ಸಿಎಸ್‌ಡಿಎಸ್ ಸಮೀಕ್ಷೆಯಲ್ಲಿ 47ಶೇ. ಜನರ ಅಭಿಪ್ರಾಯ

ವಾರ್ತಾಭಾರತಿವಾರ್ತಾಭಾರತಿ24 May 2018 11:19 PM IST
share
2019ರಲ್ಲಿ ಮೋದಿ ಸರಕಾರಕ್ಕೆ ಅಧಿಕಾರ ಪಡೆಯುವ ಅರ್ಹತೆಯಿಲ್ಲ

ಮೋದಿ ಸರಕಾರ ಬೇಕು ಎಂದವರೆಷ್ಟು ಗೊತ್ತಾ ?

ಹೊಸದಿಲ್ಲಿ, ಮೇ 24: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮಿತ್ರಕೂಟ 2019ಕ್ಕೆ ಅಧಿಕಾರ ಪಡೆಯುವ ಅರ್ಹತೆ ಹೊಂದಿಲ್ಲ ಎಂದು ಭಾವಿಸುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಎಬಿಪಿ ನ್ಯೂಸ್-ಸಿಎಸ್‌ಡಿಎಸ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಸುಮಾರು ಶೇ.47ರಷ್ಟು ಜನ ಮೋದಿ ಸರಕಾರಕ್ಕೆ ಎರಡನೇ ಅವಧಿಗೆ ಅಧಿಕಾರ ನೀಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ಸಮೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ.

ಇದೇ ಸಂಸ್ಥೆ ಜುಲೈ 2013ರಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಆಗ ಅಧಿಕಾರದಲ್ಲಿದ್ದ ಯುಪಿಎ ಮಿತ್ರಕೂಟದ ವಿರುದ್ಧವಾಗಿ ಜನತೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಂದು ಕೂಡಾ ಶೇ.39ರಷ್ಟು ಮಂದಿ ಯುಪಿಎ ಅಧಿಕಾರಕ್ಕೆ ಬರಲು ಅರ್ಹವಲ್ಲ ಎಂದು ತಿಳಿಸಿದ್ದರು.ಶೇ.31ರಷ್ಟು ಜನ ಬೆಂಬಲಿಸಿದ್ದರೆ ಉಳಿದವರು ತಟಸ್ತರಾಗಿದ್ದರು. ಸಮೀಕ್ಷೆಯ ವರದಿ ನಿಜವಾಗಿತ್ತು.

19 ರಾಜ್ಯಗಳ 15,859 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಶೇ.47ರಷ್ಟು ಮಂದಿ ಮೋದಿ ಸರಕಾರಕ್ಕೆ 2019ರಲ್ಲಿ ಅಧಿಕಾರ ಪಡೆಯಲು ಅರ್ಹತೆಯಿಲ್ಲ ಎಂದು ಅಭಿಪ್ರಾಯಪಟ್ಟಿದ್ದರೆ, ಸುಮಾರು ಶೇ.39ರಷ್ಟು ಮಂದಿ ಮೋದಿ ಸರಕಾರದ ಪರ ಇದ್ದರೆ ಉಳಿದವರು ತಟಸ್ತ ನಿಲುವು ತಳೆದಿದ್ದಾರೆ. ಧಾರ್ಮಿಕ ಅಲ್ಪಸಂಖ್ಯಾತರು ಮೋದಿ ಸರಕಾರದ ವಿರುದ್ಧವಾಗಿದ್ದಾರೆ.

ಸುಮಾರು ಶೇ.75ರಷ್ಟು ಮುಸ್ಲಿಮರು, ಐದನೇ ಮೂರರಷ್ಟು ಹಾಗೂ ಶೇ.50ರಷ್ಟು ಸಿಖ್ಖರು ಮೋದಿ ಸರಕಾರ ಅಧಿಕಾರಕ್ಕೆ ಮರಳುವ ವಿರುದ್ಧವಾಗಿದ್ದಾರೆ. ಅಲ್ಲದೆ ಹಿಂದೂ ಧರ್ಮೀಯರಲ್ಲೂ ಹೆಚ್ಚಿನವರು ಮೋದಿ ಸರಕಾರದ ವಿರುದ್ಧವಾಗಿದ್ದಾರೆ . ಶೇ.48ರಷ್ಟು ಹಿಂದೂಗಳು ಮೋದಿ ಸರಕಾರಕ್ಕೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಒಲವು ಹೊಂದಿದ್ದರೆ ಶೇ.42ರಷ್ಟು ಮಂದಿ ವಿರುದ್ಧವಾಗಿದ್ದಾರೆ . ಹಿಂದೂ ಸಮುದಾಯದಲ್ಲಿ ಹೆಚ್ಚಿನ ದಲಿತರು ಹಾಗೂ ಆದಿವಾಸಿಗಳು ಮೋದಿ ಸರಕಾರ ಮರಳಿ ಅಧಿಕಾರ ಪಡೆಯುವುದನ್ನು ಬಯಸುವುದಿಲ್ಲ. ಶೇ.55ರಷ್ಟು ದಲಿತರು ಹಾಗೂ ಶೇ.43ರಷ್ಟು ಆದಿವಾಸಿಗಳು ಮೋದಿ ಸರಕಾರ ಮರಳಿ ಅಧಿಕಾರ ಪಡೆಯಬಾರದು ಎಂದು ಬಯಸಿದ್ದಾರೆ. ಅಲ್ಲದೆ ಇತರ ಹಿಂದುಳಿದ ವರ್ಗ(ಒಬಿಸಿ)ದಲ್ಲಿ ಶೇ.42ರಷ್ಟು ಮಂದಿ ಮೋದಿ ಸರಕಾರದ ವಿರುದ್ಧವಾಗಿದ್ದಾರೆ.

ತಕ್ಷಣ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿಗೆ ಮತ ಹಾಕುವವರ ಪ್ರಮಾಣ ಈ ವರ್ಷದ ಆರಂಭದಲ್ಲಿ ಶೇ.34 ಆಗಿದ್ದರೆ ಈಗ ಶೇ.32ಕ್ಕೆ ಇಳಿದಿದೆ. ಇದು ಮೋದಿ ಸರಕಾರದ ಜನಪ್ರಿಯತೆ ಕುಸಿಯುತ್ತಿರುವುದರ ಸಾಕ್ಷಿಯಾಗಿದೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X