ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ :ಕ್ಷೇತ್ರದಾದ್ಯಂತ ಮೇ 28ರಂದು ರಜೆ ಘೋಷಣೆ
ಬೆಂಗಳೂರು, ಮೇ 25: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮೇ 28ರಂದು ಕ್ಷೇತ್ರದಾದ್ಯಂತ ರಜೆ ಘೋಷಿಸಲಾಗಿದೆ.
ಚುನಾವಣೆ ದಿನದಂದು ಕ್ಷೇತ್ರ ವ್ಯಾಪ್ತಿಯ ಸರಕಾರಿ ಶಾಲಾ-ಕಾಲೇಜುಗಳು, ಕಚೇರಿಗಳು ಹಾಗೂ ಅನುದಾನಿತ ಶೈಕ್ಷಣಿಕ ವಿದ್ಯಾಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರಕಾರದ ಕಾರ್ಖಾನೆಗಳು ಸೇರಿದಂತೆ ಎಲ್ಲ ಕೈಗಾರಿಕೆ ಸಂಸ್ಥೆಗಳು, ಸಹಕಾರಿ ವಲಯದ ಸಂಘ ಸಂಸ್ಥೆಗಳ ನೌಕರರಿಗೆ ವೇತನ ಸಹಿತ ರಜೆ ನೀಡಬೇಕೆಂದು ಬೆಂ.ನ.ಜಿಲ್ಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆಂದು ಪ್ರಕಟನೆ ತಿಳಿಸಿದೆ.
Next Story





