Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಪಟ್ಲ ಸಂಭ್ರಮ-2018’: ಡಾ.ನಾರಾಯಣ...

‘ಪಟ್ಲ ಸಂಭ್ರಮ-2018’: ಡಾ.ನಾರಾಯಣ ಶೆಟ್ಟಿಗೆ ‘ಪಟ್ಲ ಪ್ರಶಸ್ತಿ’ ಪ್ರದಾನ

8 ಕಲಾವಿದರಿಗೆ ‘ಯಕ್ಷ ಧ್ರುವ’ ಕಲಾ ಗೌರವ

ವಾರ್ತಾಭಾರತಿವಾರ್ತಾಭಾರತಿ27 May 2018 9:32 PM IST
share
‘ಪಟ್ಲ ಸಂಭ್ರಮ-2018’: ಡಾ.ನಾರಾಯಣ ಶೆಟ್ಟಿಗೆ ‘ಪಟ್ಲ ಪ್ರಶಸ್ತಿ’ ಪ್ರದಾನ

► 12 ಸತ್ಪಾತ್ರ ಕಲಾವಿದರಿಗೆ ಗೌರವಧನ ವಿತರಣೆ

ಮಂಗಳೂರು, ಮೇ 27: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಅಡ್ಯಾರ್‌ನಲ್ಲಿರುವ ಅಡ್ಯಾರ್ ಗಾರ್ಡನ್‌ನಲ್ಲಿ ರವಿವಾರ ಜರುಗಿದ ಮೂರನೆ ವರ್ಷದ ‘ಪಟ್ಲ ಸಂಭ್ರಮ-2018’ರಲ್ಲಿ ಯಕ್ಷಗಾನ ರಂಗಕ್ಕೆ ಮಹತ್ವದ ಕೊಡುಗೆ ನೀಡಿದ ಡಾ.ಶಿಮಂತೂರು ನಾರಾಯಣ ಶೆಟ್ಟಿಯವರಿಗೆ ಪಟ್ಲ ಪ್ರಶಸ್ತಿ ನೀಡಿ ಗೌರವಿಸಲಾಯಿತು.

*ಪ್ರಶಸ್ತಿ ಮೊತ್ತವನ್ನು ಶಿಷ್ಯನ ಸಂಘಟನೆಗೆ ಹಸ್ತಾಂತರಿಸಿದ ಡಾ.ಶಿಮಂತೂರು
 ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಶಿಮಂತೂರು ನಾರಾಯಣ ಶೆಟ್ಟಿ, ಪಟ್ಲ ಸತೀಶ್ ತನ್ನ ಪ್ರೀತಿಯ ಶಿಷ್ಯ. ಆತ ಮಾಡುತ್ತಿರುವ ಕೆಲಸ ಮಹತ್ವದ್ದು. ನನ್ನನ್ನು ಈ ವೇದಿಕೆಯಲ್ಲಿ ಗೌರವಿಸಿರುವುದು ಸಂತಸವನ್ನುಂಟು ಮಾಡಿದೆ. ಶಿಷ್ಯನ ಕೆಲಸಕ್ಕೆ ನಾನು ಸದಾ ಬೆಂಬಲ ನೀಡುತ್ತೇನೆ ಎಂದರಲ್ಲದೆ, ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದಿಗೆ 1,008 ರೂ. ಸೇರಿಸಿ ಫೌಂಡೇಶನ್‌ಗೆ ಕೊಡುಗೆಯಾಗಿ ಹಿಂದಿರುಗಿಸಿದರು.

ವೃತ್ತಿ ಕಲಾವಿದರಾದ ಕುರಿಯ ಗಣಪತಿ ಶಾಸ್ತ್ರಿ, ಎಂ.ಕೆ.ರಮೇಶ್ ಆಚಾರ್ಯ, ಕುತ್ತೊಟ್ಟು ವಾಸು ಶೆಟ್ಟಿ, ಆರ್ಗೋಡು ಮೋಹನ್ ದಾಸ್ ಶೆಣೈ, ಆನಂದ ಶೆಟ್ಟಿ ಐರಬೈಲು, ಪಾರೆಕೋಡಿ ಗಣಪತಿ ಭಟ್ ಹಾಗೂ ಮಹಿಳಾ ಕಲಾವಿದೆಯರಾದ ಶೀಲಾ ಕೆ. ಶೆಟ್ಟಿ, ಮಹಾಲಕ್ಷ್ಮೀ ಡಿ. ರಾವ್‌ರಿಗೆ ‘ಯಕ್ಷ ಧ್ರುವ’ ಕಲಾ ಗೌರವ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ 12 ಸತ್ಪಾತ್ರ ಕಲಾವಿದರಿಗೆ ಗೌರವಧನ ವಿತರಿಸಲಾಯಿತು.

