Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕದನವಿರಾಮ ಒಪ್ಪಂದ ಉಲ್ಲಂಘನೆಯಾಗದಂತೆ...

ಕದನವಿರಾಮ ಒಪ್ಪಂದ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಉಭಯ ದೇಶಗಳ ನಿರ್ಧಾರ

ಭಾರತ-ಪಾಕ್ ಸೇನೆ ನಡುವೆ ಹಾಟ್‌ಲೈನ್ ಸಂಪರ್ಕ

ವಾರ್ತಾಭಾರತಿವಾರ್ತಾಭಾರತಿ29 May 2018 11:29 PM IST
share
ಕದನವಿರಾಮ ಒಪ್ಪಂದ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಉಭಯ ದೇಶಗಳ ನಿರ್ಧಾರ

ಇಸ್ಲಾಮಾಬಾದ್,ಮೇ 29: ಉಭಯದೇಶಗಳ ನಡುವೆ ವಿಶ್ವಾಸ ವರ್ಧನೆಯ ಕಾರ್ಯತಂತ್ರವಾಗಿ ಭಾರತ ಹಾಗೂ ಪಾಕಿಸ್ತಾನದ ಸೇನೆಗಳು, 2003ರ ಕದನವಿರಾಮ ಒಪ್ಪಂದವನ್ನು ಗಡಿಯಲ್ಲಿ ಮರುಸ್ಥಾಪಿಸಲು ನಿರ್ಧರಿಸಿವೆ.

     ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಹಾಗೂ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವೆ ವಿಶೇಷ ಹಾಟ್‌ಲೈನ್ ಸಂಪರ್ಕವನ್ನು ಸ್ಥಾಪಿಸಲಾಗಿದೆಯೆಂದು ಪಾಕಿಸ್ತಾನ ಸೇನೆಯು ಮಂಗಳವಾರ ತಿಳಿಸಿದೆ. 2003ರಲ್ಲಿ ಎರಡು ದೇಶಗಳ ನಡುವೆ ಏರ್ಪಟ್ಟ ಕದನವಿರಾಮ ಒಪ್ಪಂದವನ್ನು ಮಾತು ಹಾಗೂ ಕೃತಿಯಲ್ಲಿ ಸಂಪೂರ್ಣವಾಗಿ ಜಾರಿಗೆ ತರಲು ಭಾರತ ಹಾಗೂ ಪಾಕ್ ಸೇನೆಗಳ ಡಿಜಿಎಂಓಗಳು ಸಮ್ಮತಿ ಸೂಚಿಸಿದ್ದಾರೆಂದು ಪಾಕ್ ಸೇನೆಯ ಅಂತರ್‌ಸೇವಾ ಸಾರ್ವಜನಿಕ ಸಂಪರ್ಕಗಳ ಇಲಾಖೆ (ಐಎಸ್‌ಪಿಆರ್)ನ ಮಾಧ್ಯಮ ವಿಭಾಗವು ಹೇಳಿಕೆಯಲ್ಲಿ ತಿಳಿಸಿದೆ. ಇನ್ನು ಮುಂದೆ, ಎರಡೂ ಕಡೆಗಳಿಂದಲೂ ಕದನವಿರಾಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಅವರು ನಿರ್ಧರಿಸಿದ್ದಾರೆಂದು ಹೇಳಿಕೆ ತಿಳಿಸಿದೆ.

ಒಂದು ವೇಳೆ ಗಡಿಯಲ್ಲಿ ಯಾವುದೇ ವಿವಾದ್ಯ ತಲೆದೋರಿದಲ್ಲಿ ಗರಿಷ್ಠ ಸಂಯಮವನ್ನು ಪಾಲಿಸಲಾಗುವುದು ಹಾಗೂ ಅವುಗಳನ್ನು ಹಾಟ್‌ಲೈನ್ ಸಂಪರ್ಕಗಳ ಮೂಲಕ ಹಾಗೂ ಸ್ಥಳೀಯ ಕಮಾಂಡರ್‌ಗಳ ಮಟ್ಟದಲ್ಲಿ ಧ್ವಜಸಭೆಗಳನ್ನು ನಡೆಸುವುದು ಸೇರಿದಂತೆ ಈಗ ಚಾಲ್ತಿಯಲ್ಲಿರುವ ಕಾರ್ಯತಂತ್ರಗಳ ಮೂಲಕ ಬಗೆಹರಿಸಲಾಗುವುದೆಂದು ಐಎಸ್‌ಪಿಆರ್ ಹೇಳಿಕೆ ತಿಳಿಸಿದೆ.

ಭಾರತದ ಗೃಹ ಸಚಿವಾಲಯದಲ್ಲಿ ಲಭ್ಯವಿರುವ ದಾಖಲೆಗಳ ಪ್ರಕಾರ ಈ ವರ್ಷದ ಮೊದಲ ಐದು ತಿಂಗಳುಗಳಲ್ಲಿ ಭಾರತ-ಪಾಕ್ ಗಡಿಯಲ್ಲಿ 1250ಕ್ಕೂ ಅಧಿಕ ಕದನವಿರಾಮ ಉಲ್ಲಂಘನೆಯ ಘಟನೆಗಳು ವರದಿಯಾಗಿದ್ದವು. 2017ರಲ್ಲಿ 971 ಹಾಗೂ 2016ರಲ್ಲಿ 449 ಮತ್ತು 2015ರಲ್ಲಿ 405 ಕದನವಿರಾಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X