ವಯೋಶ್ರೇಷ್ಠ ಸನ್ಮಾನ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಮೇ 26: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಹೊಸದಿಲ್ಲಿ ಇವರು 2018ನೇ ಸಾಲಿನ ಹಿರಿಯ ನಾಗರಿಕರಿಗೆ ನೀಡುವ ವಯೋಶ್ರೇಷ್ಠ ಸನ್ಮಾನಕ್ಕಾಗಿ 13 ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿ ಹಾಗೂ ನಗರಾಭಿವೃದ್ಧಿ ಮತ್ತು ಸ್ಥಳೀಯ ಸಂಸ್ಥೆಗಳಿಗಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ31 ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ರಜತಾದ್ರಿ, ಮಣಿಪಾಲ (ದೂರವಾಣಿ:0820-2574810/811) ಇಲ್ಲಿಂದ ಪಡೆದು, ಅರ್ಜಿಗಳನ್ನು 2 ಪ್ರತಿಗಳಲ್ಲಿ ಆಂಗ್ಲ ಭಾಷೆಯಲ್ಲಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