ಒಡಿಯೂರು ಶ್ರೀಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆರ್ಶೀವಚನ ನೀಡಿದರು.ಅಲ್ ಕಾರ್ಗೋ ಸಮೂಹ ಸಂಸ್ಥೆಯ ಅಧ್ಯಕ್ಷ ಶಶಿಕಿರಣ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಟೀಲು ಶ್ರೀ ಕ್ಷೇತ್ರದ ಅನುವಂಶೀಯ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ ಮಾತನಾಡಿ ಶುಭ ಹಾರೈಸಿದರು.

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಕ್, ಮಾಜಿ ಶಾಸಕ ಮೊಯ್ದಿನ್ ಬಾವ, ಉದ್ಯಮಿ ಶಶಿಧರ ಶೆಟ್ಟಿ, ಕೆ.ಎಂ. ಶೆಟ್ಟಿ, ಅಜಿತ್ ಶೆಟ್ಟಿ ಗುಜರಾತ್, ಸಂತೋಷ್ ಶೆಟ್ಟಿ ಪೂನಾ, ಸರ್ವೋತ್ತಮ ಶೆಟ್ಟಿ ದುಬೈ, ರೋಹಿತ್ ಶೆಟ್ಟಿ ಪೂನಾ, ಶಂಕರ ಶೆಟ್ಟಿ ಗುಜರಾತ್, ರಘು ಎಲ್. ಶೆಟ್ಟಿ ಬಡಗ ಬೆಳ್ಳೂರು, ಎಸ್.ಕೆ.ಪೂಜಾರಿ ಮಸ್ಕತ್, ವಸಂತ ಶೆಟ್ಟಿ ಬೆಳ್ಳಾರೆ, ದಿನೇಶ್ ವೈದ್ಯ, ಪ್ರವೀಣ್ ಶೆಟ್ಟಿ ಪೂನಾ, ಜಗನ್ನಾಥ ಶೆಟ್ಟಿ ಬಾಳ ಮತ್ತಿತರರು ಉಪಸ್ಥಿತರಿದ್ದರು.

* ತಾರಾ ಮೆರುಗು: ಚಲನಚಿತ್ರ ನಟರಾದ ದರ್ಶನ್, ರಿಷಬ್ ಶೆಟ್ಟಿ ಆಗಮಿಸಿ ಕಾರ್ಯಕ್ರಮಕ್ಕೆ ತಾರಾ ಮೆರುಗು ನೀಡಿದರು.
 ಪಟ್ಲ ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕದ್ರಿ ನವನೀತ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ ಸನ್ಮಾನ ಕಾರ್ಯಕ್ರಮ ನಿರೂಪಿಸಿದರು.

*‘ಪಟ್ಲ ಸಂಭ್ರಮ-2018’ ಉದ್ಘಾಟನೆ
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮುಂಬೈಯ ಉದ್ಯಮಿ ಎನ್.ಟಿ.ಪೂಜಾರಿ, ಕೇವಲ ಹತ್ತು ಅಡಿ ಅಗಲ ಹತ್ತು ಅಡಿ ಉದ್ದದ ಯಕ್ಷರಂಗದ ವೇದಿಕೆಯಲ್ಲಿ ಸಮಸ್ತ ಕಥಾ ಭಾಗವನ್ನು ಜನರ ಮನಮುಟ್ಟುವಂತೆ ಅಭಿನಯಿಸಿ ಪ್ರೇಕ್ಷಕರ ಮುಂದಿಡುವ ಯಕ್ಷಗಾನ ಪುರುಷರಿಗೆ ಮಾತ್ರ ಸೀಮಿತವಾಗಿರುವ ಕಲೆಯಾಗಿ ಉಳಿದಿಲ್ಲ. ಅದು ಮಹಿಳೆಯರು ಭಾಗವಹಿಸುವ ಕಲೆಯಾಗಿ ಬೆಳೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸಂದರ್ಭದಲ್ಲಿ ಕಲಾವಿದರ ಬದುಕಿಗೆ ನೆರವಾಗುವ ಉದ್ದೇಶದಿಂದ ಕಾರ್ಯಾಚರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಕಾರ್ಯವೈಖರಿ ಶ್ಲಾಘನೀಯ ಎಂದರು.

ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಎಂ.ಎ ಹೆಗಡೆ ಮಾತನಾಡಿ, ಅಕಾಡಮಿಂದ ಮಾಡಲು ಸಾಧ್ಯವಾಗದೆ ಇರುವ ಕಾರ್ಯಕ್ರಮವನ್ನು ಪಟ್ಲ ಫೌಂಡೇಶನ್ ಸಾರ್ವಜನಿಕರ ಬೆಂಬಲದಿಂದ ಮಾಡುತ್ತಿರುವುದು ಮಾದರಿಯಾಗಿದೆ. ಇದು ನಮ್ಮ ಸರಕಾರವನ್ನು ಕಣ್ಣು ತೆರೆಸಬೇಕಾಗಿದೆ ಎಂದರು.

ಕಟೀಲು ಕ್ಷೇತ್ರದ ಅನುವಂಶೀಯ ಅರ್ಚಕರಾದ ವೆಂಕಟರಮಣ ಅಸ್ರಣ್ಣ, ಕಮಲಾ ದೇವಿಪ್ರಸಾದ್ ಅಸ್ರಣ್ಣ, ಶ್ರೀ ಹರಿನಾರಾಯಣ ದಾಸ ಅಸ್ರಣ್ಣ, ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸತೀಶ್ ಭಂಡಾರಿ, ಜಾಗತಿಕ ಭಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮೊದಲಾದವರು ಮಾತನಾಡಿ ಶುಭ ಹಾರೈಸಿದರು.

ಧಾರ್ಮಿಕ ಮುಖಂಡ ಮಹಾಬಲ ಪೂಜಾರಿ ಕಡಂಬೋಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಯಕ್ಷಧ್ರುವ ಡಾಟ್.ಕಾಂ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ‘ಪಟ್ಲಯಾನ’ ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ಅನುವಂಶೀಯ ಮೊಕ್ತೇಸರ ಕಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ, ಯಕ್ಷಗಾನ ಕಲಾವಿದ ಡಾ.ಪ್ರಭಾಕರ ಜೋಶಿ, ಶ್ರೀದೇವಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಸದಾನಂದ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಉದ್ಯಮಿ ಅಶೋಕ್, ಸೌಂದರ್ಯ ರಮೇಶ್, ದಿವಾಕರ ನಾಯ್ಕಿ ಅಡ್ಯಾರ್, ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ರಾಜ್ಯ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ ,ಕಲ್ಲಡ್ಕ ಪ್ರಭಾಕರ ಭಟ್, ಆದಾಯ ತೆರಿಗೆ ಉಪ ಆಯುಕ್ತ ಎಂ.ನಾಗಭೂಷಣ, ಪಟ್ಲ ಫೌಂಡೇಶನ್ನಿನ ವಿವಿಧ ಘಟಕದ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಟ್ರಸ್ಟ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ಪದಾಧಿಕಾರಿಗಳಾದ ಕದ್ರಿ ನವನೀತ ಶೆಟ್ಟಿ, ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

*ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ:
 ಪಟ್ಲ ಸಂಭ್ರಮ ಕಾರ್ಯಕ್ರಮದಲ್ಲಿ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡಮಿಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರವನ್ನು ಉದ್ಘಾಟಿಸಿದ ಎ.ಜೆ.ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಜಯ ಶಂಕರ ಮಾರ್ಲ ಮಾತನಾಡಿ ಶುಭ ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X