Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಶ್ವಾಸಮತ ಗೆದ್ದ ಎಚ್.ಡಿ.ಕುಮಾರಸ್ವಾಮಿ

ವಿಶ್ವಾಸಮತ ಗೆದ್ದ ಎಚ್.ಡಿ.ಕುಮಾರಸ್ವಾಮಿ

‘ರೈತರ ಸಾಲಮನ್ನಾಕ್ಕೆ ರಾಜ್ಯ ಸರಕಾರ ಬದ್ಧ’

ವಾರ್ತಾಭಾರತಿವಾರ್ತಾಭಾರತಿ25 May 2018 3:50 PM IST
share
ವಿಶ್ವಾಸಮತ ಗೆದ್ದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮೇ 25: ವಿಧಾನಸಭೆಯ ವಿಪಕ್ಷ ಬಿಜೆಪಿ ಸದಸ್ಯರ ಸಭಾತ್ಯಾಗದ ಮಧ್ಯೆ ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರ ವಿಶ್ವಾಸ ಮತಯಾಚನೆಯ ಅಗ್ನಿಪರೀಕ್ಷೆಯಲ್ಲಿ ಗೆದ್ದಿದೆ.

ಶುಕ್ರವಾರ ವಿಧಾನಸಭೆಯಲ್ಲಿ ನೂತನ ಸ್ಪೀಕರ್ ಆಯ್ಕೆ ಬಳಿಕ ಸ್ಪೀಕರ್ ಕೆ.ಆರ್. ರಮೇಶ್‌ಕುಮಾರ್ ಅವರು ವಿಶ್ವಾಸ ಮತಯಾಚನೆ ಪ್ರಕ್ರಿಯೆ ಆರಂಭಿಸಿದರು. ಸಭಾತ್ಯಾಗದಿಂದ ವಿಪಕ್ಷ ಸದಸ್ಯರ ಗೈರು ಹಾಜರಿಯ ಮಧ್ಯೆ ಧ್ವನಿಮತದ ಮೂಲಕ ಕುಮಾರಸ್ವಾಮಿ ನೇತೃತ್ವದ ಸರಕಾರ ಬಹುಮತ ಸಾಬೀತುಪಡಿಸಿದೆ ಎಂದು ರಮೇಶ್ ಕುಮಾರ್ ಪ್ರಕಟಿಸಿದರು.

ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಯಶಸ್ವಿಯಾಗುತ್ತಿದ್ದಂತೆ ಶಾಸಕರೆಲ್ಲರೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಶಿವಕುಮಾರ್ ಸೇರಿದಂತೆ ಹಲವು ನಾಯಕರನ್ನು, ಕಾಂಗ್ರೆಸ್-ಜೆಡಿಎಸ್ ಶಾಸಕರು ಅಭಿನಂದಿಸಿದರು.

ರೈತರ ಸಾಲಮನ್ನಾಕ್ಕೆ ಬದ್ಧ: ನಮ್ಮದ್ದು ಮೈತ್ರಿಕೂಟ ಸರಕಾರವಾಗಿದ್ದು, ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದಲ್ಲಿನ ರಾಷ್ಟ್ರೀಕೃತ ಮತ್ತು ಸಹಕಾರ ಬ್ಯಾಂಕುಗಳಲ್ಲಿನ ರೈತರ ಸಾಲಮನ್ನಾ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಕಟಿಸಿದರು.

ವಿಶ್ವಾಸಮತ ಯಾಚನೆ ಪ್ರಸ್ತಾಪ ಮಂಡಿಸಿ ಮಾತನಾಡಿದ ಕುಮಾರಸ್ವಾಮಿ, ಈಗಾಗಲೇ ರೈತರ ಸಾಲದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ತರಿಸಿಕೊಂಡಿದ್ದೇನೆ. ರೈತರ ಬಗ್ಗೆ ನಿಮ್ಮಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ನಮಗಿಲ್ಲ ಎಂದು ಬಿಎಸ್‌ವೈಗೆ ತಿರುಗೇಟು ನೀಡಿದರು.

ಪ್ರತಿಭಟನೆ ಸ್ಥಿತಿಗೆ ಬಿಡೆವು: ರಾಜ್ಯದಲ್ಲಿನ ರೈತರು ಸೇರಿದಂತೆ ಯಾವುದೇ ವರ್ಗ, ಸಮುದಾಯಗಳು ಮುಂದಿನ ದಿನಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುವ ವಾತಾವರಣ ಸೃಷ್ಟಿಯಾಗಲು ಮೈತ್ರಿ ಸರಕಾರ ಅವಕಾಶವನ್ನು ನೀಡುವುದಿಲ್ಲ. ಅದಕ್ಕೂ ಮೊದಲೇ ಸಮಸ್ಯೆಗಳ ಇತ್ಯರ್ಥಕ್ಕೆ ಸರಕಾರ ಕ್ರಮವಹಿಸಲಿದೆ ಎಂದು ಕುಮಾರಸ್ವಾಮಿ ಅಭಯ ನೀಡಿದರು.

