ಜೂ.8 ರಂದು ಬೆಂಗಳೂರು ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ಮತದಾನ
ಪದವೀಧರ ಕ್ಷೇತ್ರದಲ್ಲಿ 22, ಶಿಕ್ಷಕರ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು ಸ್ಪರ್ಧೆ

ಬೆಂಗಳೂರು, ಮೇ 26: ಚುನಾವಣಾ ಆಯೋಗದ ನಿರ್ದೇಶನದನ್ವಯ ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಜೂ.8ರಂದು ಮತದಾನ, ಜೂ.12ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಶಿವಯೋಗಿ ಸಿ.ಕಳಸದ ತಿಳಿಸಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ವ್ಯಾಪ್ತಿ ಒಳಗೊಂಡಿರುತ್ತದೆ. ಹಾಗೆಯೇ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳು ಒಳಪಟ್ಟಿರುತ್ತವೆ ಎಂದು ತಿಳಿಸಿದರು.
22ಅಭ್ಯರ್ಥಿಗಳು ಕಣದಲ್ಲಿರುವ ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಒಟ್ಟು 65,354 ಮತದಾರರಿದ್ದು, 38451 ಪುರುಷರು, 26891ಮಹಿಳಾ ಮತದಾರರಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿ 36ಮುಖ್ಯ ಮತಗಟ್ಟೆಗಳು, 46ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು 82ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ದರ್ಪಣ್ ಜೈನ್ ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
14 ಅಭ್ಯರ್ಥಿಗಳು ಕಣದಲ್ಲಿರುವ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 19,402 ಮತದಾರರಿದ್ದು, ಅದರಲ್ಲಿ 13461ಪುರುಷರು ಹಾಗೂ 5940 ಮಹಿಳಾ ಮತದಾರರಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿ 31ಮುಖ್ಯ ಮತಗಟ್ಟೆಗಳು, 6ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು 37 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಮಂಜುನಾಥ್ ಪ್ರಸಾದ್‌ರನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದರು.
ಪ್ರತಿ ಮತಗಟ್ಟೆ ಕೇಂದ್ರಕ್ಕೆ 1ಪಿಆರ್‌ಒ, 1ಎಪಿಆರ್‌ಒ ಹಾಗೂ 2ಪಿಒ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಶೇ.10ರಂತೆ ಮೀಸಲು ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ ಮೈಕ್ರೊ ಅಬ್ಸರ್ವರ್ ನೇಮಕ. ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತು ಪರಿಶೀಲಿಸಲು 16ಫೈಯಿಂಗ್ ಸ್ಕ್ವಾಡ್‌ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
-ಮತದಾನವು ಬೆಳಗ್ಗೆ 8ರಿಂದ 4ರವರಗೆ ಇರುತ್ತದೆ.
-ಮತ ಎಣಿಕೆಯು ನಗರದ ರೇಸ್‌ಕೋರ್ಸ್ ರಸ್ತೆಯ ರಾಮನಾರಾಯಣ್ ಚಲ್ಲಾರಾಮ್ ಕಾಲೇಜಿನಲ್ಲಿ ನಡೆಯಲಿದೆ
-ಮತ ಎಣಿಕೆಯು ಬೆಳಗ್ಗೆ 8ರಿಂದ ಪ್ರಾರಂಭವಾಗುತ್ತದೆ.
-ಮತದಾರರ ಎಡಗೈ ಮಧ್ಯದ ಬೆರಳಿಗೆ ಶಾಯಿ ಹಾಕಲಾಗಿದೆ.
-ಜೂ.6ರಂದು ಸಂಜೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.
-ಪ್ರತಿ ಮತಗಟ್ಟೆಗೆ ಒಬ್ಬರು ವೀಡಿಯೋಗ್ರಾಫರ್.
ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿಗಳು
-ಅಚ್ಚೇಗೌಡ ಶಿವಣ್ಣ-ಜೆಡಿಎಸ್
-ಅ.ದೇವೇಗೌಡ-ಬಿಜೆಪಿ
-ಪ್ರಕಾಶ್.ಕೆ-ಸಿಪಿಎಂ
-ರಾಮೋಜಿಗೌಡ-ಕಾಂಗ್ರೆಸ್ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ
-ಡಾ.ವೈ.ಎ.ನಾರಾಯಣಸ್ವಾಮಿ-ಬಿಜೆಪಿ
-ರಮೇಶ್‌ಬಾಬು-ಜೆಡಿಎಸ್
-ಎಂ.ರಾಮಪ್ಪ-ಕಾಂಗ್ರೆಸ್







