Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಅತ್ಯಾಚಾರ ಸಂತ್ರಸ್ತೆ...

ಉತ್ತರ ಪ್ರದೇಶ: ಅತ್ಯಾಚಾರ ಸಂತ್ರಸ್ತೆ ಬಾಲಕಿಯ ದೂರು ದಾಖಲಿಸಲು ಒಪ್ಪದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ25 May 2018 10:02 PM IST
share
ಉತ್ತರ ಪ್ರದೇಶ: ಅತ್ಯಾಚಾರ ಸಂತ್ರಸ್ತೆ ಬಾಲಕಿಯ ದೂರು ದಾಖಲಿಸಲು ಒಪ್ಪದ ಪೊಲೀಸರು

ಲಕ್ನೊ, ಮೇ 25: 9ರ ಹರೆಯದ ಬಾಲಕಿಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಘಟನೆ ಉತ್ತರಪ್ರದೇಶದ ಉನ್ನಾವೊದಲ್ಲಿ ಬುಧವಾರ ನಡೆದಿದೆ. ಈ ಮಧ್ಯೆ, ಅತ್ಯಾಚಾರಕ್ಕೆ ಒಳಗಾಗಿ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯೊಂದಿಗೆ ಪೋಷಕರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದಾಗ ಒಂದು ಠಾಣೆಯಿಂದ ಮತ್ತೊಂದು ಠಾಣೆಗೆ ಅಲೆದಾಡಿಸಲಾಗಿದೆ ಎಂದು ಸಂತ್ರಸ್ತ ಬಾಲಕಿಯ ಕುಟುಂಬದವರು ದೂರಿದ್ದಾರೆ.

ತಮ್ಮ ಗ್ರಾಮದಿಂದ ಟ್ರಾಕ್ಟರ್‌ನಲ್ಲಿ ಆಗಮಿಸಿದ್ದ ಬಾಲಕಿಯ ಕುಟುಂಬದವರು ಗಂಗಾ ನದಿಯಲ್ಲಿ ಪವಿತ್ರಸ್ನಾನ ಮಾಡಿ ಅಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸುತ್ತಿದ್ದರು. ಈ ಸಂದರ್ಭ ಟ್ರಾಕ್ಟರ್ ಚಾಲಕನ ಪುತ್ರ ಛೋಟು ಎಂಬಾತ ಬಾಲಕಿಯನ್ನು ಜಾತ್ರೆಗೆ ಕರೆದೊಯ್ಯುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಜಾತ್ರೆಯ ಗದ್ದಲದಲ್ಲಿ ಬಾಲಕಿಯ ಚೀರಾಟ ಯಾರಿಗೂ ಕೇಳಿಲ್ಲ. ಅತ್ಯಾಚಾರ ನಡೆಸಿದ ಆರೋಪಿ ಪರಾರಿಯಾದ ಬಳಿಕ ಕುಟುಂಬದವರನ್ನು ಸೇರಿಕೊಂಡ ಬಾಲಕಿಯ ಬಟ್ಟೆಯಲ್ಲಿ ರಕ್ತದ ಕಲೆ ಕಂಡು ವಿಚಾರಿಸಿದಾಗ ಆಕೆ ವಿಷಯ ತಿಳಿಸಿದ್ದಾಳೆ. ತಕ್ಷಣ ಕುಟುಂಬದ ಸದಸ್ಯರು ಆಕೆಯನ್ನು ಸಮೀಪದ ಔರಾಸ್ ಪೊಲೀಸ್ ಠಾಣೆಗೆ ಕರೆದೊಯ್ದು ದೂರು ದಾಖಲಿಸಲು ಮುಂದಾಗಿದ್ದಾರೆ. ಆದರೆ ಪೊಲೀಸ್ ಸಿಬ್ಬಂದಿ ಇವರ ಮಾತನ್ನು ಕೇಳಲು ನಿರಾಕರಿಸಿದ್ದು ಎಫ್‌ಐಆರ್ ದಾಖಲಿಸಲೂ ಒಪ್ಪಲಿಲ್ಲ. ಹಲವು ಗಂಟೆ ಗಳ ಕಾಲ ಅಲ್ಲೇ ಕಾಯಿಸಿದ ಬಳಿಕ, ಘಟನೆ ನಡೆದ ಸ್ಥಳ ಸಫೀಪುರ್ ಠಾಣಾ ವ್ಯಾಪ್ತಿಗೆ ಬರುವುದರಿಂದ ಅಲ್ಲಿ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದ್ದಾರೆ.

  ಸಂತ್ರಸ್ತ ಬಾಲಕಿಯ ಕುಟುಂಬದವರನ್ನು ಪೊಲೀಸರು ಸತಾಯಿಸುತ್ತಿರುವುದನ್ನು ಕಂಡ ಯಾರೋ ವ್ಯಕ್ತಿಗಳು ವಾಟ್ಸಾಪ್‌ನಲ್ಲಿ ಸಂದೇಶ ರವಾನಿಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಸಂತ್ರಸ್ತ ಬಾಲಕಿಯ ಕುಟುಂಬದವರನ್ನು ಸಫೀಪುರ್ ಠಾಣೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದು ಅಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ವರದಿಗಾಗಿ ಕಾಯಲಾಗುತ್ತಿದೆ. ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉನ್ನಾವೊದ ಹಿರಿಯ ಪೊಲೀಸ್ ಅಧಿಕಾರಿ ಎಸ್.ಕೆ.ಸಿಂಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X