ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ
ಉಡುಪಿ, ಮೇ 25: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ, (ಎನ್‌ಟಿಸಿಪಿ ಹಾಗೂ ಎನ್‌ಸಿಡಿ ವಿಭಾಗ) ಉಡುಪಿ ಹಾಗೂ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ ( ಕ್ಯಾನ್ಸರ್ ಆಸ್ಪತ್ರೆ) ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ಮುಕ್ತ ದಿನಾಚರಣೆ ಅಂಗವಾಗಿ ಅಸಾಂಕ್ರಾಮಿಕ ರೋಗಗಳ ಕುರಿತ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರ ಮೇ30ರಂದು ಬೆಳಗ್ಗೆ 9ರಿಂದ 1 ಗಂಟೆಯವರೆಗೆ ನಡೆಯಲಿದೆ.
ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
Next Story





