Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕರ್ನಾಟಕದ ಸಮಾಜವಾದಿ ಚಳವಳಿಯ ಕೊನೆಯ ನಾಯಕ...

ಕರ್ನಾಟಕದ ಸಮಾಜವಾದಿ ಚಳವಳಿಯ ಕೊನೆಯ ನಾಯಕ ಸಿದ್ದರಾಮಯ್ಯ

ಪುರುಷೋತ್ತಮ ಬಿಳಿಮಲೆಪುರುಷೋತ್ತಮ ಬಿಳಿಮಲೆ30 May 2018 12:27 AM IST
share
ಕರ್ನಾಟಕದ ಸಮಾಜವಾದಿ ಚಳವಳಿಯ ಕೊನೆಯ ನಾಯಕ ಸಿದ್ದರಾಮಯ್ಯ

ಪುರುಷೋತ್ತಮ ಬಿಳಿಮಲೆ ಸ್ವಾತಂತ್ರ್ಯೋತ್ತರ ಭಾರತವು ಸಾಮಾಜಿಕ ನ್ಯಾಯಕ್ಕಾಗಿ ನಿರಂತರವಾಗಿ ಹೋರಾಡುತ್ತಲೇ ಬಂದಿದೆ. ಅನೇಕ ಅಡ್ಡಿ ಆತಂಕಗಳ ನಡುವೆ ನಿರೀಕ್ಷಿಸಿದ ಸಾಧನೆ ಆಗಿಲ್ಲವಾದರೂ ಅದರ ಪರವಾದ ಒಂದು ಧ್ವನಿಯನ್ನು ಅದು ಎಂದೂ ಬಿಟ್ಟುಕೊಟ್ಟಿಲ್ಲ. ಈ ವಿಷಯದಲ್ಲಿ ಕರ್ನಾಟಕವು ಭಾರತದ ಇತರ ರಾಜ್ಯಗಳಿಂದ ತುಂಬ ಮುಂದಿದೆ.

ವಚನ ಚಳವಳಿಯು ಸಾಮಾಜಿಕ ನ್ಯಾಯದ ಕೂಗಿಗೆ ಭದ್ರವಾದ ತಳಹದಿಯನ್ನು 12ನೇ ಶತಮಾನದಷ್ಟು ಹಿಂದೆಯೇ ಕರ್ನಾಟಕದಲ್ಲಿ ಹಾಕಿಕೊಟ್ಟಿತು. ಜಾತಿಯ ವಿಷಮತೆ, ಲಿಂಗಾಧರಿತ ಸಮಾಜದ ಅಮಾನುಷತೆ ಮತ್ತು ಧಾರ್ಮಿಕ ಡಾಂಭಿಕತೆಗಳ ವಿರುದ್ಧ ಅವರು ಎತ್ತಿದ ಪ್ರಶ್ನೆಗಳು ಈಗಲೂ ಪ್ರಸ್ತುತ.

ಬಳ್ಳಾರಿಯ ಪಾಳೇಗಾರರ ಹೋರಾಟ, ಸುಳ್ಯದ ಕಲ್ಯಾಣಪ್ಪನ ಹೋರಾಟ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಅಂಕೋಲದ ಉಪ್ಪಿನ ಸತ್ಯಾಗ್ರಹ, ಕಾಗೋಡು ಸತ್ಯಾಗ್ರಹ, ಸಂಡೂರು ಚಳವಳಿ, ನರಗುಂದ ರೈತ ಹೋರಾಟ, ಕರ್ನಾಟಕ ರಾಜ್ಯ ರೈತ ಸಂಘ ನಡೆಸಿದ ಚಳವಳಿ ಇತ್ಯಾದಿಗಳು ಕರ್ನಾಟಕದ ಸಾಮಾಜಿಕ ಬದ್ಧತೆಯನ್ನು ದೇಶಕ್ಕೆ ಹಾಗೂ ವಿಶ್ವಕ್ಕೆ ಪಸರಿಸಿದ ಅನುಪಮ ಘಟನೆಗಳು.

