ರಂಗ ಶಿಕ್ಷಣ ಡಿಪ್ಲೋಮಕ್ಕೆ ಅರ್ಜಿ ಆಹ್ವಾನ
ಉಡುಪಿ, ಮೇ 25: 2018-19ನೇ ಸಾಲಿನಲ್ಲಿ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಶಿಕ್ಷಣದ ಅವಧಿ ಒಂದು ವರ್ಷದಾಗಿದ್ದು, ಇದರ ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸೆಸೆಲ್ಸಿ ತೇರ್ಗಡೆ. ಪದವೀಧರರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಕರ್ನಾಟಕ ಹಾಗೂ ದೇಶದ ಖ್ಯಾತನಾಮ ರಂಗತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ.
ಒಂದು ವರ್ಷದ ಈ ಕೋರ್ಸ್ನಲ್ಲಿ ಭಾರತೀಯ ರಂಗಭೂಮಿ, ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ದಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯಲಿವೆ.
ಕಳರಿಪಯಟ್ಟು, ಯೋಗ, ಕಥಕ್ಕಳಿ, ಯಕ್ಷಗಾನ, ಕಂಸಾಳೆ, ಹೆಜ್ಜೆಮೇಳ, ವೀರಗಾಸೆ, ಪ್ರಸಾಧನ, ಬೆಳಕಿನ ವಿನ್ಯಾಸ, ವಸ್ತ್ರವಿನ್ಯಾಸ ಮುಂತಾದ ಕಾರ್ಯಾಗಾರಗಳ ಜೊತೆಗೆ ಕಾವ್ಯ, ಸಿನಿಮಾ, ಚಿತ್ರಕಲೆ ಕುರಿತಾದ ಕಮ್ಮಟಗಳು ನಡೆಯುತ್ತವೆ. ಒಂದು ವರ್ಷದಲ್ಲಿ ನಾಲ್ಕರಿಂದ ಐದು ನಾಟಕಗಳ ಅಭ್ಯಾಸ ಹಾಗೂ ಪ್ರದರ್ಶನ ಇರುತ್ತವೆ.
ಆಸಕ್ತರು ರಂಗಶಾಲೆ ವೆಬ್ಸೈಟ್-www.theatreschoolsanehalli.org- ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್ಲೋಡ್ ಮಾಡಿ ಜೂನ್ 25ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಜೂನ್ 27,28,29 ಮತ್ತು 30 ರಂದು ಸಂದರ್ಶನ ನಡೆಯಲಿವೆ. ಆಯ್ಕೆಯಾದ ಅ್ಯರ್ಥಿಗಳಿಗೆ ಜುಲೈ 15 ರಿಂದ ತರಗತಿಗಳು ಪ್ರಾರಂಭವಾಗಲಿವೆ ಸಾಣೇಹಳ್ಳಿ ಶ್ರೀಶಿವಕುಮಾರ ರಂಗ ಪ್ರವೇಶ ಶಾಲೆಯ ಪ್ರಾಚಾರ್ಯರಾದ ಜಗದೀ ಶ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.