ಯಶಸ್ವಿನಿ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಬೆಂಗಳೂರು, ಮೇ 29: ಯಶಸ್ವಿನಿ ಹಾಗೂ ಇತ್ತೀಚೆಗೆ ಜಾರಿಗೊಳಿಸಲಾದ ಆರೋಗ್ಯ ಕರ್ನಾಟಕ ಯೋಜನೆ ಕುರಿತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದರು.
ಈ ಯೋಜನೆಗಳಿಂದ ಬಡವರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಕುರಿತು ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಮಾಹಿತಿಯೊಂದಿಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಜಯ್‌ಸೇಠ್‌ಗೆ ಮುಖ್ಯಮಂತ್ರಿ ಸೂಚಿಸಿದರು.
ಸಭೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಎಂ.ಲಕ್ಷ್ಮಿನಾರಾಯಣ, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