ಮೈಸೂರು ಅರಸರ ಆಳ್ವಿಕೆಯ ಕಾಲದಲ್ಲಿ 1851ರಷ್ಟು ಹಿಂದೆ ಆರಂಭವಾದ ಹಿಂದುಳಿದ ವರ್ಗದವರ ಚಳವಳಿ ಬೇರೆ ಬೇರೆ ಅವಸ್ಥಾಂತರಗಳನ್ನು ಹೊಂದುತ್ತಾ ಇವತ್ತಿನವರೆಗೆ ನಡೆದು ಬಂದಿದೆ. ದಲಿತರು ಅನೇಕ ವೈರುಧ್ಯಗಳ ನಡುವೆಯೂ ನಿರಂತರವಾಗಿ ತಮ್ಮ ಹೋರಾಟಗಳನ್ನು ರೂಪಿಸುತ್ತಲೇ ಬಂದಿದ್ದಾರೆ.

1918ರಲ್ಲಿ ರಚಿತವಾದ ಸರ್ ಲೆಸ್ಲಿ ಮಿಲ್ಲರ್ ಕಮಿಟಿಯಿಂದ ಶುರು ಆದ (ನಾಗನ ಗೌಡ ಸಮಿತಿ, ಹಾವನೂರು ವರದಿ, ಚಿನ್ನಪ್ಪ ರೆಡ್ಡಿ ಸಮಿತಿ, ವೆಂಕಟಸ್ವಾಮಿ ಸಮಿತಿ, ನ್ಯಾಯಮೂರ್ತಿ ಸದಾಶಿವ ಆಯೋಗ, ನಾಗಮೋಹನ್ ದಾಸ್ ಸಮಿತಿ ಇತ್ಯಾದಿ) ಅನೇಕ ಸಮಿತಿಗಳು ಕಾಲಕಾಲಕ್ಕೆ ಸಮಾಜದ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ತಮ್ಮ ವರದಿಗಳನ್ನು ನೀಡಿ ಸಾಮಾಜಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿವೆ.

19ನೇ ಶತಮಾನದ ಉತ್ತರಾರ್ಧದಲ್ಲಿ ಕಾಣಿಸಿಕೊಂಡು, 20ನೇ ಶತಮಾನದಾದ್ಯಂತ ವಿಸ್ತರಿಸಿಕೊಂಡ ಕರ್ನಾಟಕ ಏಕೀಕರಣ ಚಳವಳಿಯು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಬಹುದೊಡ್ಡ ಕಾಣಿಕೆ ನೀಡಿದೆ. ಕರಾವಳಿಯನ್ನು ಹೊರತು ಪಡಿಸಿದರೆ ಬಹುತೇಕ ಕರ್ನಾಟಕವನ್ನು ಒಂದುಗೂಡಿಸಿದ ಇನ್ನೊಂದು ಚಳವಳಿಯೆಂದರೆ ಗೋಕಾಕ ಚಳವಳಿ. ಸರೋಜಿನಿ ಮಹಿಷಿ ವರದಿಯಿಂದ ಬರಗೂರು ರಾಮಚಂದ್ರಪ್ಪ ವರದಿವರೆಗೆ ಅನೇಕ ವರದಿಗಳು ಕನ್ನಡವನ್ನು ಬಲಗೊಳಿಸಲು ಅನೇಕ ಶಿಫಾರಸುಗಳನ್ನು ಸರಕಾರಕ್ಕೆ ತಲುಪಿಸಿವೆ.

