ಮೌಂಟ್ ಎವರೆಸ್ಟ್ ಶಿಖರವನ್ನೇರಿದ ವಿಕ್ರಮ್‌ಗೆ ಸನ್ಮಾನ
ಬೆಂಗಳೂರು, ಮೇ 26: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕರಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾರ್ಯ ನಿರ್ವಸುತ್ತಿರುವ ಸಿ.ವಿಕ್ರಮ್ ಮೌಂಟ್ ಎವರೆಸ್ಟ್ ಶಿಖರವನ್ನೇರಿ ಸಾಧನೆ ಮಾಡಿರುವುದನ್ನು ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಸನ್ಮಾನ ಮಾಡಿ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಟಿ ಶ್ರೀಧರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಯರಾಂ, ಮುಖ್ಯಮಂತ್ರಿಯ ಉಪ ಕಾರ್ಯದರ್ಶಿ ಚಾರುಲತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story





