Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆವರಣಗೋಡೆ ಕುಸಿತ: ಮಹಿಳೆ ಮಣ್ಣಿನಡಿ...

ಆವರಣಗೋಡೆ ಕುಸಿತ: ಮಹಿಳೆ ಮಣ್ಣಿನಡಿ ಸಿಲುಕಿದ ಶಂಕೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ29 May 2018 7:10 PM IST
share
ಆವರಣಗೋಡೆ ಕುಸಿತ: ಮಹಿಳೆ ಮಣ್ಣಿನಡಿ ಸಿಲುಕಿದ ಶಂಕೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಮಂಗಳೂರು, ಮೇ 29: ನಗರದ ಕೆಪಿಟಿ ಉದಯನಗರ ಬಳಿ ಮನೆಯೊಂದರ ಹಿಂಬದಿಯ ಆವರಣಗೋಡೆ ಕುಸಿದು, ಮಹಿಳೆಯೊಬ್ಬರು ಸಿಲುಕಿಕೊಂಡಿರು ವುದಾಗಿ ಹೇಳಲಾಗಿದೆ.

ಉದಯನಗರದ ನಿವಾಸಿ ಕಮಲಾಕ್ಷ ಅವರ ಪತ್ನಿ 60ರ ಹರೆಯದ ಮೋಹಿನಿ ಎಂದು ಗುರುತಿಸಲಾಗಿದ್ದು, ಅಗ್ನಿಶಾಮಕದ ದಳದಿಂದ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ.

ಮೋಹಿನಿ ಅವರು ಎಂಟು ವರ್ಷಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರಿಂದ ಇಳಿಜಾರು ಪ್ರದೇಶದ ತಮ್ಮ ಮನೆಯಲ್ಲಿ ವಾಸಿಸುವುದನ್ನು ಬಿಟ್ಟು ಸನಿಹದಲ್ಲೇ, ತುಸು ಕೆಳಭಾಗದಲ್ಲಿದ್ದ ತಮ್ಮ ಅಣ್ಣನ ಮನೆಯಲ್ಲಿ ವಾಸಿಸುತ್ತಿದ್ದರು. ಅಪರೂಪಕ್ಕೊಮ್ಮೆ ಮಾತ್ರ ತಮ್ಮ ಸ್ವಂತ ಮನೆಗೆ ಹೋಗುತ್ತಿದ್ದರು. ಮಂಗಳವಾರ ಬೆಳಗ್ಗಿನಿಂದಲೇ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ, ಪರಿಶೀಲನೆಗೆಂದು ಬಂದಿದ್ದ ವೇಳೆ ಆವರಣಗೋಡೆ ಕುಸಿದು ಈ ದುರುಂತ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಮೋಹಿನಿ ಹಾಗೂ ಅವರ ಪತಿ ಕಮಲಾಕ್ಷ ಹಾಗೂ ತಂಗಿ ಗಿರಿಜಾಕ್ಷಿ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಹೃದಯ ಶಸ್ತ್ರ ಚಿಕಿತ್ಸೆಯ ಬಳಿಕ ಮೋಹಿನಿ ತನ್ನ ಅಣ್ಣನ ಮನೆಯಲ್ಲಿ ವಾಸಿಸುತ್ತಿದ್ದರಾದರೂ ಆಗಾಗ ಘಟನೆ ನಡೆದ ಮನೆಗೆ ಬರುತ್ತಿದ್ದರು. ಜೀವನೋಪಾಯಕ್ಕಾಗಿ ಅವರು ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದರು.

ಘಟನೆಗೆ ಸಾಕ್ಷಿಯಾಗಿದ್ದ ಮೋಹಿನಿ ಅವರ ತಂಗಿ ಗಿರಿಜಾಕ್ಷಿ ಕಣ್ಣೀರು ಸುರಿಸುತ್ತಾ, ‘‘ಮಳೆ ನೀರು ಶೌಚಾಲಯಕ್ಕೆ ನುಗ್ಗಿರುವುದನ್ನು ಕಂಡು ನಾವಿಬ್ಬರು, ಅದನ್ನು ತಡೆಯುವ ಕೆಲಸ ಮಾಡಿದೆವು. ನಾನಿದ್ದ ಜಾಗದಲ್ಲೇ ಅಕ್ಕ ನಿಂತಿದ್ದಳು. ಮಳೆ ತೀವ್ರವಾಗುತ್ತಿದ್ದುದನ್ನು ಗಮನಿಸಿ ಅಕ್ಕಳನ್ನು ಒಳ ಕರೆದು ನಾನೂ ಒಳಕ್ಕೆ ಹೋದೆ. ಆದರೆ,ಅಕ್ಕ ಮಾತ್ರ ಅಲ್ಲೇ ನಿಂತಿದ್ದು, ಕುಸಿದ ಮಣ್ಣಿನಡಿ ಸಿಲುಕಿದ್ದಾರೆ’’ ಎಂದು ಹೇಳುತ್ತಾರೆ.

ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇರಲಿಲ್ಲ

ಮಳೆ ನೀರು ಸರಾಗವಾಗಿ ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇರಲಿಲ್ಲ. ಹೀಗಾಗಿ, ಆವರಣ ಗೋಡೆ ಕುಸಿದಿದೆ. ಈ ಬಗ್ಗೆ ಮಹಾನಗರ ಪಾಲಿಕೆಗೆ ಹಲವು ಬಾರಿ ದೂರಿತ್ತರೂ ಸೂಕ್ತ ಚರಂಡಿ ವ್ಯವಸ್ಥೆ ಆಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X