ನಿಗಮ-ಮಂಡಳಿ ಅಧ್ಯಕ್ಷರ ಅಧಿಕಾರವಧಿ ಅಂತ್ಯ
ಬೆಂಗಳೂರು, ಮೇ 28: ರಾಜ್ಯ ಸರಕಾರದ ನಿಗಮ, ಮಂಡಳಿ, ಸಂಸ್ಥೆಗಳಲ್ಲಿನ ಅಧಿಕಾರೇತರ ಅಧ್ಯಕ್ಷರ ಅವಧಿಯು ಕೂಡಲೆ ಜಾರಿಗೆ ಬರುವಂತೆ ಕೊನೆಗೊಳ್ಳುತ್ತಿದೆ ಎಂದು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ(ಆಡಳಿತ) ಎಲ್.ರಾಜೇಶ್ವರಿ ತಿಳಿಸಿದ್ದಾರೆ.
ಈ ಬಗ್ಗೆ ಮುಂದಿನ ಆದೇಶವಾಗುವವರೆಗೆ ಈ ನಿಗಮ ಮಂಡಳಿ, ಸಂಸ್ಥೆಗಳಿಗೆ ಸಂಬಂಧಪಟ್ಟ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷರಾಗಿ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿರುವುದಾಗಿ ಅವರು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
Next Story





