ನೂತನ ಮುಖ್ಯಮಂತ್ರಿಯನ್ನು ಅಭಿನಂದಿಸಿದ ಎಸ್‍ಡಿಪಿಐ ನಿಯೋಗ

ಬೆಂಗಳೂರು,ಮೇ.27: ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರವರ ನಿವಾಸದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ಕರ್ನಾಟಕ ರಾಜ್ಯ ಸಮಿತಿ ನಿಯೋಗವು ಭೇಟಿ ಮಾಡಿ ಅಭಿನಂದಿಸಿದೆ.
ನಿಯೋಗದಲ್ಲಿ ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮುಜಾಹಿದ್ ಪಾಶಾ, ರಾಜ್ಯ ಕಾರ್ಯದರ್ಶಿ ಅಕ್ರಂ ಹಸನ್, ಬೆಂಗಳೂರು ಜಿಲ್ಲಾಧ್ಯಕ್ಷ ಫಯಾಝ್ ಅಹ್ಮದ್ ಉಪಸ್ಥಿತರಿದ್ದರು.
Next Story





