ಬೆಂಗಳೂರು: ಈಜಲು ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಬೆಂಗಳೂರು, ಮೇ 26: ಬಾವಿಯಲ್ಲಿ ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರವೀಣ್(24) ಎಂಬಾತ ಮೃತಪಟ್ಟಿರುವ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದಾರೆ.
ಪ್ರವೀಣ್ ತನ್ನ ಐದು ಜನ ಸ್ನೇಹಿತರೊಂದಿಗೆ ಆನೇಕಲ್ ಸಮೀಪದ ಹಾರುಗದ್ದೆಯ ಸೀತನಾಯ್ಕನಹಳ್ಳಿಗೆ ತೆರಳಿ ಮೋಜುಮಸ್ತಿಯಲ್ಲಿ ತೊಡಗಿದ್ದ ಎನ್ನಲಾಗಿದೆ. ಇದೇ ವೇಳೆ ಸ್ನೇಹಿತರು ಸಮೀಪದಲ್ಲೇ ಇದ್ದ ಬಾವಿಯಲ್ಲಿ ಈಜಾಡಲು ತೆರಳಿದ್ದರು.
ಈಜು ಬಾರದಿದ್ದರೂ ಪ್ರವೀಣ್ ಬಾವಿಗೆ ದುಮುಕಿದ ಪರಿಣಾಮ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜಿಗಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





