Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತಮ ಆಡಳಿತಕ್ಕಾಗಿ ಜೆಡಿಎಸ್‌ನೊಂದಿಗೆ...

ಉತ್ತಮ ಆಡಳಿತಕ್ಕಾಗಿ ಜೆಡಿಎಸ್‌ನೊಂದಿಗೆ ಮೈತ್ರಿ: ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ29 May 2018 10:19 PM IST
share
ಉತ್ತಮ ಆಡಳಿತಕ್ಕಾಗಿ ಜೆಡಿಎಸ್‌ನೊಂದಿಗೆ ಮೈತ್ರಿ: ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿಕೆ

ತುಮಕೂರು, ಮೇ. 29: ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ನೀಡುವ ದೃಷ್ಟಿಯಿಂದ ಸಂವಿಧಾನ ಬದ್ದವಾಗಿ ಜೆಡಿಎಸ್‌ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರಕಾರ ರಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದ ಸಿದ್ದಗಂಗಾ ಮಠಕ್ಕೆ ಉಪಮುಖ್ಯಮಂತ್ರಿ ಆದ ನಂತರ ಮಂಗಳವಾರ ಮೊದಲ ಭಾರಿಗೆ ಭೇಟಿ ನೀಡಿ ಡಾ.ಶ್ರೀ ಶಿವಕುಮಾರಸ್ವಾಮೀಜಿಗಳ ಆಶೀರ್ವಾದ ಪಡೆದು, ಮಾಧ್ಯಮದವರೊಂದಿಗೆ ಮಾತನಾಡಿದರು.

2008 ರಿಂದ 2013ರವರಗೆ ಉತ್ತಮ ಆಡಳಿತ ನೀಡಲು ವಿಫಲವಾಗಿದ್ದ ಬಿಜೆಪಿ ಸರಕಾರವನ್ನು ದೂರವಿಟ್ಟು, 2013ರಿಂದ 5 ವರ್ಷಗಳ ಕಾಲ ರೈತರ, ಕಾರ್ಮಿಕರ, ಬಡವರ ಅಭಿವೃದ್ದಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿ ನಂ.1 ಸ್ಥಾನಗಳಿಸಿದ್ದ ಕಾಂಗ್ರೆಸ್ ಜೆಡಿಎಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಇದರ ಬಗ್ಗೆ ಕೇಳಿ ಬರುವ ಟೀಕೆಗಳಿಗೆ ಕಿವಿಗೊಡುವ ಅಗತ್ಯವಿಲ್ಲ ಎಂದರು.

ಬಿಜೆಪಿಯೊಂದಿಗೆ ಕಾಂಗ್ರೆಸ್‌ನ ಯಾವ ಶಾಸಕರೂ ಸಂಪರ್ಕದಲ್ಲಿಲ್ಲ. ಇದು ಸತ್ಯಕ್ಕೆ ದೂರವಾದದ್ದು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವುದು ಸಹಜ. ಇದಕ್ಕೆ ಅನಗತ್ಯ ಅರ್ಥ ಕಲ್ಪಸುವ ಅಗತ್ಯ ಇಲ್ಲ ಎಂದು ನುಡಿದರು.

ತುಮಕೂರು ಜಿಲ್ಲೆಗೆ ಎತ್ತಿನಹೊಳೆ ಯೋಜನೆ ಸೇರಿದಂತೆ ಇನ್ನಿತರ ನೀರಾವರಿ ಯೋಜನೆಗಳ ಸೌಲಭ್ಯವನ್ನು ಕಲ್ಪಿಸಲು ಯೋಜನೆ ಹಾಕಿಕೊಳ್ಳಲಾಗುವುದು. ಸ್ಮಾರ್ಟ್‌ಸಿಟಿ, ಬಿದರಕಟ್ಟೆಯಲ್ಲಿ ತುಮಕೂರು ವಿವಿಗೆ ಮೂಲ ಸವಲತ್ತು ಕಲ್ಪಿಸುವುದು ಸೇರಿದಂತೆ ಮತ್ತಷ್ಟು ಅನುದಾನ ಬಿಡುಗಡೆ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಕಾರ್ಯಯೋಜನೆ ಕೈಗೊಳ್ಳಲಾಗುವುದು ಎಂದರು.

ಆಶೀರ್ವಾದ ಪಡೆದ ನಂತರ ಮಠದಲ್ಲಿ ಪರಮೇಶ್ವರ್ ಪತ್ನಿ ಕನ್ನಿಕಾಪರಮೇಶ್ವರ್‌ರೊಂದಿಗೆ ಊಟ ಸವಿದರು.ಈ ವೇಳೆ ಸಂಸದ ಮುದ್ದಹನುಮೇಗೌಡ, ಮಾಜಿ ಶಾಸಕ ಡಾ.ರಫೀಕ್ ಅಹಮದ್ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X