ಬಸ್ -ಬೈಕ್ ಡಿಕ್ಕಿ: ಸವಾರ ಮೃತ್ಯು
ಕಾರ್ಕಳ, ಮೇ 26: ಕುಕ್ಕುಂದುರು ಗ್ರಾಮದ ಅಯ್ಯಪ್ಪ ನಗರ ಎಂಬಲ್ಲಿ ಮೇ 25ರಂದು ರಾತ್ರಿ 9.15ರ ಸುಮಾರಿಗೆ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹರಿಯಣ್ಣ ನಾಯಕ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಬಸ್, ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆಯಿತ್ತನೆಲ್ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಹರಿಯಣ್ಣ ಮಣಿಪಾಲ ಆಸ್ಪತ್ರೆಗೆ ಸಾಗಿಸುವಾಗ ರಾತ್ರಿ 10:28ರ ಸುಮಾರಿಗೆ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





