Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಲ್‌ಬಾಗ್‌ನಲ್ಲಿ ಮಾವು-ಹಲಸು ಮೇಳಕ್ಕೆ...

ಲಾಲ್‌ಬಾಗ್‌ನಲ್ಲಿ ಮಾವು-ಹಲಸು ಮೇಳಕ್ಕೆ ಚಾಲನೆ

ಬೆಳೆಗಾರರಿಗೆ ಯೋಗ್ಯ ಬೆಲೆ- ಗ್ರಾಹಕರಿಗೆ ತಾಜಾ ಹಣ್ಣು

ವಾರ್ತಾಭಾರತಿವಾರ್ತಾಭಾರತಿ25 May 2018 11:48 PM IST
share

ಬೆಂಗಳೂರು, ಮೇ 25: ಪ್ರತಿ ವರ್ಷದಂತೆ ಈ ವರ್ಷವೂ ಲಾಲ್‌ಬಾಗ್‌ನಲ್ಲಿ ಮಾವು ಮತ್ತು ಹಲಸು ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮೇ 25ರಿಂದ ಜೂನ್ 15ರವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ಮೇಳಕ್ಕೆ ಬದಾಮಿ ತಳಿ ಸೇರಿ ಒಟ್ಟು 12 ತಳಿವಾರು ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣುಗಳು ಮಾರಾಟ ಮೇಳಕ್ಕೆ ಬಂದಿವೆ.

ಲಾಲ್‌ಬಾಗ್‌ನಲ್ಲಿ 90 ಸುಸಜ್ಜಿತ ಮಾರಾಟ ಮಳಿಗೆಗಳಿದ್ದು, ಈ 90 ಮಳಿಗೆಗಳಲ್ಲಿ 80 ಮಳಿಗೆಗಳನ್ನು ಮಾವು ಬೆಳಗಾರರಿಗೆ ಹಾಗೂ 10 ಮಳಿಗೆಗಳನ್ನು ಹಲವು ಬೆಳೆಗಾರರಿಗೆ ನೀಡಲಾಗಿದ್ದು, ಮೇಳದ ಅವಧಿಯಲ್ಲಿ ಗ್ರಾಹಕರು ಯೋಗ್ಯವಾದ ಬೆಲೆಗೆ ತಾಜಾ ಹಣ್ಣುಗಳನ್ನು ಕೊಂಡುಕೊಳ್ಳಬಹುದಾಗಿದೆ. ಸಹಜವಾಗಿ ಮಾಗಿದ ಅಥವಾ ಇಥಲೀನ್ ಉಪಚರಿಸಿ ಮಾಗಿಸಿದ ಹಣ್ಣುಗಳನ್ನು ಮಾತ್ರ ಮಾರುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕ ವೈ.ಎಸ್.ಪಾಟೀಲ್ ಹೇಳಿದರು.

ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ಸಹಜವಾಗಿ ಮಾಗಿದ ಹಣ್ಣುಗಳನ್ನು ರೈತರ ತೋಟದಿಂದ ನೇರವಾಗಿ ಒದಗಿಸಲಾಗುವುದು. ಮಾವು ಮತ್ತು ಹಲಸು ಹಣ್ಣುಗಳ ಬೆಳೆಗಾರರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಿ, ಬೆಳೆಗಾರರಿಗೆ ಯೋಗ್ಯ ಬೆಲೆ ಹಾಗೂ ಗ್ರಾಹಕರಿಗೆ ರುಚಿಯಾದ ಉತ್ಕೃಷ್ಟ ಗುಣಮಟ್ಟದ ತಾಜಾ ಹಣ್ಣುಗಳನ್ನು ಯೋಗ್ಯ ಬೆಲೆಗೆ ದೊರಕುವಂತೆ ಮಾಡುವುದೇನಮ್ಮ ಉದ್ದೇಶ ಎಂದು ತಿಳಿಸಿದರು.

