Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೌರ ಕಾರ್ಮಿಕರ ಗೋಳು ಕೇಳದ ಅಧಿಕಾರಿಗಳು :...

ಪೌರ ಕಾರ್ಮಿಕರ ಗೋಳು ಕೇಳದ ಅಧಿಕಾರಿಗಳು : ಹಲವು ತಿಂಗಳಿನಿಂದ ಪೌರಕಾರ್ಮಿಕರಿಗೆ ಸಂಬಳವಿಲ್ಲ

ವಾರ್ತಾಭಾರತಿವಾರ್ತಾಭಾರತಿ25 May 2018 11:41 PM IST
share

ಬೆಂಗಳೂರು, ಮೇ 25: ಬಿಬಿಎಂಪಿ ಕೇಂದ್ರ ಕಚೇರಿಯ ಕೂಗಳತೆಯ ದೂರದಲ್ಲಿ ಸ್ವಚ್ಛತೆಯ ಕೆಲಸ ಮಾಡುವ ಪೌರಕಾರ್ಮಿಕರಿಗೆ ಕಳೆದ 5 ತಿಂಗಳಿಂದ ಸಂಬಳ ಕೊಡದೆ ಬಿಟ್ಟಿ ಚಾಕರಿ ಮಾಡಿಸಿಕೊಳ್ಳಲಾಗುತ್ತಿದೆ. ಸಂಬಳವಿಲ್ಲದೆ ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ದಿನಕ್ಕೆ ಮೂರು ಹೊತ್ತು ಊಟ ಹಾಕಲು ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ಬಿಬಿಎಂಪಿ ಕೇಂದ್ರ ಕಚೇರಿ ಸಮೀಪವಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಕಳೆದ 5ತಿಂಗಳಿಂದ ಸಂಬಳ ಕೊಡದೆ ಬಿಬಿಎಂಪಿ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷತನವನ್ನು ಖಂಡಿಸಿ ಕಳೆದ ಎರಡು ದಿನದಿಂದ ಧರ್ಮರಾಯಸ್ವಾಮಿ ದೇವಸ್ಥಾನ ಸೇರಿದಂತೆ ಸುತ್ತಮುತ್ತ ಕಸವನ್ನು ತೆಗೆಯದೆ ಪೌರಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪೌರ ಕಾರ್ಮಿಕರ ಸಮಸ್ಯೆ ಕೇವಲ ಒಂದು, ಎರಡು ವಾರ್ಡ್‌ಗಳಿಗೆ ಸೀಮಿತವಾಗಿಲ್ಲ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲೂ ಪೌರಕಾರ್ಮಿಕರಿಗೆ ಸರಿಯಾದ ಸಂಬಳ ಸಿಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಚುನಾವಣೆಯ ನೆಪವೊಡ್ಡಿ ನುಣುಚಿಕೊಳ್ಳುತ್ತಿದ್ದಾರೆ ಎಂದು ಪೌರಕಾರ್ಮಿಕರ ನೌಕರರ ಸಂಘದ ನಾಯಕಿ ನಿರ್ಮಲಾ ಆರೋಪಿಸಿದರು.

ನನ್ನ ಬದುಕು ಯಾರಿಗೂ ಬೇಡ: ನನ್ನ ಮಕ್ಕಳಿಗೆ ನಾನೆ ದಿಕ್ಕು. ನಾನೇನೋ ಹಸಿವು ತಡೆದುಕೊಳ್ಳಬಲ್ಲೆ. ಆದರೆ ನನ್ನ ಎರಡು ಮಕ್ಕಳು ತಡೆಯಲ್ಲ. ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತಿಲ್ಲ. ಶಾಲೆಗಳು ಪ್ರಾರಂಭವಾಗಿವೆ. ಒಂದು ಜೊತೆ ಬಟ್ಟೆ ಕೊಡಿಸಲು ಆಗುತ್ತಿಲ್ಲ. ಕಳೆದ 5ತಿಂಗಳಿನಿಂದ ಕೆಲಸ ಮಾಡಿಯೂ ಸಂಬಳ ಸಿಗದೆ, ಮನೆ ನಡೆಸಲು ಪರದಾಡುತ್ತಿದ್ದೇನೆಂದು ಪೌರಕಾರ್ಮಿಕ ಮಹಿಳೆ ತನ್ನ ನೋವನ್ನು ಹಂಚಿಕೊಂಡರು.

ಪೌರಕಾರ್ಮಿಕರು ಸಮಸ್ಯೆಯನ್ನು ಬಗೆ ಹರಿಸುವಂತಹ ಕಾಳಜಿ ಅಧಿಕಾರಿಗಳಿಗೆ ಇಲ್ಲವಾಗಿದೆ. ಪೌರಕಾರ್ಮಿಕರ ಕುರಿತು ಕಿಂಚಿತ್ ಕಾಳಜಿ ವಹಿಸಿದರೂ ಸಮಸ್ಯೆಗಳನ್ನು ಸುಲಭವಾಗಿ ಬಗೆ ಹರಿಸಬಹುದು. ತುತ್ತು ಅನ್ನಕ್ಕಾಗಿ ದುಡಿಯುತ್ತಿರುವ ಪೌರ ಕಾರ್ಮಿಕರಿಗೆ ಅವರ ಶ್ರಮಕ್ಕೆ ತಕ್ಕ ಸಂಬಳ ಕೊಡದೆ ಸತಾಯಿಸುತ್ತಿರುವುದು ಮನುಷ್ಯತ್ವವಲ್ಲ. ಪೌರಕಾರ್ಮಿಕರಿಗೆ ಸಂಬಳ ಕೊಡದೆ ಶೋಷಿಸುತ್ತಿರುವ ಬಿಬಿಎಂಪಿ ವಿರುದ್ಧ ಶೀಘ್ರದಲ್ಲೆ ದೊಡ್ಡ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
-ನಿರ್ಮಲಾ, ಪೌರಕಾರ್ಮಿಕ ಸಂಘದ ನಾಯಕಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X