ಸನ್‌ರೈಸರ್ಸ್ ಫೈನಲ್‌ಗೆ

ಕೋಲ್ಕತಾ, ಮೇ 25: ಹನ್ನೊಂದನೇ ಆವೃತ್ತಿಯ ಐಪಿಎಲ್ ಟ್ವೆಂಟಿ -20 ಟೂರ್ನಿಯ ಕ್ವಾಲಿಫೈಯರ್ -2ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ 14 ರನ್‌ಗಳ ರೋಚಕ ಜಯ ಗಳಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಫೈನಲ್ ಪ್ರವೇಶಿಸಿದೆ.
ಶುಕ್ರವಾರ ಇಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 175 ರನ್ ಗಳಿಸಬೇಕಿದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 160ರನ್ ಗಳಿಸಿತು.
ಇದರೊಂದಿಗೆ ಫೈನಲ್ ಪ್ರವೇಶಿಸಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೇ 27ರಂದು ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
Next Story