ಹಿರಿಯರಾದ ಯಡಿಯೂರಪ್ಪನವರು ಪ್ರತಿಭಟನೆ-ಹೋರಾಟದ ಮೂಲಕ ತಮ್ಮ ದೇಹಕ್ಕೆ ದಂಡನೆ ಮಾಡಿಕೊಳ್ಳುವುದು ಬೇಡ. ರಾಜ್ಯದ ಜನರ ಕಷ್ಟ-ಕಾರ್ಪಣ್ಯಗಳ ಮಾಹಿತಿ ಇದ್ದರೆ ಸರಕಾರಕ್ಕೆ ಒದಗಿಸಲಿ. ಅವುಗಳನ್ನು ಪರಿಹರಿಸಲು ನಾವು ಬದ್ಧರಿದ್ದೇವೆ ಎಂದ ಅವರು, ಬಿಎಸ್‌ವೈ ಆರೋಗ್ಯ ಚೆನ್ನಾಗಿರಬೇಕು. ಅವರು ನೋವು ಪಡುವುದು ಬೇಡ ಎಂದರು.

ಅಧಿಕಾರದಾಸೆ ನನಗಿಲ್ಲ: ನಮ್ಮ ತಂದೆ ದೇವೇಗೌಡರು 10 ತಿಂಗಳು ಪ್ರಧಾನ ಮಂತ್ರಿ, 18 ತಿಂಗಳ ಮುಖ್ಯಮಂತ್ರಿ ಹಾಗೂ ಮೂರ್ನಾಲ್ಕು ವರ್ಷಗಳಷ್ಟು ಕಾಲ ಸಚಿವರಾಗಿ ಕೆಲಸ ಮಾಡಿದ್ದು, ಅವರು ಸುದೀರ್ಘ 50 ವರ್ಷಗಳ ರಾಜಕೀಯ ಜೀವನದಲ್ಲಿ ಅಧಿಕಾರ ಸಿಕ್ಕಿದ್ದು ಕೇವಲ ನಾಲ್ಕೈದು ವರ್ಷಗಳಷ್ಟೇ ಎಂದು ಸ್ಪಷ್ಟಪಡಿಸಿದರು.

ನನಗಾಗಲಿ, ನಮ್ಮ ಕುಟುಂಬದವರಾಗಲಿ, ಯಾವುದೇ ರೀತಿಯ ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ದೇವೇಗೌಡರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದಾಗ ಅಟಲ್ ಬಿಹಾರಿ ವಾಜಪೇಯಿ ಬೆಂಬಲ ನೀಡುವುದಾಗಿ ಒಂದು ಚೀಟಿ ಕಳುಹಿಸಿದ್ದರು. ಆದರೆ, ನನ್ನ ತಂದೆ ದೇವೇಗೌಡರು ಜಾತ್ಯತೀತವಾಗಿ ಗುರುತಿಸಿಕೊಂಡಿರುವ ತಾನು ಬಿಜೆಪಿ ಜೊತೆ ಹೋಗಲ್ಲ ಎಂದು ನಿರಾಕರಿಸಿದ್ದರು.

ಕಾಂಗ್ರೆಸ್ ಪಕ್ಷದ ನೆರವಿನಿಂದ ನನ್ನ ತಂದೆ ಪ್ರಧಾನಿಯಾದರು. ಇಂದು ನಾನು ಮುಖ್ಯಮಂತ್ರಿಯಾಗಿದ್ದೇನೆ. ನಾನು ಮತ್ತು ನನ್ನ ಭವಿಷ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಬಿಜೆಪಿಯೊಂದಿಗೆ ಹೋಗದೆ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿಗೆ ಒಪ್ಪಿಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

ಕಪ್ಪುಚುಕ್ಕೆ ಸರಿಪಡಿಸಿಕೊಳ್ಳುವ ಯತ್ನ : 2006ರಲ್ಲಿ ಬಿಜೆಪಿ ಜೊತೆ ಸರಕಾರ ರಚಿಸಿದನ್ನು ನೆನಪಿಸಿಕೊಂಡ ಕುಮಾರಸ್ವಾಮಿ, ಬಿಜೆಪಿಗೆ ಅಧಿಕಾರ ನೀಡದಿದ್ದಕ್ಕೆ ನನ್ನನ್ನು ‘ವಚನ ಭ್ರಷ್ಟ’ ಎಂದರು. ಆದರೆ, ನಾನು ಖಂಡಿತವಾಗಿಯೂ ವಚನ ಭ್ರಷ್ಟ ಅಲ್ಲ, ಅಂದಿನ ಪರಿಸ್ಥಿತಿ, ಪಕ್ಷವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯ ಇತ್ತು. ಈ ವಿಚಾರದಲ್ಲಿ ನನಗೆ ಅಂಟಿದ್ದ ಕಪ್ಪುಚುಕ್ಕೆ ಸರಿಪಡಿಸಿಕೊಳ್ಳುವ ಅವಕಾಶ ಸಿಕ್ಕಿದೆ ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಬಲವಾಗಿ ಸಮರ್ಥಿಸಿಕೊಂಡರು.