ಮಾವು ಮತ್ತು ಹಲಸಿನಲ್ಲಿರುವ ತಳಿಗಳ ವೈವಿದ್ಯತೆ ಮತ್ತು ವಿಶಿಷ್ಟತೆಗಳ ಸಂಪತ್ತಿನ ಪರಿಚಯ ಮತ್ತು ಆಸ್ವಾದನೆಗೆ ಅವಕಾಶ ಕಲ್ಪಿಸಲಾಗಿದೆ. ಮಾವು ಮತ್ತು ಹಲಸು ಪ್ರದರ್ಶನದಲ್ಲಿ 30-40 ಮಾವಿನ ಹಾಗೂ 10-12 ಹಲಸು ತಳಿಗಳನ್ನು ಪ್ರರ್ದಶನಕ್ಕೆ ಇಡಲಾಗಿದೆ ಎಂದು ವೈ.ಎಸ್.ಪಾಟೀಲ್ ಹೇಳಿದರು.
1 ಸಾವಿರ ಟನ್ ಮಾವಿನ ಹಣ್ಣನ್ನು ಮಾರಾಟ ಮಾಡಲು ಗುರಿಯಿಟ್ಟುಕೊಂಡಿದ್ದು, 1 ಸಾವಿರಕ್ಕೂ ಹೆಚ್ಚು ವಿವಿಧ ತಳಿಯ ಹಣ್ಣುಗಳು ಮಾರಾಟಕ್ಕೆ ಇಡಲಾಗಿದೆ ಎಂದು ತಿಳಿಸಿದರು.

ಅಲ್ಲದೆ, ಕೆಂಪೆಗೌಡ ರಸ್ತೆಯ ಎಫ್‌ಕೆಸಿಸಿಐ ಆವರಣದಲ್ಲಿ 10 ಮಳಿಗೆಗಳನ್ನು, ಕಬ್ಬನ್ ಪಾರ್ಕ್ ಆವರಣದಲ್ಲಿ 10 ಮಳಿಗೆಗಳು ಹಾಗೂ ಮೆಟ್ರೋ ನಿಲ್ದಾಣಗಳಲ್ಲಿ 22 ಮಳಿಗೆಗಳನ್ನು ತೆರೆಯಲಾಗಿದೆ. ಮೇಳವು ಲಾಲ್‌ಬಾಗ್ ಸೇರಿ ಮತ್ತಿತರ ಕಡೆಗಳಲ್ಲಿ ಪ್ರತಿದಿನ ಬೆಳಗ್ಗೆ 8ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಗ್ರಾಹಕರಿಗೆ ಮುಕ್ತವಾಗಿರಲಿದೆ.

ಪ್ರಥಮ ಬಾರಿಗೆ ಲಾಲ್‌ಬಾಗ್ ಮಾವು ಮೇಳದ ಮಳಿಗೆಗಳಲ್ಲಿ ಹಣ್ಣನ್ನು ಖರೀದಿಸುವ ಗ್ರಾಹಕರಿಗೆ ಮೊಬೈಲ್ ಸಂದೇಶ್(ಎಸ್‌ಎಂಎಸ್) ಮೂಲಕ ಹಣ ಪಾವತಿಸಲು ಮೊಬೈಲ್ ಆ್ಯಪ್ ಬಿಲ್ಲಿಂಗ್ ಅನ್ನು ನಿಗಮದ ವತಿಯಿಂದ ಪ್ರಾಯೋಗಿಕವಾಗಿ ಅಳಡಿಸಲಾಗಿದೆ.

ಮಾವಿನ ಹಣ್ಣಿನ ದರಪಟ್ಟಿ: ಬಾದಾಮಿ-70 ರೂ., ರಸಪುರಿ-60 ರೂ., ಮಲ್ಲಿಕಾ-80 ರೂ., ಸೇಂದೂರ-45 ರೂ., ಸಕ್ಕರೆ ಗುತ್ತಿ-90 ರೂ., ಮಲಗೋವಾ-110 ರೂ., ಬಂಗನಪಲ್ಲಿ-56 ರೂ., ದಶೇರಿ-100 ರೂ., ತೋತಾಪುರಿ-27 ರೂ., ಕಾಲಾಪಾಡ್-85 ರೂ., ಅಮ್ರಪಾಲಿ-68 ರೂ., ಕೇಸರ್ -50 ರೂಪಾಯಿಗೆ ಖರೀದಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X