ಆದರೆ ಕಳೆದ ಕೆಲವು ವರ್ಷಗಳಿಂದ ಚಳವಳಿಗಳ ದಿಕ್ಕು ದಿಶೆ ಬದಲಾಗಿದೆ. ಅಯೋಧ್ಯಾ ಚಳವಳಿ, ಬಾಬಾ ಬುಡಾನ್ ಗಿರಿ ಚಳವಳಿ, ಟಿಪ್ಪೂ ವಿರುದ್ಧ ಚಳವಳಿ, ಮುಷ್ಟಿ ಅಕ್ಕಿ ಚಳವಳಿಗಳಂಥ ಧರ್ಮ ಮತ್ತು ರಾಜಕೀಯಾಧರಿತ ಚಳವಳಿಗಳು ಸುದೀರ್ಘ ಇತಿಹಾಸವಿರುವ ಸಾಮಾಜಿಕ ಚಳವಳಿಗಳನ್ನು ಹಿಂದೆ ತಳ್ಳಿವೆ.

ಇಂದಿನ ಭಾರತದ ಪ್ರಜಾಪ್ರಭುತ್ವವು ಭ್ರಷ್ಟಾಚಾರಿಗಳನ್ನು ಸಂರಕ್ಷಿಸುವ, ಕೊಲೆಗಡುಕರನ್ನು ಅಧಿಕಾರಕ್ಕೆ ತರುವ, ಲೇಖಕ ಬರಹಗಾರರನ್ನು ಅವಮಾನಿಸುವ, ನೈಜ ಹೋರಾಟಗಾರರನ್ನು ತಿರಸ್ಕರಿಸಿ, ಹುಸಿ ಹೋರಾಟಗಾರರನ್ನು ಬೆಂಬಲಿಸುವ ಪ್ರಹಸನಕ್ಕೆ ಎಡೆಮಾಡಿಕೊಡುತ್ತಿದೆ.
 ಅಂಬೇಡ್ಕರ್ ಅವರು ಇಂತಹ ಬೆಳವಣಿಗೆಯನ್ನು 1930ರ ದಶಕದಲ್ಲಿಯೇ ಊಹಿಸಿದ್ದರು. ಇಂಥ ದಯನೀಯ ಸಂದರ್ಭದಲ್ಲಿ ಹೋರಾಟದಿಂದ ಪಡೆದ ರಾಜ್ಯಾಧಿಕಾರವನ್ನು ಜನರ ಕಲ್ಯಾಣಕ್ಕೆ ಬಳಸಿದ ಬಹುಶಃ ಕೊನೆಯ ಸಮಾಜವಾದಿ ನಾಯಕ ಸಿದ್ದರಾಮಯ್ಯನವರೆಂದು ತೋರುತ್ತದೆ.
ಅವರಿಗೆ ಸಮಾಜವಾದಿ ಚಳವಳಿಯ ಹಿನ್ನೆಲೆಯಿತ್ತು. ಕನ್ನಡ ಭಾಷೆಯಂತಹ ಪ್ರಾದೇಶಿಕ ಭಾಷೆಗಳ ಬಗ್ಗೆ ಒಲವಿತ್ತು. ಹಿಂದುಳಿದ ವರ್ಗಗಳ ಬಗ್ಗೆ ಅನುಭವಾಧರಿತ ಮತ್ತು ಅಧ್ಯಯನಾಧರಿತ ತಿಳುವಳಿಕೆಯಿತ್ತು. ಕೃತಕ ನಯನಾಜೂಕಿನ ಅನೇಕರಿಗಿಂತ ಅವರ ಒರಟುತನ ನನಗೆ ಹೆಚ್ಚು ಇಷ್ಟವಾಗಿದೆ.

ರಾಜಕೀಯ ಮತ್ತೆ ಮುಂದುವರಿಯುತ್ತದೆ. ಹೊಸ ನಾಯಕರು ಆವಿರ್ಭವಿಸುತ್ತಾರೆ. ಆದರೆ ಸಿದ್ದರಾಮಯ್ಯರಂಥ ನಾಯಕ ನಮಗೆ ಸಿಗಲು ಕರ್ನಾಟಕ ಬಹಳ ಕಾಲ ಕಾಯಬೇಕಾದೀತು.
ಒಬ್ಬ ಕನ್ನಡಿಗನಾಗಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು ನನ್ನ ಕರ್ತವ್ಯ.

share
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ
Next Story
X