Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರ ಟಮಕದ ಮಹಾವಿದ್ಯಾಲಯದಲ್ಲಿ ಜೂ.1...

ಕೋಲಾರ ಟಮಕದ ಮಹಾವಿದ್ಯಾಲಯದಲ್ಲಿ ಜೂ.1 ರಿಂದ ಹಲಸು ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ26 May 2018 6:26 PM IST
share

ಬೆಂಗಳೂರು, ಮೇ 26: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಸಹಕಾರದೊಂದಿಗೆ ‘ಹಲಸು ಮಹೋತ್ಸವ’ ವನ್ನು ಜೂ.1 ಮತ್ತು 2 ರಂದು ಕೋಲಾರದ ಟಮಕ ಬಳಿಯಿರುವ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ಎಲ್.ಮಹೇಶ್ವರ್, ಹಲಸು ಬರ ಸಹಿಷ್ಣುವಾದುದಾಗಿದ್ದು, ಮಳೆಯಾಶ್ರಿತ ಬೇಸಾಯಕ್ಕೆ ಶ್ರೇಷ್ಠ ಬೆಳೆಯಾಗಿದೆ. ಈ ನಿಟ್ಟಿನಲ್ಲಿ ಹಲಸು ಹಣ್ಣಿನ ಉತ್ತೇಜನಕ್ಕಾಗಿ ಹಾಗೂ ರೈತರನ್ನು ಆರ್ಥಿಕ ಸಬಲರನ್ನಾಗಿಸಿ, ಉದ್ದಿಮೆಯ ಮಹತ್ವ ಪಡೆದು, ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಮಹೋತ್ಸವದಲ್ಲಿ ಹಲಸಿನ ಇತಿಹಾಸ, ವೈವಿಧ್ಯತೆ, ಶಿಕ್ಷಣ ಹಾಗೂ ಹಲಸಿನ ತೋಟಗಳನ್ನು ಬೆಳೆಸಲು ಅಗತ್ಯವಾದ ಮಾರ್ಗದರ್ಶನ ನೀಡಲಾಗುತ್ತದೆ. ಅಲ್ಲದೆ, ಇಲ್ಲಿ ವಿವಿಧ ಹಲಸಿನ ಭಕ್ಷಗಳು, ಮೌಲ್ಯವರ್ದನ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ. ಒಂದೇ ಸೂರಿನಡಿ ಹಲಸಿನ ವಿವಿಧ ತಳಿಗಳು, ಉತ್ಪನ್ನಗಳು, ವಿಶೇಷ ಅಥವಾ ಅಪರೂಪದ ಆಕರ್ಷಕ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಹಲಸಿನ ವೈಜ್ಞಾನಿಕ ಬೇಸಾಯ, ಮುಕುಟ ನಿರ್ವಹಣೆ, ಸಸ್ಯ ಸಂರಕ್ಷಣೆ, ಕೊಯ್ಲು ಮತ್ತು ಮಾಗುವಿಕೆ ಸೇರಿದಂತೆ ವಿವಿಧ ವಿಷಯಗಳನ್ನು ತಿಳಿಸಲಾಗುತ್ತದೆ. ಒಟ್ಟಾರೆಯಾಗಿ ಮಹೋತ್ಸವವು ದೇಶದಲ್ಲಿ ತೋಟಗಾರಿಕೆ ಬೆಳೆ ಆಧಾರಿತ ಪ್ರವಾಸೋದ್ಯಮ ಪ್ರಚಾರಕ್ಕೆ ವೇದಿಕೆಯಾಗಲಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿಚಾರಗೋಷ್ಠಿಗಳು, ಮೇಳಗಳು, ಮಾಹಿತಿ ತಂತ್ರಜ್ಞಾನಗಳ ಮೂಲಕ ವಿಸ್ತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ರೈತರು, ಗ್ರಾಹಕರು, ಉದ್ಯಮಿಗಳು ಹಾಗೂ ಆಸಕ್ತ ಸಂಘ-ಸಂಸ್ಥೆಗಳಿಗೆ ಬೇಕಾಗುವ ಸಮಗ್ರ ತೋಟಗಾರಿಕಾ ತಂತ್ರಜ್ಞಾನವನ್ನು ತಲುಪುವಂತೆ ತಾಂತ್ರಿಕ ಸಲಹಾ ವೇದಿಕೆಯನ್ನು ನಿರ್ಮಾಣ ಮಾಡಿದ್ದು, ವಿಶೇಷವಾಗಿ ಹಾರ್ಟಿ ಆಫ್ ತಂತ್ರಜ್ಞಾನ ಮುಖಾಂತರ ರೈತರಿಗೆ ಮತ್ತು ಉದ್ದಿಮೆದಾರರಿಗೆ ಅಂಗೈಯಲ್ಲಿಯೇ ತೋಟಗಾರಿಕೆ ಸಂಬಂಧ ಮಾಹಿತಿ ಹಾಗೂ ಪರಿಹಾರ ನೀಡುವ ಸಾಧನ ಪೂರೈಕೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ‘ಹಣ್ಣು ಸಂಸ್ಕರಣಾ ಬಳಕೆ ಘಟಕ’ವನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ರೈತರು, ರೈತ ಉತ್ಪಾದಕ ಸಂಸ್ಥೆಗಳು, ಸಂಶೋಧಕರು, ವಿಜ್ಞಾನಿಗಳು, ವಿಸ್ತರಣಾ ಹಾಗೂ ಸ್ವ ಸಹಾಯ ಗುಂಪಿನ ಕಾರ್ಯಕರ್ತರು, ರೈತ ಮಹಿಳೆಯರು, ಕೃಷಿ ಪರಿಕರ ವಿತರಕರು, ಉದ್ದಿಮೆದಾರರು, ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ಆಡಳಿತಗಾರರು ಇಲ್ಲಿ ಚರ್ಚೆ ಮತ್ತು ಸಂವಹನ ಮೂಲಕ ಹಲಸಿನ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ. ಈ ಮಹೋತ್ಸವದಲ್ಲಿ ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ ವಿವಿಧ ಸ್ಥಳಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X