Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾರ್ಡ್ ಮರು ವಿಂಗಡಣೆ, ಮೀಸಲು ಪಟ್ಟಿ...

ವಾರ್ಡ್ ಮರು ವಿಂಗಡಣೆ, ಮೀಸಲು ಪಟ್ಟಿ ಒದಗಿಸಲು ಕೋರಿ ಹೈಕೋರ್ಟ್‌ಗೆ ಮತ್ತೆ ಮನವಿ ಮಾಡಿದ ಚುನಾವಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ28 May 2018 9:16 PM IST
share
ವಾರ್ಡ್ ಮರು ವಿಂಗಡಣೆ, ಮೀಸಲು ಪಟ್ಟಿ ಒದಗಿಸಲು ಕೋರಿ ಹೈಕೋರ್ಟ್‌ಗೆ ಮತ್ತೆ ಮನವಿ ಮಾಡಿದ ಚುನಾವಣಾ ಆಯೋಗ

ಬೆಂಗಳೂರು, ಮೇ 28: ರಾಜ್ಯದ ವಿವಿಧ 218 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ಮರು ವಿಂಗಡಣೆ ಹಾಗೂ ಮೀಸಲು ಪಟ್ಟಿಯನ್ನು ಈ ಕೂಡಲೇ ತಮಗೆ ಒದಗಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ಗೆ ಮತ್ತೆ ಮನವಿ ಮಾಡಿದೆ.

ರಾಜ್ಯದ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲು ಹಾಗೂ ಕ್ಷೇತ್ರ ಮರುವಿಂಗಡಣೆ ಪಟ್ಟಿಯನ್ನು ಒದಗಿಸಲು ರಾಜ್ಯ ಸರಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಈ ಅರ್ಜಿ ಸಂಬಂಧ ರಾಜ್ಯ ಸರಕಾರವು ಫೆ.17ರಂದು ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ 2018ರ ಮೇ 31ರೊಳಗೆ ವಾರ್ಡ್ ಮರು ವಿಂಗಡಣೆ ಹಾಗೂ ಮೀಸಲು ಕಲ್ಪಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿತ್ತು. ಆದರೆ, ಈವರೆಗೂ ವಾರ್ಡ್ ಮರು ವಿಂಗಡನೆ ಹಾಗೂ ಮೀಸಲು ಪಟ್ಟಿ ಕಲ್ಪಿಸದ ಹಿನ್ನೆಲೆಯಲ್ಲಿ ಆಯೋಗವು ಹೈಕೋರ್ಟ್‌ಗೆ ಈ ಮನವಿ ಮಾಡಿದೆ.

ಸೋಮವಾರ ಚುನಾವಣಾ ಆಯೋಗದ ಪರ ವಕೀಲರು, ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿ, ಈ ಸೆಪ್ಟೆಂಬರ್ ಹಾಗೂ 2019ರ ಫೆಬ್ರವರಿ ಅಂತ್ಯದೊಳಗೆ ನಗರಸಭೆ, ಪಟ್ಟಣ ಪಂಚಾಯತ್, ಕಾರ್ಪೊರೇಷನ್ ಒಳಗೊಂಡಂತೆ 116 ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಲಿದೆ. ಅವಧಿ ಪೂರ್ಣವಾಗುವುದರೊಳಗೆ ಚುನಾವಣೆ ನಡೆಸಬೇಕಿರುವುದು ಆಯೋಗದ ಕರ್ತವ್ಯ ಎಂದು ತಿಳಿಸಿದರು.

ಅಲ್ಲದೆ, ಚುನಾವಣೆಗೆ ಮೀಸಲು ಮತ್ತು ಕ್ಷೇತ್ರ ಮರು ವಿಂಗಡಣೆಯ ಪರಿಷ್ಕೃತ ಪಟ್ಟಿಯನ್ನು ಆಯೋಗವು ಒಂದು ವರ್ಷಕ್ಕೂ ಮೊದಲೇ ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ಪಟ್ಟಿ ಒದಗಿಸಲು ಹಲವು ಬಾರಿ ಆಯೋಗವು ರಾಜ್ಯ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ಕೋರಲಾಗಿದೆ. ರಾಜ್ಯ ಸರಕಾರವು ಫೆ.17ರಂದು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ, ಮೇ 31ರೊಳಗೆ ಪಟ್ಟಿ ಒದಗಿಸಲಾಗುವುದು ಎಂದು ತಿಳಿಸಿದೆ. ಹೀಗಿದ್ದರೂ ಆ ನಿಟ್ಟಿನಲ್ಲಿ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಿಮ್ಮ ಮನವಿ ಕುರಿತಂತೆ ಮಧ್ಯಂತರ ಅರ್ಜಿ ಸಲ್ಲಿಸಿ ಎಂಬುದಾಗಿ ಚುನಾವಣಾ ಆಯೋಗದ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X