ಯಡಿಯೂರಪ್ಪ ವಿರುದ್ಧ ಡಿಜಿಗೆ ದೂರು

ಬೆಂಗಳೂರು, ಮೇ 26: ನ್ಯಾಯಾಲಯವೇ ರಾಜ್ಯ ಬಂದ್‌ಗೆ ಅವಕಾಶ ಇಲ್ಲ ಎಂದು ಸೂಚಿಸಿದ್ದರೂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.
ಶನಿವಾರ ದೂರು ನೀಡಿರುವ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ಸುಪ್ರೀಂಕೋರ್ಟ್ ಆದೇಶದ ವಿರುದ್ಧವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಸೋಮವಾರ ಬಂದ್‌ಗೆ ಕರೆ ಕೊಟ್ಟಿದ್ದಾರೆ. ಅಲ್ಲದೆ, ಕೇರಳ ಜೇಮ್ಸ್ ಮ್ಯಾರಿಟನ್ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣದಲ್ಲಿ ಬಂದ್‌ಗೆ ಅನುಮತಿ ಇಲ್ಲ ಎಂದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹೋರಾಟಗಾರ ವಾಟಾಳ್ ನಾಗರಾಜ್ ಸಹ ಬಂದ್‌ಗೆ ಕರೆ ಕೊಟ್ಟಾಗ ನ್ಯಾಯಾಲಯ ಬಂದ್ ಕರೆ ತಪ್ಪುಎಂದು ಸೂಚಿಸಿತ್ತು. ಇಷ್ಟಾದರೂ ಈಗ ಯಡಿಯೂರಪ್ಪ ಈ ರೀತಿ ಬಂದ್ ಬಗ್ಗೆ ಹೇಳಿಕೆ ನೀಡುತ್ತಾ ಇದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳಬೇಕೆಂದು ಮುಕುಂದರಾಜ್ ದೂರಿನಲ್ಲಿ ಕೋರಿದ್ದಾರೆ.
Next Story





