Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಹ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು...

ಪ್ರವಾಹ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 May 2018 10:36 PM IST
share
ಪ್ರವಾಹ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ

ಮಡಿಕೇರಿ,ಮೇ.27: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.    

ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.        

ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಕಾರ್ಯ ಪ್ರವೃತ್ತರಾಗಬೇಕಿದೆ ಎಂದರು. 

ವರ್ಷಧಾರೆ ಹೆಚ್ಚಾದ ಸಂದರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು.   

ಮಡಿಕೇರಿ ತಾಲೂಕಿನ ಭಾಗಮಂಡಲ, ಅಯ್ಯಂಗೇರಿ, ನಾಪೋಕ್ಲು, ಬಲಮುರಿ, ವಿರಾಜಪೇಟೆ ತಾಲೂಕಿನ ಕರಡಿಗೋಡು, ದುಬಾರೆ ಮತ್ತು ಲಕ್ಷ್ಮಣತೀರ್ಥ ಹಾಗೂ ಸೋಮವಾರಪೇಟೆ ತಾಲೂಕಿನ ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆ ರಸ್ತೆ, ಭೂ ಪ್ರದೇಶ ಪ್ರವಾಹ ಸಂದರ್ಭದಲ್ಲಿ ಜಲಾವೃತವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಅನಾಹುತಗಳಾಗದಂತೆ ಕ್ರಮಕೈಗೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಶೀಲ್ದಾರರು ಮತ್ತು ಸ್ಥಳೀಯ ಗ್ರಾ.ಪಂ.ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸೂಚನೆ ನೀಡಿದರು. 

ಭೂ ಕುಸಿತ ಹಾಗೂ ರಸ್ತೆಯ ಮೇಲೆ ಮರ ಬಿದ್ದು, ಸಾರಿಗೆ ಸಂಪರ್ಕ ಕಡಿದು ಹೋಗುವ ಸಂದರ್ಭದಲ್ಲಿ ಲೋಕೋಪಯೋಗಿ, ಅರಣ್ಯ, ಗ್ರಾಮೀಣ ಅಭಿವೃದ್ಧಿ ಎಂಜಿನಿಯರಿಂಗ್ ವಿಭಾಗ, ಸೆಸ್ಕ್ ಇಲಾಖೆಗಳು ಹಾಗೂ ಪೋಲೀಸ್ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.      

ಕಾವೇರಿ ನದಿ ಪಾತ್ರದ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ಗಂಜಿ ಕೇಂದ್ರ ತೆರೆಯುವುದು, ನಿರಾಶ್ರಿತರನ್ನು ಸ್ಥಳಾಂತರ ಮಾಡುವುದು ಮತ್ತಿತರ ಕಾರ್ಯಗಳನ್ನು ಚುರುಕಿನಿಂದ ನಿರ್ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.   

ಮುಂಗಾರು ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು, ಮರಗಳು ರಸ್ತೆಗೆ ಬಿದ್ದು, ಓಡಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಜನ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದು. ಅಗ್ನಿಶಾಮಕ ಇಲಾಖಾ ಅಧಿಕಾರಿಗಳು ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು. ಹೋಂ ಗಾರ್ಡ್‍ಗಳನ್ನು ನಿಯೋಜಿಸುವುದು, ನುರಿತ ತಜ್ಞ ಈಜುಗಾರರನ್ನು ಕಾಯ್ದಿರಿಸಿಕೊಳ್ಳುವುದು ಮತ್ತಿತರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸಲಹೆ ಮಾಡಿದರು. 

ನಗರಸಭೆ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಬರೆ ಕೆಳಗೆ ವಾಸಮಾಡುತ್ತಿರುವ ಜನರಿಗೆ ಮುನ್ನೆಚ್ಚರಿಕೆ ನೀಡಿ ತಾತ್ಕಾಲಿಕ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದರು.   

ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸುವುದು ಹಾಗೂ ಆ ಸಂದರ್ಭದಲ್ಲಿ ಹರಡುವ ಕಾಯಿಲೆಗಳಿಗೆ ಔಷಧಿಗಳನ್ನು ಮೊದಲೇ ದಾಸ್ತಾನು ಇರಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಹಾಗೆಯೇ ನಗರ, ಪಟ್ಟಣ ಹಾಗೂ ಗ್ರಾ.ಪಂ.ಮಟ್ಟದಲ್ಲಿ ಶುಚಿತ್ವ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು. ಮಳೆ ಮಾಪನ ಕೇಂದ್ರಗಳನ್ನು ಸುಸ್ಥಿಯಲ್ಲಿಟ್ಟುಕೊಳ್ಳಬೇಕು. ಅಪಾಯ ಸಂಭವಿಸಬಹುದಾದ ಮೂನ್ಸೂಚನೆಯನ್ನು ಪ್ರತಿ ದಿನ ದೂರವಾಣಿ ಮೂಖಾಂತರ ಮಾಹಿತಿ ನೀಡಬೇಕು. ಜಲಾವೃತ ಸ್ಥಳವಾದ ಭಾಗಮಂಡಲ ಹಾಗೂ ದುಬಾರೆಯಲ್ಲಿ ಯಂತ್ರ ಚಾಲಿತ ದೋಣಿಗಳನ್ನು ನುರಿತ ಚಾಲಕರ ನೇಮಕಾತಿಯೊಂದಿಗೆ ಬಳಸಲು ವ್ಯವಸ್ಥೆ ಮಾಡುವುದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.   

