ಭಟ್ಕಳ: ಸರ್ಪನಕಟ್ಟೆ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಭಟ್ಕಳ, ಮೇ 26: ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಪನಟ್ಟೆ ಬಳಿಯ ಹೊಳೆಯೊಂದರಲ್ಲಿ ಅಪರಿಚಿತ ಮೃತದೇಹವೊಂದು ಶನಿವಾರ ಪತ್ತೆಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಠಾಣೆ ಪೊಲೀಸರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ. 3-4 ದಿನಗಳ ಹಿಂದೆಯೇ ವ್ಯಕ್ತಿಯು ನೀರನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ಯಾವುದೇ ಗುರುತು ಪತ್ತೆಯಾಗಿರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಆತ್ಮಹತ್ಯೆಯೋ ಆಥವಾ ಕೊಲೆಯೋ ಎಂಬುದನ್ನು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.
Next Story