Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಸರಕಾರಿ ಶಾಲೆ ಆವರಣದ ಮರಗಳ ಅಕ್ರಮ...

ಮಂಡ್ಯ: ಸರಕಾರಿ ಶಾಲೆ ಆವರಣದ ಮರಗಳ ಅಕ್ರಮ ಕಟಾವು; ಅರಣ್ಯ ಇಲಾಖೆಗೆ ದೂರು

ವಾರ್ತಾಭಾರತಿವಾರ್ತಾಭಾರತಿ27 May 2018 10:18 PM IST
share
ಮಂಡ್ಯ: ಸರಕಾರಿ ಶಾಲೆ ಆವರಣದ ಮರಗಳ ಅಕ್ರಮ ಕಟಾವು; ಅರಣ್ಯ ಇಲಾಖೆಗೆ ದೂರು

ಮಂಡ್ಯ, ಮೇ 27: ಶತಮಾನದ ಇತಿಹಾಸವಿರುವ ಸರಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಲಕ್ಷಾಂತರ ರೂ ಮೌಲ್ಯದ ನೀಲಗಿರಿ ಮರಗಳನ್ನು ಕಡಿದು ಸಾಗಿಸಿರುವ ಘಟನೆ ಮೇಲುಕೋಟೆಯಲ್ಲಿ ನಡೆದಿದೆ. 

ಮೇಲುಕೋಟೆ ಸರಕಾರಿ ಮಾಧ್ಯಮಿಕ ಶಾಲೆ ಎಂದೇ ಹೆಸರಾಗಿದ್ದ ಸರಕಾರಿ ಬಾಲಕರ ಶಾಲೆಗೆ ಆರ್‍ಟಿಸಿ ಪ್ರಕಾರ ಸರ್ವೆ ನಂಬರ್ 70/1 ಮತ್ತು 70/ಬಿನಲ್ಲಿ ಒಟ್ಟಾರೆ 2 ಎಕರೆ ಜಮೀನಿದ್ದು, ಉಪವಿಭಾಗಾಧಿಕಾರಿಯಾಗಿದ್ದ ಡಾ.ಎಚ್.ಎಲ್ ನಾಗರಾಜು ಅವರ ಸಮಯದಲ್ಲಿ ಜಮೀನಿನ ಸರ್ವೆ ಮಾಡಲಾಯಿತಾದರೂ ಅವರ ವರ್ಗಾವಣೆಯ ನಂತರ ಗಡಿ ಗುರುತಿಸುವ ಕಾರ್ಯ ಆಗಿರಲಿಲ್ಲ. ಇದೀಗ ಜಮೀನಿನಲ್ಲಿ ಬೆಳೆದಿದ್ದ ಲಕ್ಷಾಂತರ ರೂ ಮೌಲ್ಯದ ಮರಗಳನ್ನು ಕಡಿದು ಸಾಗಿಸಲಾಗಿದೆ ಎನ್ನಲಾಗಿದೆ. 

ಘಟನೆಯ ಸಂಬಂಧ ಪತ್ರಕರ್ತರಿಗೆ ಮಾಹಿತಿ ನೀಡಿದ ಮುಖ್ಯ ಶಿಕ್ಷಕ ಜವರೇಗೌಡ, ಯಧುಶೈಲಾ ಪ್ರೌಢಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಬಿ.ನರಸಿಂಹೇಗೌಡ ಮತ್ತವರ ಕಡೆಯವರು ಬೇಸಗೆ ರಜಾ ಅವಧಿಯನ್ನೇ ಬಳಸಿಕೊಂಡು ಶಾಲೆಯ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮರಗಳನ್ನು ಕಡಿದು ಕಾನೂನು ಬಾಹಿರವಾಗಿ ಸಾಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಮೇ 23ರಂದು  ಬಂದು ಕಡಿದಿರುವ ಮರ ಸಾಗಿಸದಂತೆ ಲಾರಿ ಮತ್ತು ಟ್ರ್ಯಾಕ್ಟರ್ ಚಾಲಕರು ಮತ್ತು ಮರ ಕಡಿಯುತ್ತಿದ್ದವರಿಗೆ ಹೇಳಿದ್ದೇವೆ. ನಂತರ ಪೊಲೀಸ್ ಠಾಣೆಗೂ ಲಿಖಿತ ದೂರು ನೀಡಿ ಮರ ಸಾಗಿಸದಂತೆ ಕ್ರಮವಹಿಸಬೇಕೆಂದು ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ ಎಂದು ದೂರಿದರು.

