Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ...

ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ವಿಚಾರ: ಬಿಬಿಎಂಪಿ ಆಯುಕ್ತರ ಆದೇಶಕ್ಕೆ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ30 May 2018 8:47 PM IST
share
ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ವಿಚಾರ: ಬಿಬಿಎಂಪಿ ಆಯುಕ್ತರ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಮೇ 30: ಗಿರಿನಗರದ ನಿವೇಶನವೊಂದರಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಮತ್ತು ಖಾತೆ ನೋಂದಣಿಗೆ ಕೋರಿ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಬಿಬಿಎಂಪಿ ಆಯುಕ್ತರ ಆದೇಶಕ್ಕೆ ಹೈಕೋರ್ಟ್ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿಬಿಎಂಪಿ ಆಯುಕ್ತರ ಆದೇಶ ಪ್ರಶ್ನಿಸಿ ರಾಮಚಂದ್ರಾಪುರ ಮಠ ಮತ್ತು ರಾಘವೇಶ್ವರ ಭಾರತೀ ಸ್ವಾಮೀಜಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ಬಿಬಿಎಂಪಿ ಆಯುಕ್ತರ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಅಲ್ಲದೆ, ಬಿಬಿಎಂಪಿ, ನಗರ ಯೋಜನೆ ಸಹಾಯಕ ನಿರ್ದೇಶಕರು (ಬೆಂಗಳೂರು ದಕ್ಷಿಣ) ದೂರುದಾರ ಎಂ.ಪವನ್ ಪ್ರಸಾದ್‌ಗೆ ತುರ್ತು ನೋಟಿಸ್ ಜಾರಿ ಮಾಡಿದರು.

ಈ ಮಧ್ಯೆ ಜಾಗದ ಒಡೆತನದ ಬಗ್ಗೆ ಬಿಬಿಎಂಪಿ ಆಯುಕ್ತರು ತೀರ್ಮಾನ ಕೈಗೊಂಡಿರುವ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಭೂಮಿಯ ಒಡೆತನದ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರ ಬಿಬಿಎಂಪಿ ಆಯುಕ್ತರಿಗೆ ಇಲ್ಲ. ಆದರೂ ಅವರು ಭೂಮಿಯ ಒಡೆತನದ ಬಗ್ಗೆ ತೀರ್ಮಾನಿಸಿದ್ದಾರೆ. ಐಎಎಸ್ ಅಧಿಕಾರಿಯಾದ ಮಾತ್ರಕ್ಕೆ ಸಿವಿಲ್ ಕೋರ್ಟ್‌ನ ಅಧಿಕಾರ ಚಲಾಯಿಸಬಹುದೇ? ಆ ಅಧಿಕಾರವನ್ನು ಆಯುಕ್ತರಿಗೆ ಕೊಟ್ಟವರು ಯಾರು? ಎಂದು ಹೈಕೋರ್ಟ್ ಖಾರವಾಗಿ ಪ್ರಶ್ನಿಸಿ ಮೇಲಿನಂತೆ ಮಧ್ಯಂತರ ಆದೇಶ ಹೊರಡಿಸಿತು.

ಪ್ರಕರಣವೇನು: ಗಿರಿನಗರದಲ್ಲಿ ರಾಮಚಂದ್ರಾಪುರ ಮಠವು ನಿವೇಶನ ಖರೀದಿಸಿತ್ತು. ಈ ನಿವೇಶನದಲ್ಲಿ ಕಟ್ಟಡ ನಿರ್ಮಾಣ ಮಾಡಲು ಬಿಬಿಎಂಪಿ 2010ರಲ್ಲಿ ಮಠಕ್ಕೆ ನಕ್ಷೆ ಮಂಜೂರಾತಿ ನೀಡಿತ್ತು. ಆದರೆ, ಹಾಲಿ ಕಟ್ಟಡವನ್ನು ನೆಲಸಮಗೊಳಿಸಿ ಮೂರು ಮಹಡಿಯ ಕಟ್ಟಡ ನಿರ್ಮಾಣ ಮಾಡಲು ನಕ್ಷೆ ಮಂಜೂರಾತಿ ನವೀಕರಿಸಿಕೊಡಲು ಮಠವು ಬಿಬಿಎಂಪಿಗೆ ಮನವಿ ಮಾಡಿತ್ತು.

ಆದರೆ, ಮಠವು ಪಾರ್ಕ್ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಿದೆ ಎಂದು ತಿಳಿಸಿದ್ದ ಬಿಬಿಎಂಪಿಯು, ಮಠಕ್ಕೆ ನೀಡಲಾಗಿದ್ದ ನಕ್ಷೆ ಮಂಜೂರಾತಿಯನ್ನು ರದ್ದುಪಡಿಸಿತ್ತು. ಈ ಆದೇಶ ಪ್ರಶ್ನಿಸಿ ಮಠವು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಿ ತೀರ್ಮಾನಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿತ್ತು. ಅದರಂತೆ ನಕ್ಷೆ ಮಂಜೂರಾತಿ ಮತ್ತು ಖಾತೆ ನೋಂದಣಿಗೆ ಕೋರಿ ರಾಮಚಂದ್ರಾಪುರ ಮಠ ಬಿಬಿಎಂಪಿಗೆ ಅರ್ಜಿ ಸಲ್ಲಿಸಿದ್ದು, ಅದನ್ನು ಆಯುಕ್ತರು ಈಚೆಗೆ ವಜಾಗೊಳಿಸಿದ್ದರು.

ವಿಶ್ವಭಾರತಿ ಗೃಹ ನಿರ್ಮಾಣ ಸಂಘದಿಂದ ಈ ನಿವೇಶನವನ್ನು 1979ರಲ್ಲಿ ಖರೀದಿಸಿರುವುದಾಗಿ ಮಠ ಹೇಳಿದೆ. ಅದಾದ 31 ವರ್ಷದ ಬಳಿಕ ಸಿಎ ನಿವೇಶನದ ಖಾತೆ ನೋಂದಣಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದೆ. ಹಾಗೂ ಬಿಡಿಎನಿಂದ ನಿರಾಕ್ಷೇಪಣಾ ಪತ್ರ ಪಡೆಯಲು 1985ರ ಎಪ್ರಿಲ್ 6ರ ದಿನಾಂಕ ಹೊಂದಿದ್ದ ಒಂದು ಪುಟದ ಆದೇಶವನ್ನು ಕಾನೂನುಬಾಹಿರವಾಗಿ ಸೃಷ್ಟಿಸಿದೆ. ಅದರ ಮೂಲ ದಾಖಲೆಗಳು ಬಿಡಿಎ ಬಳಿ ಇಲ್ಲ. ನಿವೇಶನವನ್ನು ತಾನು ಮಂಜೂರು ಸಹ ಮಾಡಿಲ್ಲ ಎಂದು ಬಿಡಿಎ ಹೇಳಿದೆ. ಇನ್ನು ಈ ನಿವೇಶನವು ಇದು ನಾಗರಿಕ ಸೌಲಭ್ಯಕ್ಕೆ ಮೀಸಲಿಟ್ಟಿದ್ದಾಗಿದೆ ಎಂದು ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದರು. ಇದರಿಂದ ಮಠ ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಆಯುಕ್ತರ ಆದೇಶ ರದ್ದಪಡಿಸಬೇಕು ಹಾಗೂ ತಮಗೆ ನಕ್ಷೆ ಮಂಜೂರಾತಿ ನೀಡಲು ನಿರ್ದೇಶಿಸಬೇಕು ಎಂದು ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X