ಎರಡೂ ಕ್ಷೇತ್ರದ ಜನತೆ ನಮ್ಮ ಕೈ ಹಿಡಿಯಬೇಕು : ಸಿಎಂ ಕುಮಾರಸ್ವಾಮಿ ಮನವಿ
ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರಗಳ ಚುನಾವಣೆ

ಬೆಂಗಳೂರು, ಮೇ 25: ರಾಜರಾಜೇಶ್ವರಿ ನಗರ, ಜಯನಗರ ವಿಧಾನಸಭಾ ಕ್ಷೇತ್ರಗಳ ಚುನಾವಣೆ ನಮಗೆ ಅತ್ಯಂತ ಮುಖ್ಯ. ಇಲ್ಲಿ ಅಭ್ಯರ್ಥಿಗಳು ಮುಖ್ಯವಲ್ಲ, ಬಿಜೆಪಿ ಅಭ್ಯರ್ಥಿ ಗೆಲ್ಲಬಾರದು. ಹೀಗಾಗಿ ಎರಡೂ ಕ್ಷೇತ್ರದ ಜನತೆ ನಮ್ಮ ಕೈ ಹಿಡಿಯಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದೇವೆ.
ಈ ಸಂಬಂಧ ಅಭ್ಯರ್ಥಿಗಳ ಅಭಿಪ್ರಾಯವನ್ನು ಪಡೆದು ಶೀಘ್ರದಲ್ಲೆ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು. ಆರ್.ಆರ್.ನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮುಂದುವರಿಯಬೇಕೇ ಅಥವಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕೇ ಎಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಣೆ ನೀಡಿದರು.
Next Story