ಘಟನೆಯ ಸಂಬಂಧ ಪಾಂಡವಪುರ ತಹಶೀಲ್ದಾರ್ ಅವರಿಗೂ ಮಾಹಿತಿ ನೀಡಿ ಮತ್ತೊಮ್ಮೆ ಮೇ 26 ರಂದು ಮೇಲುಕೋಟೆ ಠಾಣೆಯ ಎಸ್‍ಐರಿಗೆ ಪೋಟೋ ಸಮೇತ ಕೆ.ಬಿ.ನರಸಿಂಹೇಗೌಡ ಮತ್ತು ಮರ ಕಡಿದು ಸಾಗಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೂರು ನೀಡಿದೆವು. ಅವರು ತಹಶೀಲ್ದಾರ್ ಅವರು ಸ್ಥಳಕ್ಕಾಗಮಿಸಿ ಶಾಲೆ ಜಮೀನಿನ ಗಡಿ ಗುರುತಿಸಿಕೊಟ್ಟರೆ ಮಹಜರ್ ಮಾಡಿ ಪ್ರಕರಣ ದಾಖಲಿಸುವ ಭರವಸೆ ನೀಡಿ ನಮ್ಮ ಮನವಿಯನ್ನು ಮರಳಿಸಿದ್ದಾರೆ ಎಂದು ತಿಳಿಸಿದ್ದಾರೆ.  

ಮೇಲುಕೋಟೆ ಠಾಣೆ ಎಸ್‍ಐ ಸೋಮೇಗೌಡ  ಮಾತನಾಡಿ, ಮೇ 23ರಂದು ದೂರು ಬಂದ ನಂತರ ನಾನೇ ಜಮೀನಿಗೆ ಖುದ್ದು ಭೇಟಿ ಮಾಡಿ ಮರಗಳನ್ನು ಲಾರಿಗೆ ತುಂಬಬೇಡಿ ಎಂದು ಹೇಳಿ ಸಿಬ್ಬಂದಿ ನಿಯೋಜಿಸಿದ್ದೆ. ಆದರೆ, ಮುಖ್ಯ ಶಿಕ್ಷಕರು ಜೊತೆಗಿದ್ದವರು ಸಮಸ್ಯೆಯನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳುತ್ತೇವೆ ಎಂದ ಕಾರಣ ಸುಮ್ಮನಾಗಬೇಕಾಯಿತು. ಮರಗಳನ್ನು ಕಡಿದು ಸಾಗಿಸಲಾಗಿದೆ. ಈಗ ತಹಶೀಲ್ದಾರ್ ಭೇಟಿ ಮಾಡಿ ವರದಿ ನೀಡಿದ ನಂತರ ಕಾನೂನುಕ್ರಮ ಜರುಗಿಸಲಾಗುವುದು ಎಂದರು.   

ಎಸ್‍ಡಿಎಂಸಿ ಅಧ್ಯಕ್ಷ ಚೆಲುವೇಗೌಡ ಮಾತನಾಡಿ, ಶಾಲೆಯ ಆಸ್ತಿ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಪಾಂಡವಪುರ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಹಲವು ಸಲ ತಕ್ಷಣವೇ ಸರ್ವೆಮಾಡಿ ಗಡಿ ಗುರುತಿಸಿಕೊಡಲು ಆದೇಶಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳು ಶಾಲಾ ಆಸ್ತಿ ರಕ್ಷಣೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.  

ಖಾಸಗಿ ಜಮೀನಿನಲ್ಲಿರುವ ನೀಲಗಿರಿ ಮರ ಕಡಿಯಲು ಅರಣ್ಯ ಇಲಾಖೆ ಅನುಮತಿ ಬೇಕಿಲ್ಲ. ಸರಕಾರಿ ಜಮೀನಲ್ಲಿರುವ ಮರ ಕಡಿಯಲು ಅನುಮತಿ ಬೇಕು. ಸರಕಾರಿ ಶಾಲಾ ಮುಖ್ಯಸ್ಥರು ಮರ ಕಡಿದು ಸಾಗಿಸುವ ಕೊನೆ ಹಂತದಲ್ಲಿ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ಹೀಗಾಗಿ ಪೊಲೀಸರಿಗೆ ದೂರು ನೀಡಲು ಸಲಹೆ ನೀಡಿದ್ದೇವೆ. ನಂತರ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಉಪ ವಲಯ ಅರಣ್ಯಾಧಿಕಾರಿ ಜೀತ್ ತಿಳಿಸಿದ್ದಾರೆ.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X