Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಗೀತ ವಿ.ವಿ ಗಳು ಒಳ್ಳೆಯ...

ಸಂಗೀತ ವಿ.ವಿ ಗಳು ಒಳ್ಳೆಯ ಸಂಗೀತಗಾರರನ್ನು ನೀಡಲು ಮುಂದಾಗಿ: ಪಂಡಿತ್ ಡಾ.ರಾಜೀವ್ ತಾರಾನಾಥ್

ವಾರ್ತಾಭಾರತಿವಾರ್ತಾಭಾರತಿ29 May 2018 6:47 PM IST
share
ಸಂಗೀತ ವಿ.ವಿ ಗಳು ಒಳ್ಳೆಯ ಸಂಗೀತಗಾರರನ್ನು ನೀಡಲು ಮುಂದಾಗಿ: ಪಂಡಿತ್ ಡಾ.ರಾಜೀವ್ ತಾರಾನಾಥ್

ಮೈಸೂರು,ಮೇ.29: ಸಂಗೀತ ವಿಶ್ವವಿದ್ಯಾನಿಲಯಗಳು ಸಂಗೀತ, ಸಂಸ್ಕೃತಿಯನ್ನು ಉಳಿಸಿಕೊಂಡು ಒಳ್ಳೆಯ ಸಂಗೀತಗಾರರನ್ನು ನೀಡಲು ಮುಂದಾಗಿ ಎಂದು ಖ್ಯಾತ ಸರೋದ್ ವಾದಕ ಪಂಡಿತ್ ಡಾ.ರಾಜೀವ್ ತಾರಾನಾಥ್ ಕರೆ ನೀಡಿದರು.

ಮೈಸೂರಿನ ಸರಸ್ವತಿಪುರಂನಲ್ಲಿರುವ ಅವರ ಸ್ವಗೃಹದಲ್ಲಿ ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ಈ ಸಾಲಿನ “ಗೌರವ ನಾಡೋಜ” ಪದವಿಯನ್ನು ಸ್ವೀಕರಿಸಿ ಮಾತನಾಡಿದರು. 

ನಮ್ಮ ಮಂದಿಯೇ ನನಗೆ ಸನ್ಮಾನ ಮಾಡಿರುವುದು ನನಗೆ ಖುಷಿ ನೀಡಿದೆ. ನನ್ನ ಮಂದಿ ನನಗೆ ಹಾರ ಹಾಕಿ ಅಸಲಿ ವಿಗ್ರಹ ನೀಡಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದ ಅವರು, ಇಂದೂಧರ ನಿರೋಡಿ ಅವರಿಗೂ ನಾಡೋಜ ಬರಬೇಕಿತ್ತಲ್ಲ. ಯಾಕೆ ಬಂದಿಲ್ಲ, ಅವರು ಕನ್ನಡ ನಾಡಿಗಾಗಿ ದೊಡ್ಡ ದೊಡ್ಡ ಕೆಲಸಗಳನ್ನು ಮಾಡಿದ್ದಾರೆ ಎಂದರು. ಸಂಗೀತ ಕಲಿಸಲು ಗುರುಕುಲ  ಎಂದು ಹೆಸರಿಟ್ಟು ರೊಕ್ಕ ಕೊಡೋದು, ರೊಕ್ಕ ತಗೋಳೋದು ಆರಂಭವಾಗಿದೆ. ವಿಶ್ವವಿದ್ಯಾನಿಲಯದೊಳಗೆ ಸಂಗೀತ ವಿಭಾಗ. ಅಲ್ಲಿಂದ ಯಾರು ಸಂಗೀತಗಾರರು ಹೊರ ಬಂದಿದಾರೆ, ಬಾಯಿ ತೆರೆದರೆ ಗೋವಿಂದ ಎಂದು ವಿಷಾದ ವ್ಯಕ್ತಪಡಿಸಿದರು.

 ದೇಶದ ವಿಶ್ವವಿದ್ಯಾನಿಲಯಗಳಿಂದ ಭಾಷಾ ಜ್ಞಾನ, ಇತಿಹಾಸ ಜ್ಞಾನಗಳೆಲ್ಲ ಕೆಳಗೆ ಧುಮುಕಿ ಬಿಟ್ಟಿವೆ. ಜಗತ್ತಿನಲ್ಲಿ ಕೇಳುವ ಹಾಗಿರುವ ಸಂಗೀತ ಕಲಿಸುವ ಕೆಲಸವಾಗಬೇಕು. ಈ ದೇಶದ ಸಂಗೀತವನ್ನು ಉಳಿಸಿಕೊಳ್ಳಬೇಕು. ಆ ಕುರಿತು ಯಾರಿಗೂ ಕಾಳಜಿಯಿಲ್ಲ. ಎಲ್ಲರಿಗೂ ರೊಕ್ಕದ ಮೇಲೆಯೇ ಗಮನ ಎಂದು ಬೇಸರ ವ್ಯಕ್ತಪಡಿಸಿದರು.  ಸಂಗೀತವನ್ನು ವಿದ್ವಾಂಸರಿಂದ ಪಡೆದು ಹೇಗೆ ಬೆಳೆಯಬೇಕು ಎಂಬುದರ ಕುರಿತು ಕಳಕಳಿಯಿಟ್ಟು ಬೆಳೆಯಬೇಕು. ಸಂಗೀತ ವಿಶ್ವವಿದ್ಯಾನಿಲಯಗಳು ಹೊಳೆಯುವ ಅಂದರೆ ಸಂಸ್ಕೃತಿಯನ್ನು, ಸಂಗೀತವನ್ನು ಉಳಿಸುವ ಬೆಳೆಸುವ ಸಂಗೀತಗಾರರನ್ನು ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹಂಪಿ ವಿವಿಯ ಕುಲಪತಿ ಡಾ.ಮಲ್ಲಿಕಾ ಎಸ್. ಘಂಟಿ ಪ್ರಶಸ್ತಿ ಪ್ರದಾನಿಸಿದರು. ಹಂಪಿ ವಿವಿ ಕಲುಸಚಿವ ಡಾ.ಡಿ.ಪಾಂಡುರಂಗಬಾಬು, ಅಧ್ಯಯನಾಂಗ ನಿರ್ದೇಶಕ ಡಾ.ಶಿವಾನಂದ ಎಸ್.ವಿರಕ್ತಮಠ,  ಕವಿ ಡಾ.ಸಿದ್ದಲಿಂಗಯ್ಯ, ಲಲಿತಕಲೆಗಳ ನಿಕಾಯ್ ಡೀನ್ ಡಾ.ಅಶೋಕ್ ಕುಮಾರ್ ರಂಜೇರೆ, ಸಮಾಜ ವಿಜ್ಞಾನಗಳ ನಿಕಾಯ್ ಡೀನ್ ಡಾ.ಮಂಜುನಾಥ್ ಬೇವಿನಕಟ್ಟಿ ಹಾಗೂ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ಮೈಸೂರಿನ ಸಂಗೀತ ಪ್ರೇಮಿಗಳು, ರಾಜೀವ್ ತಾರಾನಾಥ್ ಶಿಷ್ಯವೃಂದದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X