Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ...

ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ

ವಾರ್ತಾಭಾರತಿವಾರ್ತಾಭಾರತಿ28 May 2018 6:01 PM IST
share
ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ

ಬೆಂಗಳೂರು, ಮೇ 28: ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡು ವಾರಗಳ ಹಿಂದಷ್ಟೇ ಚುನಾಯಿತರಾಗಿದ್ದ ಶಾಸಕ ಸಿದ್ದು ನ್ಯಾಮಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ರವಿವಾರ ಹೊಸದಿಲ್ಲಿಯಲ್ಲಿ ಲವಲವಿಕೆಯಿಂದ ಚಟುವಟಿಕೆಗಳಲ್ಲಿ ತೊಡಗಿದ್ದ ಸಿದ್ದು ನ್ಯಾಮಗೌಡ ಅವರು ಅದೇರಾತ್ರಿ ವಿಮಾನದಲ್ಲಿ ಗೋವಾಗೆ ಬಂದಿಳಿದು ತಮ್ಮ ತವರಿಗೆ ಪಯಣಿಸುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ ಎಂಬುದು ನನ್ನಲ್ಲಿ ಏಕಕಾಲಕ್ಕೆ ದುಃಖ ಮತ್ತು ನೋವನ್ನು ಉಂಟು ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ರೈತರು ಎಂದರೆ ಶ್ರಮಜೀವಿಗಳು. ಅದರಲ್ಲೂ ಅವಿಭಜಿತ ಬಿಜಾಪುರ ಜಿಲ್ಲೆಯ ಜಮಖಂಡಿ ತಾಲೂಕಿನ ರೈತರು ಮಹಾನ್ ಶ್ರಮಿಕರು, ಮಹಾನ್ ಸಾಧಕರು ಹಾಗೂ ಮಹಾನ್ ಸಾಹಸಿಗರು ಎಂಬುದನ್ನು ಇಡೀ ದೇಶಕ್ಕೇ ತೋರಿಸಿಕೊಟ್ಟವರು ಸಿದ್ದು ನ್ಯಾಮಗೌಡರು. ಚಿಕ್ಕಪಡಸಲಗಿ ಮತ್ತು ಸುತ್ತಮುತ್ತಲಿನ 26 ಸಾವಿರ ಎಕರೆ ಭೂ ಪ್ರದೇಶಕ್ಕೆ ನೀರು ಒದಗಿಸುವುದರ ಜೊತೆಗೆ ಜಮಖಂಡಿ ಪಟ್ಟಣದ 3ಲಕ್ಷ ಜನಸಂಖ್ಯೆಗೆ ಕುಡಿಯುವ ನೀರು ದೊರಕಿಸಿಕೊಟ್ಟ ಚಿಕ್ಕಪಡಸಲಗಿ ಬ್ಯಾರೇಜ್ ಇಡೀ ದೇಶದಲ್ಲೇ ದೊಡ್ಡ ಹೆಸರು ಮಾಡಿದೆ.

ಜಮೀನಿನಲ್ಲಿ ಉಳುಮೆ ಮಾಡಿ ಬೆವರು ಹರಿಸುತ್ತಿದ್ದ ರೈತರು ತಾವು ಸಂಪಾದಿಸಿದ ಹಣದಲ್ಲಿ ದೇಣಿಗೆಯ ಮೂಲಕ ಮೂರು ದಶಕಗಳ ಹಿಂದೆಯೇ 50 ಲಕ್ಷ ರೂ.ವೆಚ್ಚದಲ್ಲಿ ಬ್ಯಾರೇಜ್ ನಿರ್ಮಿಸಲು ಮುಂದಾದದ್ದು ಶ್ರಮಿಕರ ಸಾಧನೆ ಮಾತ್ರವಲ್ಲದೆ, ತಮ್ಮ ದೇಣಿಗೆಯ ಜೊತೆ ಜೊತೆಗೆ ಶ್ರಮದಾನವನ್ನೂ ಮಾಡಿ ಬ್ಯಾರೇಜ್ ನಿರ್ಮಿಸಿದ್ದು ಒಂದು ಸಾಹಸವೇ ಆಗಿತ್ತು. ರೈತರ ಈ ಶ್ರಮಕ್ಕೆ ಪ್ರೇರಣೆ ಹಾಗೂ ಸಾಹಸಕ್ಕೆ ಸ್ಪೂರ್ತಿ ನೀಡಿದ್ದು ಸಿದ್ದು ನ್ಯಾಮಗೌಡರು. ಅಂದು ರೈತರ ಶ್ರಮದಾನದ ನಾಯಕತ್ವ ವಹಿಸಿದ್ದ ಸಿದ್ದು ನ್ಯಾಮಗೌಡರು ಇಂದು ನಮ್ಮೊಡನೆ ಇಲ್ಲದಿರಬಹುದು. ಆದರೆ, ಸಾಕಾರಗೊಂಡಿರುವ ಅವರ ಕನಸಿನ ಕೂಸು ಮಾತ್ರ ಅಂದು, ಇಂದು ಮುಂದೂ ಅಷ್ಟೇ ಏಕೆ, ಎಲ್ಲರಿಗೂ ಎಂದೆಂದೂ ಎದ್ದು ಕಾಣುತ್ತಲೇ ಇರುತ್ತದೆ.

ಅಂದು ಶ್ರಮದಾನ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಸಿದ್ದು ನ್ಯಾಮಗೌಡ ಅವರು ರಾಜ್ಯ ರಾಜಕಾರಣಕ್ಕೆ ಬಳುವಳಿಯಾದರು. ಅಂದು ಕೃಷ್ಣೆಯ ಮೇಲಿನ ಚಿಕ್ಕಪಡಸಲಗಿ ಬ್ಯಾರೇಜ್‌ನ ಪ್ರಭಾವ ಎಷ್ಟಿತ್ತು ಎಂದರೆ 1991ರ ಸಾರ್ವತ್ರಿಕ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಂದಿನ ಕಾಲದ ಪ್ರಭಾವಿ ನಾಯಕ ಹಾಗೂ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರನ್ನು ಪರಾಭವಗೊಳಿಸಿ ಸಿದ್ದು ನ್ಯಾಮಗೌಡ ಅವರಿಗೆ ಲೋಕಸಭೆ ಪ್ರವೇಶಿಸಲು ಅನುವು ಮಾಡಿಕೊಟ್ಟಿತು. ಸಿದ್ದು ನ್ಯಾಮೇಗೌಡ ಅವರು ನರಸಿಂಹರಾವ್ ಸಂಪುಟದಲ್ಲಿ ಕೇಂದ್ರ ಕಲ್ಲಿದ್ದಲು ಖಾತೆಯ ರಾಜ್ಯ ಸಚಿವರಾಗುವ ಅವಕಾಶ ಪಡೆದರು. ಅಂತೆಯೇ, 2013ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದು ನ್ಯಾಮೇಗೌಡ ಅವರು ಜಮಖಂಡಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಎಂಬುದು ಇದೀಗ ಇತಿಹಾಸ ಎಂದು ಕುಮಾರಸ್ವಾಮಿ ಸ್ಮರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X