ಅಗತ್ಯ ಬೋಟ್ ವ್ಯವಸ್ಥೆ, ಮುಳುಗು ತಜ್ಞರ ಪಟ್ಟಿ ಮತ್ತಿತರವನ್ನು ಗೃಹ ರಕ್ಷಕದಳ ಇಲಾಖೆಯವರು ಸಿದ್ಧತೆ ಮಾಡಿಕೊಳ್ಳುವಂತೆ ಗೃಹ ರಕ್ಷಕದಳದ ಅಧಿಕಾರಿಗೆ ತಿಳಿಸಲಾಯಿತು. ತುರ್ತು ಸಂದರ್ಭದಲ್ಲಿ ಬೇಕಾಗಬಹುದಾದಂತಹ ಸಾಧನ ಸಲಕರಣೆಗಳು ತಾಲೂಕು ಕೇಂದ್ರಗಳಲ್ಲಿ ಹಾಗೂ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಹಂತದಲ್ಲೂ ಇರಬೇಕಾಗುತ್ತದೆ ಎಂದರು.  

ಮಳೆಗಾಲದಲ್ಲಿ ದೂರವಾಣಿ ಸಂಪರ್ಕ ಕಡಿತಗೊಂಡಾಗ ಮಾಹಿತಿಯು ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವುದು ಕಷ್ಟವಾಗುವುದರಿಂದ ನಗರಸಭೆ ಕಚೇರಿ ಹಾಗೂ ಪ್ರತಿ ತಾಲೂಕು ಕಚೇರಿಗಳಿಗೆ ಒಂದರಂತೆ ಮತ್ತು ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಮ್‍ಗಳಲ್ಲಿ ವಯರ್‍ಲೆಸ್ ಬೇಸ್‍ಸೆಟ್ ನೀಡಿದ್ದು ಅದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಜಿಲ್ಲಾಧಿಕಾರಿ ಕಚೇರಿಯಲ್ಲಿ 24*7 ಸಹಾಯವಾಣಿ ತೆರೆಯಲಾಗಿದ್ದು, ಯಾವುದೇ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಅತಿವೃಷ್ಠಿಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣಿ ಸಂಖ್ಯೆ 08272-221077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು. ವಿದ್ಯುತ್ ವ್ಯತ್ಯಯ, ಕಂಬ ಬಿದ್ದಿರುವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯವಾಣಿ 1912 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.    

ಮಳೆಗಾಲದ ಅವಧಿಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರಜೆ ಬೇಕಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಕೇಂದ್ರ ಕಚೇರಿಯ ಸಭೆ-ಸಮಾರಂಭಗಳು ಇದ್ದಲ್ಲಿ ಗಮನಕ್ಕೆ ತಂದು ತೆರಳಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸೂಚಿಸಿದರು.  

ಅತಿವೃಷ್ಟಿಯಿಂದ ಉಂಟಾಗುವ ಹಾನಿ ಸಂಬಂಧ ತಕ್ಷಣವೇ ವರದಿ ಕಳುಹಿಸಬೇಕು, ಜೊತೆಗೆ ಒಂದು ವಾರದೊಳಗೆ ಪರಿಹಾರ ವಿತರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ತಹಶೀಲ್ದಾರರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಿಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ, ಭಾಗಮಂಡಲದಲ್ಲಿ ಹೆಚ್ಚಿನ ಮಳೆಯಾದ ಸಂದರ್ಭದಲ್ಲಿ ಪ್ರವಾಹ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಅನಾಹುತಗಳನ್ನು ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದು ಅವರು ಹೇಳಿದರು. 

ಭಾಗಮಂಡಲದ ಜೊತೆಗೆ ಅಯ್ಯಂಗೇರಿ, ನಾಪೋಕ್ಲು, ಕರಡಿಗೋಡು, ದುಬಾರೆ, ಲಕ್ಷ್ಮಣತೀರ್ಥ, ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆಗಳಲ್ಲಿ ವ್ಯಾಪಕ ಮಳೆ ಬಂದ ಸಂದರ್ಭದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದರು.  

ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬರೆ ಕುಸಿತ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಇಂತಹ ಪ್ರದೇಶಗಳಲ್ಲಿ ಸ್ಥಳೀಯರಿಗೆ ಮುನ್ನೆಚ್ಚರಿಕೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಮೈಕಲ್ ಅವರು ನಿಯಂತ್ರಣ ಕೊಠಡಿಗೆ ನಿಯೋಜಿಸಿರುವ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಸಹಕರಿಸುವಂತೆ ಸಭೆಯ ಗಮನಕ್ಕೆ ತಂದರು.   

ಡಿವೈಎಸ್‍ಪಿ ಸುಂದರರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್, ಗೃಹ ರಕ್ಷಕದಳದ ಅಧಿಕಾರಿ ಚಂದನ್, ಸೆಸ್ಕ್ ಇಇ ಸೋಮಶೇಖರ, ಲೋಕೋಪಯೋಗಿ ಇಲಾಖೆ ಇಇ ವಿನಯಕುಮಾರ್, ಪೌರಾಯುಕ್ತರಾದ ಬಿ.ಶುಭಾ, ತಹಶೀಲ್ದಾರರಾದ ಶಾರದಾಂಬ, ಗೋವಿಂದರಾಜು, ಬಾಡ್ಕರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್, ಎಇಇ ಗಳಾದ ಇಬ್ರಾಹಿಂ, ಸ್ವಾಮಿ, ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್, ತಾ.ಪಂ.ಇಒ ಗಳಾದ ಜೀವನ್ ಕುಮಾರ್, ಮತ್ತಿತರರು ಪ್ರವಾಹ ಮುನ್ನೆಚ್ಚರಿಕೆ ನಿಭಾಯಿಸುವ ಸಂಬಂಧ ಹಲವು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X