ಮಹಾತ್ಮ ಗಾಂಧಿ ಸಮಾಧಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಪುಷ್ಪನಮನ

ಹೊಸದಿಲ್ಲಿ/ಬೆಂಗಳೂರು, ಮೇ 28: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದಿಲ್ಲಿಗೆ ಭೇಟಿ ನೀಡಿದ ಎಚ್.ಡಿ.ಕುಮಾರಸ್ವಾಮಿ ರಾಜ್‌ಘಾಟ್‌ನಲ್ಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಸಮಾಧಿ ಸ್ಥಳ ರಾಜ್‌ಘಟ್ ಗೆ ಭೇಟಿ ನೀಡಿ, ಪುಷ್ಪನಮನ ಸಲ್ಲಿಸಿ, ರಾಷ್ಟ್ರಪಿತನನ್ನು ಸ್ಮರಿಸಿದರು.
ಮಹಾತ್ಮಗಾಂಧಿ ಅವರ ಜೀವನ ಮತ್ತು ವಿಚಾರಧಾರೆಗಳು ಎಂದಿಗೂ ಪ್ರಸ್ತುತ. ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಮನುಕುಲ ಸಹಭಾಳ್ವೆಯಲ್ಲಿ ಸಾಗಲು ಅವರ ವಿಚಾರಧಾರೆಗಳು ಮತ್ತು ಸಂದೇಶಗಳು ಅತ್ಯವಶ್ಯಕ ಎಂದು ಪುಷ್ಪನಮನ ಬಳಿಕ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರನ್ನು ಕುಮಾರಸ್ವಾಮಿ ನೆನಪು ಮಾಡಿಕೊಂಡರು.
2006ರಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಿ ಹೊಸದಿಲ್ಲಿಗೆ ಮೊದಲ ಭಾರಿಗೆ ಆಗಮಿಸಿದ್ದ ಸಂದರ್ಭದಲ್ಲೂ ರಾಜ್‌ಘಾಟ್ಗೆ ಆಗಮಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಪುಷ್ಪನಮನ ಸಲ್ಲಿಸಿದ್ದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಸ್ಮರಿಸಿಕೊಂಡರು.
Next Story