ಸ್ಪಷ್ಟ ಬಹುಮತ: ಬಿಜೆಪಿ 104 ಸ್ಥಾನಗಳನ್ನು ಪಡೆದಿದ್ದರೂ, ಅತಿದೊಡ್ಡ ಪಕ್ಷ. ಆದರೆ, ಅವರಿಗೆ ಅಗತ್ಯವಿರುವ ಸರಳ ಬಹುಮತವಿರಲಿಲ್ಲ. ಆದರೂ ಸರಕಾರ ರಚನೆ, ಕುದುರೆ ವ್ಯಾಪಾರ ಸೇರಿ 8-10ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆಗಳಾಗಿವೆ. ಆದರೆ, ಡಾ.ಅಂಬೇಡ್ಕರ್ ಅವರ ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶದಿಂದ ಪ್ರಜಾಪ್ರಭುತ್ವ ಬುಡಮೇಲು ಮಾಡಲು ಸಾಧ್ಯವಿಲ್ಲ ಎಂಬುದು ಅರ್ಥವಾಗಿದೆ ಎಂದರು.

ನನ್ನ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರಕ್ಕೆ ಕಾಂಗ್ರೆಸಿನ 78 ಹಾಗೂ ಜೆಡಿಎಸ್‌ನ 37 ಹಾಗೂ ಪಕ್ಷೇತರರಿಬ್ಬರು ಸೇರಿದಂತೆ ಒಟ್ಟು 117 ಮಂದಿ ಸದಸ್ಯರ ಬೆಂಬಲವಿದ್ದು, ಸರಳ ಬಹುಮತಕ್ಕೆ 111 ಸಂಖ್ಯಾಬಲದ ಅಗತ್ಯವಿದೆ. ಆದುದರಿಂದ ವಿಶ್ವಾಸಮತಯಾಚನೆ ಪ್ರಸ್ತಾವಕ್ಕೆ ಈ ಸದನ ಒಪ್ಪಿಗೆ ನೀಡಬೇಕೆಂದು ಕುಮಾರಸ್ವಾಮಿ ಮನವಿ ಮಾಡಿದರು.

ಆ ಬಳಿಕ ವಿಪಕ್ಷ ನಾಯಕ ಯಡಿಯೂರಪ್ಪ, 24ಗಂಟೆಗಳಲ್ಲಿ ಈ ಸರಕಾರ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ಸೋಮವಾರ(ಮೇ 28) ಕರ್ನಾಟಕ ಬಂದ್ ಕರೆ ನೀಡಲಾಗುವುದೆಂದು ಎಚ್ಚರಿಸಿ, ತಮ್ಮ ಸದಸ್ಯರೊಂದಿಗೆ ವಿಶ್ವಾಸಮತ ಯಾಚನೆ ಪ್ರಸ್ತಾವವನ್ನು ವಿರೋಧಿಸಿ ಸಭಾತ್ಯಾಗ ಮಾಡಿದರು.

ಈ ಮಧ್ಯೆ ನೂತನ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್, ವಿಶ್ವಾಸ ಮತಯಾಚನೆ ಪ್ರಸ್ತಾವಕ್ಕೆ ವಿಪಕ್ಷ ಸದಸ್ಯರ ಗೈರು ಹಾಜರಿಯ ಮಧ್ಯೆಯೇ ಧ್ವನಿಮತದ ಅಂಗೀಕಾರ ದೊರಕಿಸಿಕೊಟ್ಟರು. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರಕಾರ ಬಹುಮತ ಸಾಬೀತುಪಡಿಸಿದೆ.

‘ಪ್ರಧಾನಿ ಮೋದಿ ಕರ್ನಾಟಕ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹೊರತು ಮತ್ತೊಂದು ಪಕ್ಷಕ್ಕೆ ಸರಕಾರ ರಚಿಸಲು ಅವಕಾಶ ನೀಡುವುದಿಲ್ಲ ಎಂದಿದ್ದು ಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಉನ್ನತ ಸ್ಥಾನದಲ್ಲಿ ಕೂತ ಪ್ರಧಾನಿ ಮೋದಿಯವರಿಂದ ಇಂತಹ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಧಕ್ಕೆ’
-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X