ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಹಿರಿಯ ಪೊಲೀಸ್ ಅಧಿಕಾರಿ

ಲಕ್ನೊ, ಮೇ 29: ಭಯೋತ್ಪಾದನೆ ನಿಗ್ರಹ ಪಡೆಯ (ಎಟಿಎಸ್) ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಕ್ನೊದಲ್ಲಿ ಮಂಗಳವಾರ ನಡೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಎಟಿಎಸ್‌ನಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ರಾಜೇಶ್ ಸಹನಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯಾಗಿದ್ದಾರೆ. ಪ್ರೊವಿನ್ಶಿಯಲ್ ಪೊಲೀಸ್ ಸರ್ವಿಸಸ್‌ನ 1992ರ ಬ್ಯಾಚ್‌ನ ಅಧಿಕಾರಿಯಾಗಿರುವ ರಾಜೇಶ್ ತನ್ನ ಮನೆಯಲ್ಲಿ ಮಧ್ಯಾಹ್ನ 12.45ರ ಸುಮಾರಿಗೆ ಸರ್ವಿಸ್ ರಿವಾಲ್ವರ್‌ನಿಂದ ತನ್ನ ಹಣೆಗೆ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಾಜೇಶ್ ಸಹನಿ ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಅತ್ಯಂತ ಭರವಸೆಯ ಅಧಿಕಾರಿಗಳಲ್ಲಿ ಒಬ್ಬರಾಗಿದ್ದರು ಎಂದು ಉತ್ತರ ಪ್ರದೇಶ ಡಿಜಿಪಿ ಒ.ಪಿ ಸಿಂಗ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
Next Story





