ಆರು ವರ್ಷದ ಬಾಲಕಿಯ ಅತ್ಯಾಚಾರ: ಆರೋಪಿಯ ಬಂಧನ

ದತಿಯ (ಮ.ಪ್ರ), ಮೇ 29: ಆರು ವರ್ಷದ ಬಾಲಕಿಯನ್ನು ಅತ್ಯಾಚಾರಗೈದ ಘಟನೆ ಮಧ್ಯಪ್ರದೇಶದ ತರೆಟ್ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಆರೋಪಿ ಮೋತಿಲಾಲ್ ಅಹಿರ್ವಾರ್ (25)ನನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದ ಆರೋಪಿ ಅದೇ ಮದುವೆಗೆ ಹೆತ್ತವರ ಜೊತೆ ಆಗಮಿಸಿದ್ದ ಬಾಲಕಿಯ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಮಂಗಳವಾರ ಮುಂಜಾನೆ ಬಾಲಕಿಯನ್ನು ಹತ್ತಿರದ ಸರಕಾರಿ ಶಾಲಾ ಕಟ್ಟಡದ ಸಮೀಪಕ್ಕೆ ಕೊಂಡೊಯ್ದ ಆರೋಪಿ ಆಕೆಯ ಅತ್ಯಾಚಾರ ಎಸಗಿದ್ದ. ಬಾಲಕಿಯು ನಾಪತ್ತೆಯಾಗಿರುವುದನ್ನು ಕಂಡು ಆಕೆಯ ಹೆತ್ತವರು ಮತ್ತು ಸಂಬಂಧಿಕರು ಹುಡುಕಾಟ ನಡೆಸುತ್ತಾ ಶಾಲೆಯ ಸಮೀಪಕ್ಕೆ ಬಂದಾಗ ಅಲ್ಲಿ ಶೌಚಾಲಯದ ಒಳಗೆ ಆರೋಪಿ ಬಾಲಕಿಯನ್ನು ಲೈಂಗಿಕವಾಗಿ ಶೋಷಿಸುತ್ತಿರುವುದು ಕಂಡುಬಂದಿದೆ. ಆಕ್ರೋಶಗೊಂಡ ಸ್ಥಳೀಯರು ಆರೋಪಿಗೆ ಥಳಿಸಿ ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.





