ಬಂಟರ ಮಾತೃ ಸಂಘದಿಂದ ಸನ್ಮಾನ

ಮಂಗಳೂರು, ಮೇ 25: ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ವಾರ್ಷಿಕ ಸರ್ವ ಸದಸ್ಯರ ಸಭೆ ಮತ್ತು ಬಹಿರಂಗ ಅಧಿವೇಶನದಲ್ಲಿ ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಮಾಜಿ ಲೋಕಾಯುಕ್ತ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಚಿನ್ನದ ಪದಕ ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ಎಸ್ ಶೆಟ್ಟಿ, ಜತೆ ಕಾರ್ಯದರ್ಶಿ ಎ. ಹೇಮನಾಥ ಶೆಟ್ಟಿ ಕಾವು, ಜೈರಾಜ್ ಶೆಟ್ಟಿ ಉಪಸ್ಥಿತರಿದ್ದರು.
Next Story





